Asianet Suvarna News Asianet Suvarna News

Bengaluru: ಕರ್ತವ್ಯ ನಿರತ ಸರ್ಕಲ್ ಇನ್ಸ್ಪೆಕ್ಟರ್ ಕತ್ತಿನ ಪಟ್ಟಿ ಹಿಡಿದು ಹಲ್ಲೆ: ಮಾಜಿ ಬಿಜೆಪಿ ಕಾರ್ಪೊರೇಟರ್​​ ಬಂಧನ

ಕರ್ತವ್ಯ ನಿರತ ಸಿಪಿಐ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಮಾಜಿ ಬಿಜೆಪಿ ಕಾರ್ಪೊರೇಟರ್​ ವಿ.ಬಾಲಕೃಷ್ಣನನ್ನು ಕಗ್ಗಲೀಪುರ ಪೊಲೀಸರು ಬಂಧಿಸಿದ್ದಾರೆ.

Bengaluru former Corporator V Balakrishna Arrested for Assaulting on Duty CPi Officer gvd
Author
First Published Jan 20, 2023, 9:03 AM IST

ಬೆಂಗಳೂರು (ಜ.20): ಕರ್ತವ್ಯ ನಿರತ ಸಿಪಿಐ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಮಾಜಿ ಬಿಜೆಪಿ ಕಾರ್ಪೊರೇಟರ್​ ವಿ.ಬಾಲಕೃಷ್ಣನನ್ನು ಕಗ್ಗಲೀಪುರ ಪೊಲೀಸರು ಬಂಧಿಸಿದ್ದಾರೆ. ವಾರ್ಡ್ ನಂಬರ್ 185 ಯಲಚೇನಹಳ್ಳಿ ವಾರ್ಡ್ ಮಾಜಿ ಕಾರ್ಪೋರೇಟರ್ ಬಾಲಕೃಷ್ಣ ಜಮೀನು ವ್ಯಾಜ್ಯ ವಿಚಾರವಾಗಿ ಮಾತನಾಡಲು ನಿನ್ನೆ (ಗುರುವಾರ) ಸಂಜೆ ಕಗ್ಗಲೀಪುರ ಠಾಣೆಗೆ ತೆರಳಿದ್ದ. ಇದೇ ವೇಳೆ ಸರ್ಕಲ್ ಇನ್ಸ್ಪೆಕ್ಟರ್ ವಿಜಯ ಕುಮಾರ್ ಜೊತೆಗೆ ಮಾತಿನ ಚಕಮಕಿಯಾಗಿ ಕೊನೆಗೆ ಸರ್ಕಲ್ ಇನ್ಸ್ಪೆಕ್ಟರ್ ವಿಜಯ್ ಕುಮಾರ್ ಕತ್ತಿನ ಪಟ್ಟಿ ಹಿಡಿದು ಬಾಲಕೃಷ್ಣ ಹಲ್ಲೆ ನಡೆಸಿದ್ದಾನೆ. 

ತಕ್ಷಣವೇ ಬಾಲಕೃಷ್ಣನ ವಶಕ್ಕೆ ಪಡೆದುಕೊಂಡ ಪೊಲೀಸರು, ಸರ್ಕಲ್ ಇನ್ಸ್ಪೆಕ್ಟರ್ ವಿಜಯ್ ಕುಮಾರ್ ನೀಡಿದ ದೂರು ಆಧರಿಸಿ ಕಗ್ಗಲೀಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 353 ಕರ್ತವ್ಯ ನಿರತ ಸರ್ಕಾರಿ ಅಧಿಕಾರಿ ಮೇಲೆ ಹಲ್ಲೆ, ಐಪಿಸಿ ಸೆಕ್ಷನ್ 332 ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ವೈದ್ಯಕೀಯ ತಪಾಸಣೆ ನಡೆಸಿ ಪೊಲೀಸರು ಠಾಣೆಗೆ ಕರೆದುಕೊಂಡು ಹೋಗಿದ್ದು, ಇಂದು ಆರೋಪಿ ಬಾಲಕೃಷ್ಣನ ಕೋರ್ಟ್‌ಗೆ ಹಾಜರು ಪಡಿಸಲಿದ್ದಾರೆ. ಇನ್ನು ಹೆಚ್ಚಿನ ವಿಚಾರಣೆಗಾಗಿ ಮಾಜಿ ಕಾರ್ಪೋರೇಟರ್ ಬಾಲಕೃಷ್ಣನನ್ನು ವಶಕ್ಕೆ ಪಡೆಯುವ ಸಾಧ್ಯತೆಯಿದೆ.

