ಮೈಸೂರು, (ಫೆ.17): ಭಿಕ್ಷುಕಿಗೆ ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ ಎಸಗಿ ಬಳಿಕ ಅಮಾನುಷವಾಗಿ ಕೊಲೆ ಮಾಡಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ರಫಿಕ್ (26),ಮಂಜುನಾಥ್ (23), ಕೃಷ್ಣ (4O),ಮನು (23),ರೇವಣ್ಣ(20). ಬಂಧಿತ ಆರೋಪಿಗಳು ಎಂದು ಹೇಳಲಾಗಿದೆ. ಪರಾರಿಯಾಗಿರುವ ಮತ್ತೊಬ್ಬನ ಬಂಧನಕ್ಕೆ ಮೈಸೂರು ಲಷ್ಕರ್ ಠಾಣೆ ಪೊಲೀಸರು ಬಲೆ ಬೀಸಿದ್ದಾರೆ.

ಮೈಸೂರು: ಬೀದಿ ನಾಯಿ ಮೇಲೆ ಅತ್ಯಾಚಾರ ಎಸಗಿದ ವಿಕೃತ ಕಾಮಿ

ಮಹಿಳೆ ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದು, ಫೆಬ್ರವರಿ 15 ರಂದು ರಾತ್ರಿ ಮೈಸೂರಿನ ಕೆಟಿ ಸ್ಟ್ರೀಟ್ ಸಮೀಪ ಆಕೆಗೆ ಮದ್ಯ ಕುಡಿಸಿದ ಆರೋಪಿಗಳು ಸಾಮೂಹಿಕ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾರೆ.

ಘಟನ ಸ್ಥಳದ ಸಿಸಿ ಕ್ಯಾಮರ ಪರಿಶೀಲನೆ ನಂತರ ಈ ಪ್ರಕರಣ ಬೆಳಕಿಗೆ ಬಂದಿದ್ದು, ಘಟನೆಯ  ಸಿಸಿ ಕ್ಯಾಮರಾದ ದೃಶ್ಯಗಳನ್ನು ಆಧರಿಸಿ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