ಬೆಂಗಳೂರಿನ ನಿಟ್ಟೆ ಮೀನಾಕ್ಷಿ ಕಾಲೇಜಿನ ಇಂಜಿನಿಯರಿಂಗ್‌ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರಿನ ನಿಟ್ಟೆ ಮೀನಾಕ್ಷಿ ಕಾಲೇಜು ಹಾಸ್ಟೆಲ್‌ನಲ್ಲಿ ದಾವಣೆಗೆರೆ ಮೂಲದ ಇಂಜಿನಿಯರಿಂಗ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

Bengaluru Nitte Meenakshi Institute of Technology engineering student self death in hostel sat

ಬೆಂಗಳೂರು (ಜೂ10): ರಾಜ್ಯ ರಾಜಧಾನಿಯ ಪ್ರತಿಷ್ಟಿತ ಕಾಲೇಜಾದ ನಿಟ್ಟೆ ಮೀನಾಕ್ಷಿ ಕಾಲೇಜು ಹಾಸ್ಟೆಲ್‌ನಲ್ಲಿ ದಾವಣೆಗೆರೆ ಮೂಲದ ಇಂಜಿನಿಯರಿಂಗ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ನಡೆದಿದೆ. 

ದಾವಣಗೆರೆ ಜಿಲ್ಲೆ ಮೂಲದ ವಿವೇಕ್ (20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯಾಗಿದ್ದಾರೆ. ಕಳೆದ ಎರಡು ವರ್ಷಗಳಿಂದ ಕಾಲೇಜಿನಲ್ಲಿ ಅಭ್ಯಾಸ ಮಾಡುತ್ತಿದ್ದನು. ಪ್ರಸಕ್ತ ಸಾಲಿನಲ್ಲಿ ನಾಲ್ಕನೇ ಸೆಮಿಸ್ಟರ್ ಇಂಜಿನಿಯರಿಂಗ್ ವ್ಯಾಸಾಂಗ ಮಾಡ್ತಿದ್ದರು. ಆದರೆ, ಶನಿವಾರ ಕಾಲೇಜು ಹಾಸ್ಟೆಲ್‌ನ ಕೋಣೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಇನ್ನು ಸಾವಿಗೆ ನಿಖರ ಕಾರಣವೇನೆಂದು ಈವರೆಗೆ ಮಾಹಿತಿ ಲಭ್ಯವಾಗಿಲ್ಲ. ಈ ಬಗ್ಗೆ ಕಾಲೇಜು ಹಾಸ್ಟೆಲ್‌ನ ಸಿಬ್ಬಂದಿ ಮಾಹಿತಿ ಮೇರೆಗೆ ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಭೇಟಿ ಮಾಡಿದ್ದಾರೆ.

ತುಮಕೂರು: ಬ್ಲೇಡಿನಿಂದ ಕುತ್ತಿಗೆ ಕುಯ್ದು ಹಸುಗೂಸನ್ನು ಕೊಂದ ತಾಯಿ!

