ಕೆಪಿಟಿಸಿಎಲ್‌ ಪರೀಕ್ಷೆಯಲ್ಲಿ ಅಕ್ರಮ: ಮತ್ತೊಬ್ಬ ಸೆರೆ, ಬಂಧಿತರು 14ಕ್ಕೇರಿಕೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)ದಿಂದ ಕೆಪಿಟಿಸಿಎಲ್‌ ಕಿರಿಯ ಅಭಿಯಂತರ (ಜೆಇ)ಗೆ ಇತ್ತೀಚೆಗೆ ನಡೆದ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿ ಮತ್ತೊಬ್ಬ ಆರೋಪಿಯನ್ನು ಶನಿವಾರ ಬಂಧಿಸಲಾಗಿದ್ದು, ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 14ಕ್ಕೇರಿದೆ. 

Belagavi Kptcl Exam Scam Case Police Arrested Another Accused gvd

ಬೆಳಗಾವಿ (ಸೆ.04): ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)ದಿಂದ ಕೆಪಿಟಿಸಿಎಲ್‌ ಕಿರಿಯ ಅಭಿಯಂತರ (ಜೆಇ)ಗೆ ಇತ್ತೀಚೆಗೆ ನಡೆದ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿ ಮತ್ತೊಬ್ಬ ಆರೋಪಿಯನ್ನು ಶನಿವಾರ ಬಂಧಿಸಲಾಗಿದ್ದು, ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 14ಕ್ಕೇರಿದೆ. ಗೋಕಾಕ ತಾಲೂಕಿನ ಅರಂಬಾವಿಯ ಗಿರಿಯಪ್ಪ ಅಲಿಯಾಸ್‌ ಗಿರೀಶ್‌ ಫಕೀರಪ್ಪ ಬನಾಜ್‌ (22) ಬಂಧಿತ. ವೃತ್ತಿಯಲ್ಲಿ ಜ್ಯೂನಿಯರ್‌ ಲೈನ್‌ಮ್ಯಾನ್‌ ಆಗಿ ಸೇವೆ ಸಲ್ಲಿಸುತ್ತಿದ್ದ ಈತ ಹುಕ್ಕೇರಿ ತಾಲೂಕಿನ ಶಿರಹಟ್ಟಿಬಿ.ಕೆ.ಗ್ರಾಮದಲ್ಲಿ ಪ್ರಶ್ನೆಗಳಿಗೆ ಉತ್ತರಗಳನ್ನು ತಯಾರಿಸಿ ಅಭ್ಯರ್ಥಿಗಳಿಗೆ ಅದನ್ನು ಹೇಳಲು ನೆರವು ನೀಡಿದ್ದ ಎಂಬ ಆರೋಪದಡಿ ಪೊಲೀಸರು ಬಂಧಿಸಿದ್ದಾರೆ.

ಜಾಮೀನು ಅರ್ಜಿ ತಿರಸ್ಕೃತ: ಏತನ್ಮಧ್ಯೆ, ಪ್ರಕರಣದಲ್ಲಿ ಬಂಧಿತ ಐವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಗೋಕಾಕದ 12ನೇ ಅಡಿಷನಲ್‌ ಸೆಷನ್‌ ಕೋರ್ಟ್‌ ಶನಿವಾರ ತಿರಸ್ಕರಿಸಿದೆ. ಬಂಧಿತರ ಪೈಕಿ ಪ್ರಮುಖ ಆರೋಪಿಗಳಾದ ಗೋಕಾಕ ತಾಲೂಕಿನ ಸಿದ್ದಪ್ಪ ಕೆಂಪಣ್ಣ ಮದಿಹಳ್ಳಿ, ಮಾಲದಿನ್ನಿ ಗ್ರಾಮದ ಸುನೀಲ ಅಜಪ್ಪ ಭಂಗಿ, ಬೆನಚಿನಮರಡಿ ಗ್ರಾಮದ ಸಿದ್ದಪ್ಪ ಕೆಂಪಣ್ಣ ಕೊತ್ತಲ, ವೀರನಗಡ್ಡಿ ಗ್ರಾಮದ ಸಂತೋಷ್‌ ಪ್ರಕಾಶ್‌ ಮಾನಗಾಂವಿ, ಮಾಲದಿನ್ನಿ ಗ್ರಾಮದ ರೇಣುಕಾ ವಿಠ್ಠಲ ಜವಾರಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು.

