ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಮತ್ತೊಬ್ಬ ವಿದ್ಯಾರ್ಥಿ ಆತ್ಮಹತ್ಯೆ; ಮಕ್ಕಳ ಜೀವದ ಜೊತೆಗೆ ಚೆಲ್ಲಾಟ

ಬೆಂಗಳೂರಿನ  ಪ್ರತಿಷ್ಠಿತ ಕಾಲೇಜಿನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಆತ್ಮಹತ್ಯೆಯ ಸರಣಿ ಮುಂದುವರೆದಿದೆ. ಈಗ ಕಾಲೇಜಿನಲ್ಲಿ ಮತ್ತೊಬ್ಬ ವಿದ್ಯಾರ್ಥಿ 5ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾನೆ.

Bengaluru prestigious college Another student commits self death at electronic city sat

ಬೆಂಗಳೂರು (ಮೇ 15): ದೇಶದಲ್ಲಿನ ಅತ್ಯಂತ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾಗಿರುವ ಪಿಇಎಸ್‌ ಕಾಲೇಜಿನಲ್ಲಿ ಮತ್ತೊಬ್ಬ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸೆಮಿಸ್ಟರ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿಯನ್ನು ಪರೀಕ್ಷೆಗೆ ಕೂರಿಸದೇ ಕಿರುಕುಳ ನೀಡಿದ್ದು, ಮನನೊಂದು 5ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಬೆಂಗಳೂರಿನ ಹೊರವಲಯ ಎಲೆಕ್ಟ್ರಾನಿಕ್ ಸಿಟಿಯ ಪಿಇಎಸ್ ಕಾಲೇಜ್ ನಲ್ಲಿ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಕರಸಾಲ ರಾಹುಲ್ (21) ಎಂದು ಗುರುತಿಸಲಾಗಿದೆ. ಎಂದಿನಂತೆ ಕಾಳೇಜು ನಡೆಯುತ್ತಿದ್ದ ಸಂದರ್ಭದಲ್ಲಿಯೇ ವಿದ್ಯಾರ್ಥಿ ಕಾಲೇಜು ಕಟ್ಟಡದ 5ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ನಿನ್ನೆ ನಡೆದಿದೆ. ಮೃತ ವಿದ್ಯಾರ್ಥಿ ಮೂಲತಃ ಆಂಧ್ರಪ್ರದೇಶದ ಕರ್ನೂಲಿನ ಕುಟುಂಬದವನಾಗಿದ್ದನು. ಕೆಲವು ವರ್ಷಗಳ ಹಿಂದೆ ಮಕ್ಕಳ ವಿದ್ಯಾಭ್ಯಾಸದ ನಿಮಿತ್ತ ಇಡೀ ಕುಟುಂಬವೇ ಬಳ್ಳಾರಿಗೆ ಬಂದು ನೆಲೆಸಿತ್ತು. ಪಿಯು ಪೂರ್ಣಗೊಳಿಸಿದ್ದ ಮಗನನ್ನು ಬೆಂಗಳೂರಿನ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಜಿನಿಯರಿಂಗ್ ಪದವಿಗೆ ದಾಖಲಿಸಿದ್ದರು. ಮಗ 5ನೇ ಸೆಮಿಸ್ಟರ್‌ನಲ್ಲಿ ಅಭ್ಯಾಸ ಮಾಡುತ್ತಿದ್ದನು. ಆದರೆ, ಕಾಲೇಜು ಆಡಳಿತ ಮಂಡಳಿಯ ಕನಿಕರವಿಲ್ಲದ ನಡೆಯಿಂದಾಗಿ ವಿದ್ಯಾರ್ಥಿ ಹೆಣವಾಗಿ ಬಿದ್ದಿದ್ದಾನೆ. 

