ಬೆಂಗಳೂರು (ಅ.22):   ಡಿಜೆ ಹಳ್ಳಿ ಕೆಜಿ‌ಹಳ್ಳಿ ಗಲಭೆ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿ ನವೀನ್ ಗೆ ಜಾಮೀನು ನೀಡಲಾಗಿದೆ. 

ಬಿ.ಎ.ಪಾಟೀಲ್ ನೇತೃತ್ವದ ಹೈಕೋರ್ಟ್ ಏಕ ಸದಸ್ಯ ಪೀಠ ನವೀನ್‌ಗೆ ಜಾಮೀನು ಮಂಜೂರು ಮಾಡಿದೆ. 

ಆರೋಪಿಯ ಜೀವಕ್ಕೆ ಅಪಾಯವಿದೆ ಅನ್ನೋ ಕಾರಣಕ್ಕೆ ಜಾಮೀನು ನೀಡದೆ ಇದ್ದರೆ ತಪ್ಪಾಗುತ್ತದೆ. ಆತನ ಮೂಲಭೂತ ಹಕ್ಕುಗಳನ್ನು ಕಸಿದುಕೊಂಡಂತೆ ಆಗುತ್ತದೆ ಎಂದು ಆದೇಶದ ವೇಳೆ ಹೈಕೋರ್ಟ್ ಏಕಸದಸ್ಯ ಪೀಠ ಅಭಿಪ್ರಾಯಪಟ್ಟಿದೆ.

ಡಿಜೆ ಹಳ್ಳಿ ಗಲಭೆ: ಪ್ರಮುಖ ಆರೋಪಿ ಪರ ಕೈ ನಾಯಕರ ಬ್ಯಾಟಿಂಗ್?

 ನವೀನ್ ಪುಲಿಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅಳಿಯ ನವೀನ್ ತಾನೂ ಪೋಸ್ಟ್ ಫಾರ್ವರ್ಡ್ ಮಾಡಿ ಡಿಲೀಟ್ ಮಾಡಿದ್ದಾಗಿ ಒಪ್ಪಿಕೊಂಡಿದ್ದ.  ರಾಜಕೀಯ ವಾಗಿ ‌ನವೀನ್ ನ ಟಾರ್ಗೇಟ್ ಮಾಡಲಾಗಿದೆ ಎಂದು ನವೀನ್ ಪರ ವಕೀಲರು ಹೈಕೋರ್ಟ್ ನಲ್ಲಿ ವಾದ ಮಂಡನೆ ಮಾಡಿದ್ದರು. 

ನವೀನ್ ವಿರುದ್ಧ ಸೆಕ್ಷನ್ 153ಎ ಹಾಗೂ 295ಎ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.  ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 67ರ ಅಡಿಯಲ್ಲೂ ಪ್ರಕರಣ ದಾಖಲಾಗಿತ್ತು.  ಆಕ್ಷೇಪಾರ್ಹ ಪೋಸ್ಟ್‌ ಹಾಕಿದ್ದ ಕಾರಣಕ್ಕೆ ಈ ಕಾಯ್ದೆಗಳ ಅಡಿ ಪ್ರಕರಣ ದಾಖಲಾಗಿತ್ತು. ಇದೀಗ