ಕೆಪಿಟಿಸಿಎಲ್‌ ಅಕ್ರಮ: ಬಂಧಿತರ ಸಂಖ್ಯೆ 13ಕ್ಕೇ ಏರಿಕೆ

ಮತ್ತೊಬ್ಬ ಪ್ರಮುಖ ಆರೋಪಿ ಸೆರೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)ಯಿಂದ ಕೆಪಿಟಿಸಿಎಲ್‌ ಕಿರಿಯ ಅಭಿಯಂತರ (ಜೆಇ)ಗೆ ನಡೆಸಲಾಗಿರುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ಬೆಳಗಾವಿ ಪೊಲೀಸರು ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣಕ್ಕೆ ಸಂಬಂಧಿಸಿದಂತೆ 13 ಜನರನ್ನು ಬಂಧಿಸಿದ್ದಾರೆ. ಗೋಕಾಕ ತಾಲೂಕಿನ ಸಂಜೀವ ಲಕ್ಷ್ಮಣ ಬಂಡಾರಿ ಬಂಧಿತ ಪ್ರಮುಖ ಆರೋಪಿ. 

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆ.7ರಂದು ನಡೆದ ಕೆಪಿಟಿಸಿಎಲ್‌ನ ಕಿರಿಯ ಅಭಿಯಂತರ (ಜೆಇ) ನೇಮಕಾತಿ ಪರೀಕ್ಷೆ ಸಮಯದಲ್ಲಿ ಗೋಕಾಕ ನಗರದ ಜೆಎಸ್‌ಎಸ್‌ ಪಪೂ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಪ್ರಮುಖ ಆರೋಪಿ ಸಿದ್ದಪ್ಪ ಕೆಂಪಣ್ಣ ಮದಿಹಳ್ಳಿ ಎಂಬಾತ ಸ್ಮಾರ್ಚ್‌ ವಾಚ್‌ನ ಕ್ಯಾಮೆರಾ ಮೂಲಕ ಪ್ರಶ್ನೆಪತ್ರಿಕೆಯನ್ನು ಫೋಟೊ ತೆಗೆದು ಟೆಲಿಗ್ರಾಂ ಮೂಲಕ ತನ್ನ ಗೆಳೆಯನಾಗಿರುವ ಸಂಜೀವ ಬಂಡಾರಿಗೆ ರವಾನಿಸಿದ್ದ. ಈ ಪ್ರಶ್ನೆ ಪತ್ರಿಕೆ ಪಡೆದ ಸಂಜೀವ ಬಂಡಾರಿ ಅಕ್ರಮ ಮಾಡಲು ಗ್ಯಾಂಗ್‌ ಮೂಲಕ ವ್ಯವಸ್ಥಿತ ಸಂಚು ರೂಪಿಸಿದ್ದನು.

