Asianet Suvarna News Asianet Suvarna News

ಬಿಜೆಪಿ ಶಾಸಕ ಮುನಿರತ್ನಗೆ ಅಟ್ರಾಸಿಟಿ ಕೇಸಿನಲ್ಲಿ ಜಾಮೀನು ಮಂಜೂರು!

ಬೆಂಗಳೂರಿನ ಬಿಬಿಎಂಪಿ ಗುತ್ತಿಗೆದಾರನೊಬ್ಬನಿಗೆ ಬೈದು, ದಲಿತರಿಗೆ ಜಾತಿ ನಿಂದನೆ ಮಾಡಿದ್ದ ಪ್ರಕರಣದಲ್ಲಿ ಜೈಲಿನಲ್ಲಿದ್ದ ಬಿಜೆಪಿ ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು ಲಭ್ಯವಾಗಿದೆ

Bengaluru BJP MLA Muniratna got granted bail in atrocity case sat
Author
First Published Sep 19, 2024, 5:49 PM IST | Last Updated Sep 19, 2024, 5:49 PM IST

ಬೆಂಗಳೂರು (ಸೆ.19): ಬಿಬಿಎಂಪಿ ಗುತ್ತಿಗೆದಾರನಿಗೆ ಜಾತಿ ನಿಂದನೆ, ಜೀವ ಬೆದರಿಕೆ ಹಾಗೂ ವಂಚನೆ ಪ್ರಕರಣದಲ್ಲಿ ಬಂಧನವಾಗಿದ್ದ ಬಿಜೆಪಿ ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ.

ಬೆಂಗಳೂರಿನ ಬಿಬಿಎಂಪಿ ಗುತ್ತಿಗೆದಾರನೊಬ್ಬನಿಗೆ ಅವ್ಯಾಚ್ಯ ಶಬ್ದಗಳಿಂದ ನಿಂದನೆ ಮಾಡಿ, ದಲಿತರಿಗೆ ಜಾತಿ ನಿಂದನೆ ಮಾಡಿದ್ದರು. ಜೊತೆಗೆ, ಇದೇ ವ್ಯಕ್ತಿಯ ಮೇಲೆ ಜೀವ ಬೆದರಿಕೆ ಹಾಗೂ ವಂಚನೆಯನ್ನೂ ಮಾಡಿದ್ದಾರೆ ಎಂದು ಕೇಸ್ ದಾಖಲಿಸಲಾಗಿತ್ತು. ಈ ಬಗ್ಗೆ ಆಡಿಯೋ ಸಮೇತ ದೂರು ನೀಡಲಾಗಿದ್ದ ಆಧಾರದಲ್ಲಿ ಪೊಲೀಸರು ಶಾಸಕ ಮುನಿರತ್ನ ಅವರನ್ನು ಬಂಧಿಸಿದ್ದರು. ಎರಡು ದಿನಗಳ ಕಾಲ ಪೊಲೋಸ್ ಕಸ್ಟಡಿಯಲ್ಲಿ ಇಟ್ಟುಕೊಂಡು ವಿಚಾರಣೆ ಮಾಡಿದ್ದ ಪೊಲೀಸರು ನಂತರ ಕೋರ್ಟ್ ಮುಂದೆ ಹಾಜರುಪಡಿಸಿದ್ದರು.

ಮುನಿರತ್ನ ಆಡಿಯೋ ವಿಚಾರ: ಧ್ವನಿ ಅವರದ್ದೇ ಅನ್ನೋದು ನಿಜವಾದ್ರೆ ಕ್ಷಮಿಸಲ್ಲ: ಡಾ.ನಿರ್ಮಲಾನಂದಶ್ರೀ

ಇನ್ನು ಕಳೆದೆರಡು ದಿನಗಳ ಹಿಂದೆ ಜಾಮೀನು ಅರ್ಜಿ ಮುಂದೂಡಿಕೆ ಮಾಡಿ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಆದರೆ, ನಿನ್ನೆ ಜಾಮೀನು ಅರ್ಜಿ ವಿಚಾರಣೆ ಮಾಡಿದ್ದ ನ್ಯಾಯಾಲಯದಿಂದ ಆದೇಶವನ್ನು ಇಂದಿಗೆ ಕಾಯ್ದಿರಿಸಲಾಗಿತ್ತು. ಇಂದು ಜಾಮೀನು ಅರ್ಜಿ ಕುರಿತು ಆದೇಶ ನೀಡಿದ ಕೋರ್ಟ್ ಕಳೆದ ಎರಡು ದಿನಗಳಿಂದ ಜೈಲಿನಲ್ಲಿದ್ದ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
 

Latest Videos
Follow Us:
Download App:
  • android
  • ios