ಬೆಂಗಳೂರಿನ ಭದ್ರಪ್ಪ ಲೇಔಟ್‌ನಲ್ಲಿ ಒಬ್ಬಂಟಿ ಮಹಿಳೆಯನ್ನು ಬೆತ್ತಲೆಗೊಳಿಸಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಳಕಿಗೆ ಬಂದಿದೆ.

ಬೆಂಗಳೂರು (ಏ.20): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮನೆಗೆ ನುಗ್ಗಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಆದರೆ, ಕೊಲೆಗೆ ಕಾರಣವೇನು ಎಂಬುದು ಮಾತ್ರ ಪತ್ತೆಯಾಗಿಲ್ಲ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ದುರ್ಘಟನೆ ಬೆಂಗಳೂರಿನ ಕೊಡಿಗೇಹಳ್ಳಿಯ ಭದ್ರಪ್ಪ ಲೇಔಟನಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಶೋಭಾ ಎಂದು ಗುರುತಿಸಲಾಗಿದೆ. ಭದ್ರಪ್ಪ ಲೇಔಟ್ ಮನೆಯಲ್ಲಿ ಕುಟುಂಬ ಸಮೇತ ವಾಸವಿದ್ದ ಶೋಭಾ ತನ್ನ ಇಬ್ಬರು ಹೆಣ್ಣು ಮಕ್ಕಳನ್ನು ಮದುವೆ ಮಾಡಿ ಕೊಟ್ಟಿದ್ದಾಳೆ. ಇನ್ನು ಮನೆಯಲ್ಲಿ ಆಗಾಗ್ಗೆ ಒಬ್ಬರೇ ಇರುತ್ತಿದ್ದರು. ಅವರ ಒಬ್ಬ ಮಗಳು ಗಂಡನ ಮನೆಯಿಂದ ಅಮ್ಮ ಶೋಭಾಗೆ ಕರೆ ಮಾಡಿದ್ದಾಳೆ. ಆದರೆ, ಎಷ್ಟೇ ಸಾರಿ ಕರೆ ಮಾಡಿದರೂ ಫೋನ್ ಸ್ವೀಕರಿದಲಿಲ್ಲ.

ಬೆಂಗಳೂರಲ್ಲಿ ಹಾಡಹಗಲೇ ಡಬಲ್ ಮರ್ಡರ್; ಕಣ್ಣಮುಂದೆ ಮಗಳನ್ನು ಕೊಲೆಗೈದ ಪ್ರೇಮಿಯನ್ನು ಕಲ್ಲಿನಿಂದ ಚಚ್ಚಿ ಕೊಂದ ತಾಯಿ!

ತಾಯಿ ಶೋಭಾ ಕರೆ ಸ್ವೀಕರದ ಹಿನ್ನೆಲೆಯಲ್ಲಿ ಮಗಳು ಮನೆಯ ಹತ್ತಿರ ಬಂದು ನೋಡಿದ್ದಾಳೆ. ಆಗ ತಾಯಿಯ ಬೆತ್ತಲೆ ಶವ ಕಂಡುಬಂದಿದೆ. ಕೂಡಲೇ ಭಯಗೊಂಡ ಮಗಳು ಮನೆಯವರಿಗೆ ಮಾಹಿತಿ ನೀಡಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಕೊಡಿಗೇಹಳ್ಳಿ ಪೊಲೀಸರು ಪರಿಶೀಲನೆ ಮಾಡಿದ್ದಾರೆ. ನಂತರ, ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದಾರೆ. ಆದರೆ, ಯಾರು ಕೊಲೆ ಮಾಡಿದ್ದಾರೆ. ಯಾವ ಕಾರಣಕ್ಕೆ ಕೊಲೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿಲ್ಲ ಎಂದು ತಿಳಿದುಬಂದಿದೆ.