ಪ್ರಮುಖ ಆರೋಪಿ ಸಿದ್ದಪ್ಪ ಮದಿಹಳ್ಳಿ ಎಂಬಾತನ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಸಂಜೀವ್‌ ಬಂಡಾರಿ, ವಕೀಲರ ಮೂಲಕವೇ ಎರಡು ಬಾರಿ ಮಧ್ಯಂತರ ಜಾಮೀನಿಗಾಗಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದನು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿ ಅರ್ಜಿಯನ್ನು ತಿರಸ್ಕೃರಿಸಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ಅಕ್ರಮದ ಪ್ರಮುಖ ರೂವಾರಿ ಸಂಜೀವ ಬಂಡಾರಿಯನ್ನು ಶುಕ್ರವಾರ ಹುಬ್ಬಳ್ಳಿ- ಧಾರವಾಡ ಕಮಿಷನ್‌ರೇಟ್‌ ವ್ಯಾಪ್ತಿಯ ಬೆಂಡಿಗೇರಿ ಪೊಲೀಸರ ಸಹಕಾರೊಂದಿಗೆ ಬೆಳಗಾವಿ ಪೊಲೀಸರು ತಮ್ಮ ಖೆಡ್ಡಾಗೆ ಕೆಡವಿಕೊಳ್ಳುವಲ್ಲಿ ಸಫಲರಾಗಿದ್ದಾರೆ. 

ಬಂಧಿತನನ್ನು ಗೋಕಾಕನ ಪ್ರಿನ್ಸಿಪಲ್‌ ಜೆಎಂಎಫ್‌ಸಿಗೆ ಹಾಜರುಪಡಿಸಲಾಗಿದೆ. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಬಂಧಿತ ಆರೋಪಿಯನ್ನು 7 ದಿನಗಳ ಕಾಲ ವಿಚಾರಣೆಗಾಗಿ ಪೊಲೀಸ್‌ ವಶಕ್ಕೆ ನೀಡಿ ಆದೇಶಿಸಿದೆ. ಪ್ರಕರಣದ ಎರಡನೇ ಆರೋಪಿಯಾಗಿರುವ ಸಂಜೀವ ಬಂಡಾರಿ ಪರೀಕ್ಷಾರ್ಥಿಗಳಿಗೆ ಉಪಯೋಗಿಸಲು ಅತ್ಯಾಧುನಿಕ ತಂತ್ರಜ್ಞಾನಯುಳ್ಳ ಬ್ಲ್ಯೂಟೂತ್‌ಗಳನ್ನು ರವಾನಿಸುತ್ತಿದ್ದ ಎನ್ನಲಾಗಿದೆ. ಈತ ಪೊಲೀಸ್‌ ಪೇದೆಯ ಮಗನಾಗಿದ್ದು, ಈ ಹಿಂದೆ ನಡೆದ ಪೊಲೀಸ್‌ ಪೇದೆ ಪರೀಕ್ಷೆಯಲ್ಲಿ ನಡೆದ ಅಕ್ರಮದಲ್ಲಿಯೂ ಈತನ ಪಾತ್ರ ಇರುವ ಹಿನ್ನೆಲೆ ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದರು. 

Belagavi: ಕೆಪಿಟಿಸಿಎಲ್‌ ಅಕ್ರಮ: ಮತ್ತೆ ಮೂವರ ಬಂಧನ

ಜಾಮೀನಿನ ಮೇಲೆ ಹೊರಗೆ ಬಂದು ತನ್ನ ಹಳೆಯ ಚಾಳಿಯನ್ನು ಮತ್ತೆ ಮುಂದುವರಿಸಿದ್ದ. ಈತ ಪರೀಕ್ಷಾರ್ಥಿಗಳಿಗೆ ನೀಡಿರುವ ಅತ್ಯಾಧುನಿಕ ಬ್ಲ್ಯೂಟೂತ್‌ ಡಿವೈಸ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅಲ್ಲದೇ ಪರೀಕ್ಷೆ ಸಮಯದಲ್ಲಿ ಕೇಂದ್ರಗಳಿಗೆ ಅಳವಡಿಸಲಾಗಿರುವ ನೆಟ್‌ವರ್ಕ್ ಜಾಮರ್‌ ನಿಷ್ಕಿ್ರೕಯವಾಗಿರುವ ಅಂಶವೂ ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ಈ ಕುರಿತವೂ ಆತನಿಂದ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ ಎನ್ನಲಾಗಿದೆ.

Latest Videos
Follow Us:
Download App:
  • android
  • ios