ಮಂಗಳೂರಿನ ಜನರು ಪತ್ನಿಗೆ ಕಳ್ಳಿ ಅಂತಾರೆಂದು ಬೆಂಗಳೂರಿಗೆ ಕರೆತಂದು ಕೊಲೆ ಮಾಡಿದ ಪತಿ

ಮಂಗಳೂರಿನ ಜನರು ತನ್ನ ಪತ್ನಿಗೆ ಕಳ್ಳಿ.. ಕಳ್ಳಿ... ಎನ್ನುವುದನ್ನು ಸಹಿಸದೇ ಬೆಂಗಳೂರಿಗೆ ಕರೆತಂದು, ಹೆಂಡ್ತಿಯನ್ನು ಕೊಲೆ ಮಾಡಿದ ಪತಿ ಈಗ ಜೈಲು ಸೇರಿದ್ದಾನೆ.

Bengaluru murder case mangaluru husband killed his wife because she was thief sat

ಬೆಂಗಳೂರು (ಆ.08): ಮಂಗಳೂರಿನಲ್ಲಿ ವಾಸವಿದ್ದಾಗ ತನ್ನ ಪತ್ನಿಯ ಮೇಲೆ ಕಳ್ಳತನ ಆರೋಪ ವ್ಯಕ್ತವಾಗಿತ್ತು. ಜನರು ತನ್ನ ಪತ್ನಿಯನ್ನು ಕಳ್ಳಿ, ಕಳ್ಳಿ ಎಂದು ಕರೆಯುತ್ತಿದ್ದರು. ಇದರಿಂದ ಪತ್ನಿಯನ್ನು ಮಂಗಳೂರಿನಿಂದ ಬೆಂಗಳೂರಿಗೆ ಕರೆತಂದು ವಾಸವಿದ್ದ ಪತಿ, ಇದ್ದಕ್ಕಿದ್ದಂತೆ ಪತ್ನಿಯನ್ನು ಕೊಲೆ ಮಾಡಿ ಜೈಲು ಸೇರಿದ್ದಾನೆ. 

ಕೊಲೆಯಾದ ಮಹಿಳೆಯನ್ನು ಸರಿತಾ (35) ಎಂದು ಗುರುತಿಸಲಾಗಿದೆ. ಆಕೆಯ ಪತಿ ತಾರಾನಾಥ್‌ ಕೊಲೆ ಮಾಡಿದ ಆರೋಪಿ ಆಗಿದ್ದಾನೆ. ಇನ್ನು ಈ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನಡೆದಿದೆ. ಮಂಗಳೂರಿನ ಮೂಲಕ ದಂಪತಿ ದುಡಿಮೆಗಾಗಿ ಬೆಂಗಳೂರಿನಲ್ಲಿ ಬಂದು ನೆಲೆಸಿದ್ದರು. ಇಲ್ಲಿ ಪಾನಿಪೂರಿ ಮಾರಾಟ ಮಾಡುತ್ತಾ ಜೀವನ ಕಟ್ಟಿಕೊಂಡಿದ್ದರು. ಇನ್ನು ಪ್ರತಿನಿತ್ಯ ಕೆಲಸದಲ್ಲಿ ಇಬ್ಬರೂ ಪಾಲ್ಗೊಳ್ಳುತ್ತಿದ್ದರು. ಹೀಗಾಗಿ, ಆರಂಭದಲ್ಲಿ ದಂಪತಿ ಚೆನ್ನಾಗಿಯೇ ಜೀವನ ಮಾಡುತ್ತಿದ್ದರು. ಆದರೆ, ತನ್ನ ಪತ್ನಿ ಕಳ್ಳಿ ಎನ್ನುವ ವಿಚಾರ ಬೆಂಗಳೂರಿಗೆ ಬಂದರೂ ಬೆಂಬಿಡದ ಹಿನ್ನೆಲೆಯಲ್ಲಿ ಕುಟುಂಬ ಸಮೇತ ಆತ್ಮಹತ್ಯೆ ಮಾಡಿಕೊಳ್ಳಲು ತೀರ್ಮಾನ ಮಾಡಿದ್ದಾನೆ. 