ಕೆಂಗೇರಿ ಒಂಟಿ ಮಹಿಳೆ ಹತ್ಯೆ ಕೇಸ್‌ಗೆ ಟ್ವಿಸ್ಟ್, ಲವರ್‌ಗೆ ಗಾಡಿ ಕೊಡಿಸಲು ರೀಲ್ಸ್ ರಾಣಿಯಿಂದ ಡೆಡ್ಲಿ ಮರ್ಡರ್!

ಮೃತ ವಿದ್ಯಾರ್ಥಿ ಕರಸಾಲ ರಾಹುಲ್ ಕಂಪ್ಯೂಟರ್ ಸೈನ್ಸ್ ವ್ಯಾಸಂಗ ಮಾಡುತ್ತಿದ್ದನು. ಇಂಜಿನಿಯರಿಂಗ್ 5ನೇ ಸೆಮಿಸ್ಟರ್ ನಲ್ಲಿ ಓದುತ್ತಿದ್ದನು. ನಿನ್ನೆ ಕಾಲೇಜಿನಲ್ಲಿ ನಡೆಯುತ್ತಿದ್ದ ಪರೀಕ್ಷೆಗೆ ತಡವಾಗಿ ಬಂದಿದ್ದನು. ಈ ವಿಚಾರವಾಗಿ ವಿಧ್ಯಾರ್ಥಿಯನ್ನ ಪರೀಕ್ಷೆಗೆ ಕೂರಿಸದೇ ಕಾಲೇಜಿನ ಎಲ್ಲ ಸಿಬ್ಬಂದಿ ನಿಂದಿಸಿ ಹೊರಗೆ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದರಿಂದ ಮನನೊಂದು ವಿಧ್ಯಾರ್ಥಿ 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯಿದೆ. ಇನ್ನು ವಿದ್ಯಾರ್ಥಿಯ ಮೃತದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಇನ್ನು ಸ್ಥಳಕ್ಕೆ ಪರಪ್ಪನ ಅಗ್ರಹಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ದೇಶದ ಸೆಕ್ಸ್‌ ರಾಜಧಾನಿ ಯಾವ್ದು, ಪುಣೆಯೋ? ಬೆಂಗಳೂರೋ? ಎಕ್ಸ್‌ನಲ್ಲಿ ಸಖತ್‌ ಚರ್ಚೆ!

ಬೆಂಗಳೂರಿನ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾಗಿರುವ ಪಿಇಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆಗಿಂದಾಗ್ಗೆ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗುತ್ತಿರುವ ಘಟನೆಗಳು ಮರುಕಳಿಸುತ್ತಲೇ ಇವೆ. ಆದರೂ, ಕಾಲೇಜು ಆಡಳಿತ ಮಂಡಳಿ ಮಾತ್ರ ಯಾವುದೇ ಕ್ರಮವನ್ನೂ ಕೈಗೊಳ್ಳುವುದಿಲ್ಲ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿಯೂ ಕೂಡ ಪೋಷಕರು ಮತ್ತು ವಿದ್ಯಾರ್ಥಿಗಳು ಭಾರೀ ಆಕ್ರೋಶ ಹೊರ ಹಾಕಿದ್ದಾರೆ. ಕಾಲೇಜಿನ ಸಿಬ್ಬಂದಿಯಿಂದ ವಿದ್ಯಾರ್ಥಿಗಳಿಗೆ ಉಂಟಾಗುವ ತೊಂದರೆಯನ್ನು ತಡೆಯುವ ನಿಟ್ಟಿನಲ್ಲಿ ಕಾಲೇಜು ಆಡಳಿತ ಮಂಡಳಿ ಯಾವುದೇ ಕ್ರಮ ಕೈಗೊಳ್ಳದಿರುವುದು ವಿದ್ಯಾರ್ಥಿಗಳ ಸಾವಿಗೆ ನೇರ ಕಾರಣ ಎಂದು ಆಕ್ರೋಶ ಹೊರ ಹಾಕಿದ್ದಾರೆ.

Latest Videos
Follow Us:
Download App:
  • android
  • ios