Asianet Suvarna News Asianet Suvarna News

ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಕಾರುಗಳ ಡಿಕ್ಕಿ: ನಜ್ಜುಗುಜ್ಜಾದ ಕಾರು, ಅಪ್ಪಚ್ಚಿಯಾದ ಮೂವರ ದೇಹ

ಬೆಂಗಳೂರು ಮೈಸೂರು ದಶಪಥ ಹೆದ್ದಾರಿಯಲ್ಲಿ ಎರಡು ಕಾರುಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರುಗಳು ಅಪ್ಪಚ್ಚಿಯಾಗಿದ್ದು, ಸ್ಥಳದಲ್ಲಿಯೇ ಮೂವರ ದೇಹ ಛಿದ್ರಗೊಂಡು ಸಾವನ್ನಪ್ಪಿದ್ದಾರೆ. 

Bengaluru Mysuru Expressway car Accident three killed one seriously injured sat
Author
First Published Jun 20, 2023, 5:27 PM IST

ಮಂಡ್ಯ (ಜೂ.20): ಬೆಂಗಳೂರು ಮೈಸೂರು ದಶಪಥ ಹೆದ್ದಾರಿಯಲ್ಲಿ ಎರಡು ಕಾರುಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರುಗಳು ಅಪ್ಪಚ್ಚಿಯಾಗಿದ್ದು, ಸ್ಥಳದಲ್ಲಿಯೇ ಮೂವರ ದೇಹ ಛಿದ್ರಗೊಂಡು ಸಾವನ್ನಪ್ಪಿದ್ದಾರೆ. 

ಮೈಸೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ನಡೆದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಮೃತ ದುರ್ದೈವಿಗಳ ಪೈಕಿ ಓರ್ವನ ಹೆಸರು ನೀರಜ್‌ ಎಂದು ತಿಳಿದುಬಂದಿದ್ದು, ಮತ್ತಿಬ್ಬರ ಹೆಸರು ತಿಳಿದುಬಂದಿಲ್ಲ. ಕಾರಿನಲ್ಲಿದ್ದ ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದರೆ ಸಾವು ಖಚಿತ ಎನ್ನುವಂತಾಗಿದೆ. ಆದ್ದರಿಂದ ಬೆಂಗಳೂರು ಮೈಸೂರು ಎಕಸ್‌ಪ್ರೆಸ್‌ವೇ ಸಾವಿನ ಹೆದ್ದಾರಿ ಆಗುತ್ತಿದೆಯೇ ಎಂಬ ಅನುಮಾನ ಕಾಡುತ್ತಿದೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇನಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರ ಸಾವು

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗಜ್ಜಲೆಗೆರೆ ಬಳಿ ಘಟನೆ ನಡೆದಿದೆ. ಬೆಂಗಳೂರಿಂದ ಮೈಸೂರಿಗೆ ತೆರಳುತ್ತಿದ್ದ ಕಾರುಗಳು. ಮುಂದೆ ಹೋಗುತ್ತಿದ್ದ ಟಾಟಾ ಎಕ್ಸ್ ಕಾರಿಗೆ ಸ್ವಿಫ್ಟ್ ಡಿಸೈರ್ ಕಾರು ಡಿಕ್ಕಿ ಹೊಡೆದಿದೆ. ಕಾರುಗಳ ನಡುವಿನ ಡಿಕ್ಕಿ ರಭಸಕ್ಕೆ ಡಿಸೈರ್ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮೃತರ ಪೈಕಿ ಓರ್ವನ ಹೆಸರು ನೀರಜ್ ಕುಮಾರ್, ಮತ್ತಿಬ್ಬರ ಹೆಸರು ತಿಳಿದುಬಂದಿಲ್ಲ. ಕಾರಿನಲ್ಲಿದ್ದ ಮತ್ತೊಬ್ಬನ ಸ್ಥಿತಿಯು ಗಂಭೀರವಾಗಿದ್ದು, ಮಂಡ್ಯ ಮಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ. ಕಾರು ಅತಿವೇಗ ಇದ್ದರಿಂದ ನಿಯಂತ್ರಣ ತಪ್ಪಿ ಮತ್ತೊಂದು ಕಾರಿಗೆ ಡಿಕ್ಕಿಯಾಗಿದೆ. ಮುಂಬದಿ ಕಾರಿನಲ್ಲಿದ್ದವರಿಗೂ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮದುವೆಗೆ ಹೋಗಿದ್ದ ಒಂದೇ ಕುಟುಂಬದ ಮೂವರು ಸಾವು: 
ಚನ್ನಪಟ್ಟಣ (ಜೂ.15): ಟಿಂಬರ್‌ ಲಾರಿಗೆ ಹಿಂಬದಿಯಿಂದ ಹೊಂಡಸಿಟಿ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟು, ಮೂವರಿಗೆ ಗಾಯವಾಗಿರುವ ಘಟನೆ ತಾಲೂಕಿನ ದೇವರಹೊಸಹಳ್ಳಿ ಗ್ರಾಮದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಬುಧವಾರ ಸಂಜೆ ಸಂಭವಿಸಿದೆ. ಕಾರಿನ ಚಾಲಕ ಕೃಷ್ಣಮೂರ್ತಿ (57), ನಿಧಿ (13), ನಿಶಾ(20) ಮೃತರು. ಬೆಂಗಳೂರಿನ ಯಲಹಂಕದ ವಿದ್ಯಾರಣ್ಯಪುರ ಮೂಲದ ಶ್ರೀನಿವಾಸ್‌ಮೂರ್ತಿ ಕುಟುಂಬದವರು ಮದುವೆಗೆಂದು ಮೈಸೂರಿನ ಎಚ್‌.ಡಿ.ಕೋಟೆಗೆ ಹೋಗಿದ್ದರು. 