Bengaluru: ಹನುಮಂತನಗರ ಪೊಲೀಸರಿಂದ ಖತರ್ನಾಕ್ 'ಚಡ್ಡಿ' ಗ್ಯಾಂಗ್ ಬಂಧನ

ಚೂರಿಯಿಂದ ಇರಿದು ಯುವತಿಯ ಹತ್ಯೆ: ಹಾಡಹಗಲೇ ಮನೆಯ ಮುಂಭಾಗದಲ್ಲಿ ಯುವತಿಯೊಬ್ಬಳನ್ನು ಚೂರಿಯಿಂದ ಇರಿದು ಹತ್ಯೆ ನಡೆಸಿದ ಘಟನೆ ಮಂಗಳವಾರ ಬೆಳಗ್ಗೆ ಪುತ್ತೂರು ತಾಲೂಕಿನ ಮುಂಡೂರು ಗ್ರಾಮದ ಕಂಪ ಎಂಬಲ್ಲಿ ನಡೆದಿದ್ದು, ಹತ್ಯೆಗೈದ ಆರೋಪಿಯನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಸುಳ್ಯ ತಾಲೂಕಿನ ಕನಕಮಜಲು ನಿವಾಸಿ ಉಮೇಶ್‌ (32) ಬಂಧಿತ ಆರೋಪಿ. ಇಲ್ಲಿನ ನಿವಾಸಿ ದಿ. ಗುರುವ ಮತ್ತು ಗಿರಿಜಾ ದಂಪತಿಯ ಪುತ್ರಿ ಜಯಶ್ರೀ (23) ಎಂಬವರನ್ನು ಮಂಗಳವಾರ ಬೆಳಗ್ಗೆ ಸುಮಾರು 11.30ರ ವೇಳೆಯಲ್ಲಿ ಮನೆಯಲ್ಲಿ ಒಬ್ಬರೇ ಇದ್ದ ಸಂದರ್ಭ ಚೂರಿಯಿಂದ ಹೊಟ್ಟೆಯ ಭಾಗಕ್ಕೆ ಇರಿದು ಗಂಭೀರ ಗಾಯಗೊಳಿಸಲಾಗಿತ್ತು. 

ಗಾಂಜಾ ಸೇವನೆ ಆರೋಪ: ಪೊಲೀಸರ ವಿಚಾರಣೆಯಿಂದ ಮನನೊಂದ ಯುವಕ ಆತ್ಮಹತ್ಯೆ

ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುತ್ತಿರುವ ವೇಳೆ ದಾರಿ ಮದ್ಯೆ ಮೃತಪಟ್ಟಿದ್ದರು. ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದ ಮೃತ ಜಯಶ್ರೀ ಅವರ ತಾಯಿ ಗಿರಿಜಾ, ತನ್ನ ಪುತ್ರಿಯು ಕನಕಮಜಲು ನಿವಾಸಿ ಉಮೇಶ ಎಂಬಾತನನ್ನು ಪ್ರೀತಿಸುತ್ತಿದ್ದು, ಆತನ ಆಗಾಗ್ಗೆ ನಮ್ಮ ಮನೆಗೆ ಬರುತ್ತಿದ್ದ. ಕೆಲ ಸಮಯಗಳ ಹಿಂದೆ ಆತನಿಂದ ಜಯಶ್ರೀ ದೂರ ಉಳಿದಿದ್ದರು. ಈತನೇ ಕೊಲೆ ನಡೆಸಿರುವ ಸಾಧ್ಯತೆಯಿದೆ ಎಂದು ಶಂಕೆ ವ್ಯಕ್ತ ಪಡಿಸಿದ್ದರು. ಈ ಹಿನ್ನೆಲೆಯಲ್ಲಿ ತನಿಖೆ ಮುಂದುವರಿಸಿದ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.

Follow Us:
Download App:
  • android
  • ios