ಬೆಂಗಳೂರು, (ಫೆ.29): ಗಾಯಕಿ ಸುಶ್ಮಿತಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನ್ನಪೂರ್ಣೇಶ್ವರಿನಗರ ಠಾಣಾ ಪೊಲೀಸರು ಶನಿವಾರ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಗಾಯಕಿ ಸುಶ್ಮಿತಾ ಪತಿ ಶರತ್ ಕುಮಾರ್, ದೊಡ್ಡಮ್ಮ ವೈದೇಹಿ ಮತ್ತು ಸಹೋದರಿ ಗೀತಾ ಬಂಧಿತ ಆರೋಪಿಗಳು. ಫೆ.16ರ ರಾತ್ರಿ ಮಾಳಗಾಳದಲ್ಲಿರುವ ತಾಯಿಯ ಮನೆಯಲ್ಲಿ ಸುಶ್ಮಿತಾ ಆತ್ಮಹತ್ಯೆಗೆ ಶರಣಾಗಿದ್ದರು.

ಹಾಡು ನಿಲ್ಲಿಸಿದ ಸುಂದರಿ ಗಾಯಕಿ, ಒಳ್ಳೆಯತನಕ್ಕೆ ಸಿಕ್ಕ ಬೆಲೆ ನೋಡಿ!

ಸಾವಿಗೂ ಮುನ್ನ ಸಹೋದರ ಮತ್ತು ತಾಯಿಗೆ ಸುಶ್ಮಿತಾ ಸಂದೇಶ ರವಾನಿಸಿದ್ದರು. ತನ್ನ ಸಾವಿಗೆ ಗಂಡ, ಆತನ ದೊಡ್ಡಮ್ಮ ಹಾಗೂ ಸಹೋದರಿಯೇ ಕಾರಣ. ಮೂವರ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾಗುತ್ತಿರುವುದಾಗಿ ಡೆತ್ ನೋಟ್‌ನಲ್ಲಿ ಬರೆದಿಟ್ಟಿದ್ದರು.

ಈ ಸಂಬಂಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಆರಂಭಿಸಿದ ಪೊಲೀಸರು ಪಾಂಡವಪುರದ ಸಂಬಂಧಿಕರ ಮನೆಯಲ್ಲಿ ಅವಿತಿದ್ದ ಆರೋಪಿಗಳನ್ನು ಬಂಧಿಸಿ ಕರೆತಂದಿದ್ದಾರೆ.

ಅಮ್ಮ ಮಿಸ್ ಯು, ಬದುಕೋಕೆ ಆಗ್ತಿಲ್ಲ' ಎಂದು ನೇಣಿಗೆ ಶರಣಾದ ಗಾಯಕಿ

ನನ್ನ ಪತಿಯನ್ನು ಸುಮ್ಮನೆ ಬಿಡಬೇಡ ಎಂದು ತಾಯಿಗೆ ವಾಟ್ಸಪ್ ಮೆಸೇಜ್ ಕಳುಹಿಸಿ ಎಂದು ಬೆಂಗಳೂರಿನಲ್ಲಿ ಖ್ಯಾತ ಗಾಯಕಿ ಸುಶ್ಮಿತಾ ಆತ್ಮಹತ್ಯೆ ಮಾಡಿಕೊಂಡಿದ್ದರು. ಸುಶ್ಮಿತಾ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುವ ಶರತ್ ಕುಮಾರ್ ಅವರನ್ನು ಮದುವೆ ಆಗಿದ್ದರು. 

ಸುಶ್ಮಿತಾ ತನ್ನ ತಾಯಿ ಹಾಗೂ ತಮ್ಮನಿಗೆ ವಾಟ್ಸಪ್ ಮೂಲಕ ಸಂದೇಶ ರವಾನಿಸಿ ನಾಗರಬಾವಿಯಲ್ಲಿರುವ ತನ್ನ ತಾಯಿಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.

#NewsIn100Seconds ಈ ಕ್ಷಣದ ಪ್ರಮುಖ ಹೆಡ್‌ಲೈನ್ಸ್

"