ಬೆಂಗಳೂರು -ಮೈಸೂರು ದಶಪಥದಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ಇಬ್ಬರ ಸಾವು, ನಾಲ್ವರಿಗೆ ಗಾಯ

ಹಿಂಬದಿಯಿಂದ ಗುದ್ದಿದ ಕಾರು:  ಮದುವೆ ಮುಗಿಸಿಕೊಂಡು ವಾಪಸ್‌ ಬೆಂಗಳೂರಿಗೆ ಹಿಂದಿರುಗುವಾಗ ಚನ್ನಪಟ್ಟಣದ ದೇವರಹೊಸಹಳ್ಳಿ ಬಳಿಯ ಬೆಂ-ಮೈ ಎಕ್ಸ್‌ಪ್ರೆಸ್‌ ವೇನಲ್ಲಿ ಮುಂದೆ ಹೋಗುತ್ತಿದ್ದ ಟಿಂಬರ್‌ ತುಂಬಿದ್ದ ಲಾರಿಗೆ ಹಿಂಬದಿಯಿಂದ ಇವರು ಚಲಿಸುತ್ತಿದ್ದ ಹೊಂಡ ಕಾರು ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ 6 ಮಂದಿಯಲ್ಲಿ ಮೂವರು ಸ್ಥಳದಲ್ಲೆ ಮೃತಪಟ್ಟರೆ, ಒಬ್ಬರಿಗೆ ಗಂಭೀರ ಗಾಯವಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ. ಇನ್ನು ಇಬ್ಬರಿಗೆ ಗಂಭೀರ ಗಾಯವಾಗಿದೆ. ಕಾರು ಟಿಂಬರ್‌ ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಲಾರಿಯ ಹಿಂಬದಿಗೆ ಕಚ್ಚಿಕೊಂಡಿದ್ದು, ಕಾರಿನ ಬ್ಯಾನೆಟ್‌ ಸಂಪೂರ್ಣ ನಜ್ಜುಗುಜ್ಜಾಗಿದೆ.

ಅಪಘಾತದ ತೀವ್ರತೆಗೆ ಚಾಲಕ ಕೃಷ್ಣಮೂರ್ತಿಯ ದೇಹ ಲಾರಿಯ ಹಿಂಬದಿಗೆ ಸಂಪೂರ್ಣವಾಗಿ ಕಚ್ಚಿಕೊಂಡಿದ್ದು, ಪೊಲೀಸರು ಮೃತದೇಹವನ್ನು ಹರಸಾಹಸಪಟ್ಟು ಹೊರಕ್ಕೆ ತೆಗೆದಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ವನಜಾ, ಶ್ರೀನಿವಾಸ್‌ಮೂರ್ತಿ, ಶೋಭಾ ಎಂಬುವರನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ರವಾನಿಸಲಾಗಿದೆ. ಅಪಘಾತದ ಹಿನ್ನೆಲೆಯಲ್ಲಿ ಬೆಂ-ಮೈ ಎಕ್ಸ್‌ಪ್ರೆಸ್‌ ವೇನಲ್ಲಿ ಕೆಲ ಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು. ಸಂಚಾರಿ ಪೊಲೀಸ್‌ ಠಾಣೆಯ ಪಿಎಸ್‌ಐ ಶುಭಾಂಭಿಕ ಹಾಗೂ ಪೊಲೀಸ್‌ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ವಾಹನಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Follow Us:
Download App:
  • android
  • ios