Bengaluru: ಬಿಬಿಎಂಪಿ 500 ಗುತ್ತಿಗೆದಾರರಿಂದ ದಯಾಮರಣ ಕೋರಿ ರಾಷ್ಟ್ರಪತಿಗೆ ಮನವಿ ಸಲ್ಲಿಕೆ

ಪತ್ನಿಯ ಮೇಲಿನ ಕಳ್ಳಿ ಎಂಬ ಆರೋಪದಿಂದ ಬೇಸತ್ತ ಪತಿ ತಾರಾನಾಥ್‌ ತನ್ನ ಪತ್ನಿ ಮಲಗಿರುವಾಗ ಕುತ್ತಿಗೆಗೆ ಹಗ್ಗವನ್ನು ಬಿಗಿದು ಕೊಲೆ ಮಾಡಿದ್ದಾನೆ. ಪತ್ನಿಯನ್ನು ಕೊಲೆ ಮಾಡಿದ ನಂತರ ತಾನೂ ಆತ್ಮಹತ್ಯೆ ಮಾಡಿಕೊಳ್ಳಬೇಕು ಎಂದು ನಿರ್ಧಾರ ಮಾಡಿದ್ದನು. ಆದರೆ, ಆತ್ಮಹತ್ಯೆ ಮಾಡಿಕೊಳ್ಳಲು ಧೈರ್ಯ ಸಾಲದೇ ಸೀದಾ ಪೊಲೀಸ್‌ ಠಾಣೆಗೆ ಹೋಗಿದ್ದಾನೆ. ಅಲ್ಲಿ ಪೊಲೀಸರಿಗೆ ತನ್ನ ಪತ್ನಿಯನ್ನು ತಾನೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡು ಬಂಧಿಸುವಂತೆ ಶರಣಾಗಿದ್ದಾರೆ. ಇನ್ನು ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ಆತನೊಂದಿಗೆ ತೆರಳಿ ಸ್ಥಳ ಮಹಜರ್‌ ಮಾಡಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಕೊಲೆ ಸಾಬೀತಾಗಿದ್ದು, ಪತಿ ತಾರಾನಾಥನನ್ನು ವಶಕ್ಕೆ ಪಡೆದಿದ್ದಾರೆ.ಸದ್ಯ ವೈಟ್ ಫೀಲ್ಡ್ ಪೊಲೀಸರಿಂದ ಆರೋಪಿಯ ವಿಚಾರಣೆಮ ಮಾಡುತ್ತಿದ್ದಾರೆ.

ಬಿಎಂಟಿಸಿ ಅಧಿಕಾರಿಗಳ ಕಿರುಕುಳ: ಡಿಪೋ ಮ್ಯಾನೇಜರ್ ಕೊಠಡಿ ಎದುರೇ ಚಾಲಕ ಆತ್ಮಹತ್ಯೆ:
ಬೆಂಗಳೂರು:
 ದೇವನಹಳ್ಳಿಯ ಬಿಎಂಟಿಸಿ ಡಿಪೋದಲ್ಲಿದಲ್ಲಿ ಬಿಎಂಟಿಸಿ ಚಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ದೇವನಹಳ್ಳಿ ತಾಲೂಕಿನ ಆವತಿ ಮೂಲದ ನಾಗೇಶ್ ( 45 ) ಆತ್ಮಹತ್ಯೆಗೆ ಶರಣಾದವರಾಗಿದ್ದಾರೆ. ಮೃತ ನಾಗೇಶ್ ಚಾಲಕ ಕಂ ನಿರ್ವಾಹಕನಾಗಿ ಬಿಎಂಟಿಸಿಯಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ನೊಂದಿದ್ದರು. ಜತೆಗೆ ಕೆಲಸದ ಸ್ಥಳದಲ್ಲಿ ಕಿರುಕುಳ ಹೆಚ್ಚಾಗಿತ್ತು ಎನ್ನಲಾಗಿದೆ. ನಿನ್ನೆ ಕೆಲಸ ಮುಗಿಸಿ ಮನೆಗೆ ತೆರಳಿದ್ದ ನಾಗೇಶ್, ಪುನಃ ಮಧ್ಯರಾತ್ರಿ ಬಸ್‌ ಡಿಪೋಗೆ ಬಂದಿದ್ದಾರೆ. ಈ ವೇಳೆ ಯಾರೂ ಇಲ್ಲದಾಗ ಡಿಪೋ ಮ್ಯಾನೇಜರ್ ಕೊಠಡಿ ಎದುರಿಗೆ ಕಾಂಪೌಂಡ್‌ನ ಮೇಲಿದ್ದ ಕಬ್ಬಿಣದ ಕಂಬಿಗೆ ಹಗ್ಗವನ್ನು ಕಟ್ಟಿ ಅದಕ್ಕೆ ಕೊರಳೊಡ್ಡಿ ನೇಣು ಬಿಗಿದುಕೊಂಡಿದ್ದಾರೆ.

ಗೃಹಲಕ್ಷ್ಮಿ ಯೋಜನೆ ಉದ್ಘಾಟನೆಗೆ, ಬಿಬಿಎಂಪಿ ಅಧಿಕಾರಿಗಳು ತಲಾ 2000 ಜನರನ್ನು ಕರೆತರಬೇಕು; ಎನ್‌.ಆರ್. ರಮೇಶ್‌ ಆರೋಪ

ಇನ್ನೆಷ್ಟು ನೌಕರರ ಬಲಿ ಬೇಕು: ಇನ್ನು ಮಂಗಳವಾರ ಬೆಳಗ್ಗೆ ಬಸ್‌ ಡಿಪೋದ ಇತರೆ ಸಿಬ್ಬಂದಿ ಬಂದು ಮೃತ ದೇಹವನ್ನು ನೋಡಿ ದೇವನಹಳ್ಳಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ದೇವನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಹಿಂದೆಯೂ ಬಿಎಂಟಿಸಿ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಹಲವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಆದರೆ, ಯಾವ ಹಿರಿಯ ಅಧಿಕಾರಿಗಳ ವಿರುದ್ಧವೂ ಕಠಿಣ ಕ್ರಮ ಜರುಗಿಲ್ಲ. ಆದ್ದರಿಂದ, ಅಧಿಕಾರಿಗಳ ಕಿರುಕುಳ ನಿರಂತರವಾಗಿ ಮುಂದುವರೆದಿದೆ ಎಂದು ಬಿಎಂಟಿಸಿ ಸಿಬ್ಬಂದಿ ಅಳಲು ತೋಡಿಕೊಂಡಿದ್ದಾರೆ.

Bengaluru murder case mangaluru husband killed his wife because she was thief sat

Latest Videos
Follow Us:
Download App:
  • android
  • ios