ಯಲಹಂಕ ಪೊಲೀಸರಿಂದ ಸ್ಥಳ ಪರಿಶೀಲನೆ: ಬೆಂಗಳೂರಿನ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇನ್ನು ಘಟನಾ ಸ್ಥಳಕ್ಕೆ ಘಟನಾ ಸ್ಥಳಕ್ಕೆ ಯಲಹಂಕ ನ್ಯೂಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂತರ ಮೃತದೇಹವನ್ನು ಕೆಳಗಿಳಿಸಿ ಸರ್ಕಾರಿ ಆಸ್ಪತ್ರೆಗೆ ಮೃತದೇಹ ರವಾನೆಗೆ ವ್ಯವಸ್ಥೆ ಮಾಡಿದ್ದಾರೆ. ಘಟನಾ ಸ್ಥಳದಲ್ಲಿ ಯಾವುದಾದರೂ ಸಾಕ್ಷಿಗಳು ಸಿಗಬಹುದೇ ಎಂಬ ಪರಿಶೀಲನೆ ಕಾರ್ಯ ಮುಂದುವರೆದಿದ್ದು, ಘಟನಾ ಸ್ಥಳದ ಕೋಣೆಯೊಳಗೆ ಇತರೆ ಹಾಸ್ಟೆಲ್‌ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ರೇವಾ ಕಾಲೇಜಿನಲ್ಲಿ ವಿದ್ಯಾರ್ಥಿ ಕೊಲೆ: ಕಳೆದ ಎರಡು ತಿಂಗಳ ಹಿಂದೆ (ಏಪ್ರಿಲ್‌ 29) ರಾಜ್ಯ ರಾಜಧಾನಿ ಬೆಂಗಳೂರಿನ ರೇವಾ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಕಾಲೇಜು ಉತ್ಸವದ (Bengaluru Reva college Fest) ವೇಳೆ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿದ್ದು, ವಿದ್ಯಾರ್ಥಿಯೊಬ್ಬನ ಕೊಲೆಯಲ್ಲಿ ಅಂತ್ಯವಾಗಿತ್ತು. ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾದ ರೇವಾ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಂಭ್ರಮಕ್ಕೆ ಪಾರವೇ ಇರುವುದಿಲ್ಲ. ಶಿಕ್ಷಣ, ಕ್ರೀಡೆ ಮತ್ತು ಮನೋರಂಜನೆ ಸೇರಿದಂತೆ ಎಲ್ಲ ಕ್ಷೇತ್ರದಲ್ಲಿಯೂ ಪ್ರಸಿದ್ಧಿಯನ್ನು ಹೊಂದಿರುವ ಈ ಕಾಲೇಜಿನಲ್ಲಿ ವಿದ್ಯಾರ್ಥಿಯ ಹತ್ಯೆ ನಡೆದಿರುವ ವಿಚಾರ ವಿಷಾದನೀಯವಾಗಿದೆ. ಪ್ರತಿ ವರ್ಷದ ಆಚರಣೆಯಂತೆ ಕಾಲೇಜು ಫೆಸ್ಟ್‌ ಹಮ್ಮಿಕೊಳ್ಳಲಾಗಿದ್ದು, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. 

ಬೆಂಗಳೂರು: ರೇವಾ ಕಾಲೇಜಿನಲ್ಲಿ ಇಂಜಿನಿಯರಿಂಗ್‌ ವಿದ್ಯಾರ್ಥಿಯ ಭೀಕರ ಕೊಲೆ!

ಎರಡು ಗುಂಪುಗಳ ನಡುವೆ ಗಲಾಟೆ: ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ರೇವಾ ಕಾಲೇಜಿನಲ್ಲಿ ಶುಕ್ರವಾರ ರಾತ್ರಿ (ಏ.28ರಂದು) ವಿಜೃಂಭಣೆಯಿಂದ ಕಾಲೇಜು ಉತ್ಸವ ನಡೆಯುತ್ತಿತ್ತು. ಆದರೆ, ಕಾಲೇಜು ಫೆಸ್ಟ್ ನಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ಆರಂಭವಾಗಿದೆ. ಕ್ಷುಲ್ಲಕ ಕಾರಣಕ್ಕೆ ಒಂದು ಗುಂಪಿನ ಯುವಕರಿಂದ ಚಾಕು ಇರಿತವಾಗಿದ್ದು, ಸ್ಥಳದಲ್ಲಿಯೇ ತೀವ್ರ ರಕ್ತಸ್ರಾವಗೊಂಡ ವಿದ್ಯಾರ್ಥಿ ಸಾವನ್ನಪ್ಪಿದ್ದನು. ಮೃತನನ್ನು ಗುಜರಾತ್ ಮೂಲದ ಭಾಸ್ಕರ್ ಜೆಟ್ಟಿ (22) ಎಂದು ಗುರುತಿಸಲಾಗಿತ್ತು. ಮೆಕ್ಯಾನಿಕಲ್ ಇಂಜಿನಿಯರಿಂಗ್ ಫೈನಲ್‌ ಸೆಮಿಸ್ಟರ್ ಓದುತ್ತಿದ್ದನು. ಇನ್ನು ಆರೋಪಿಗಳನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

Latest Videos
Follow Us:
Download App:
  • android
  • ios