ಬೆಂಗಳೂರು(ಮೇ 21) ಅಪಾರ್ಟ್ ಮೆಂಟ್ ನಿಂದ ಹಾರಿ ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.   ರಾಮಮೂರ್ತಿನಗರ ಠಾಣಾ ವ್ಯಾಪ್ತಿಯ ಬೆನ್ನಿಗಾನಹಳ್ಳಿ ಟೆಕ್ಕಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಉತ್ತಮ್ ಹೆಗಡೆ (30) ಸಾವನ್ನಪ್ಪಿದ ಟೆಕ್ಕಿ. ಮೃತ ಟೆಕ್ಕಿ ತನ್ನ ಕುಟುಂಬದೊಂದಿಗೆ ಅಪಾರ್ಟ್‍ಮೆಂಟ್‍ನ ಫ್ಲ್ಯಾಟ್‍ವೊಂದರಲ್ಲಿ ವಾಸಮಾಡುತ್ತಿದ್ದ. ನಗರದ ಖಾಸಗಿ ಕಂಪನಿಯಲ್ಲಿ  ಸಾಫ್ಟ್‌ ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಉತ್ತಮ್ ಹೆಗಡೆ ಬುಧವಾರ ರಾತ್ರಿ ಎಂದಿನಂತೆ ಎಲ್ಲರೊಂದಿಗೆ ಬೆರೆತು ಊಟ ಮಾಡಿ ಮಲಗಿದ್ದ.

ಹೆಂಡತಿ ವರ್ತನೆಗೆ ಬೇಸತ್ತ ಗಂಡ ಆತ್ಮಹತ್ಯೆಗೆ ಶರಣು

ಆದರೆ ಗುರುವಾರ ನಸುಕಿವ ಜಾವ 3 ಗಂಟೆ ಸಮಯದಲ್ಲಿ ಅಪಾರ್ಟ್‍ಮೆಂಟ್ ನಿಂದ ಹಾರಿ ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.  ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಸಿವಿ ರಾಮನ್ ನಗರ ಆಸ್ಪತ್ರೆಗೆ ಕಳುಹಿಸಲಾಗಿದೆ. ಮದುವೆ ವಿಚಾರಕ್ಕೆ ಸಂಬಂಧಿಸಿದ ಕಾರಣದಿಂದಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.