ಬೆಂಗಳೂರು (ಡಿ. 22): ಬೆಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.ಬೆಂಗಳೂರಿನ ಕೆಂಗೇರಿಯಲ್ಲಿ ಅವರ ನಿವಾಸದಲ್ಲಿ  ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.  

ಕಳೆದ 4 ದಿನಗಳಿಂದ ನಂಜುಂಡನ್ ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಪಾಠ ಮಾಡಲು ಹೋಗಿರಲಿಲ್ಲ. ಅವರಿಗೆ ಅನಾರೋಗ್ಯವಾಗಿರಬಹುದು ಎಂದು ವಿಶ್ವವಿದ್ಯಾಲಯದ ಸಾಂಖ್ಯಿಕ ವಿಭಾಗದ ಸಿಬ್ಬಂದಿ ನಂಜುಂಡನ್ ಅವರ ಮನೆಗೆ ಬಂದಿದ್ದರು. 

ಬೆಂಗಳೂರು: ಕಂಡಕ್ಟರ್ ಮೇಲಿನ ಆ್ಯಸಿಡ್ ದಾಳಿ‌ ಹಿಂದೆ ಮೈದುನ -ಅತ್ತಿಗೆಯ ಪ್ರೇಮ್ ಕಹಾನಿ

ಎಷ್ಟೇ ಬಾಗಿಲು ಬಡಿದರೂ ಬಾಗಿಲು ತೆಗೆಯದ ಕಾರಣ ತಮಿಳುನಾಡಿನಲ್ಲಿದ್ದ ನಂಜುಂಡನ್ ಪತ್ನಿಗೆ ವಿಷಯ ತಿಳಿಸಿದ್ದಾರೆ. ವಿಷಯ ತಿಳಿದ ಕೂಡಲೆ ತಮಿಳುನಾಡಿನಿಂದ ಹೊರಟುಬಂದ ಪತ್ನಿ ಬಾಗಿಲು ಬಡಿದು, ಫೋನ್ ಮಾಡಿದರೂ ಬಾಗಿಲು ತೆರೆಯದ ಕಾರಣ ಕೆಂಗೇರಿ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು.

ಶನಿವಾರ ಪೊಲೀಸರು ಬಂದು ಬಾಗಿಲು ಒಡೆದು ನೋಡಿದಾಗ ಕೊಳೆತ ಸ್ಥಿತಿಯಲ್ಲಿ ನಂಜುಂಡನ್ ಮೃತದೇಹ ಪತ್ತೆಯಾಗಿದೆ.

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನೂ ಪಡೆದಿದ್ದ ನಂಜುಂಡನ್ ಅನುವಾದ ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿದ್ದರು. ಯು.ಆರ್. ಅನಂತಮೂರ್ತಿ ಅವರ ಕೃತಿಗಳನ್ನು ತಮಿಳಿಗೆ ಅನುವಾದ ಮಾಡಿದ್ದ ನಂಜುಂಡನ್ ಕೆಂಗೇರಿಯ ನಾಗದೇವನಹಳ್ಳಿಯಲ್ಲಿ ವಾಸವಾಗಿದ್ದರು. 

 ನಂಜುಂಡನ್ 4 ದಿನಗಳ ಹಿಂದೆಯೇ ಹೃದಯಾಘಾತದಿಂದ ಸಾವನ್ನಪ್ಪಿರುವ ಸಾಧ್ಯತೆಯಿದೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಆದ್ರೆ, ನಿಖರವಾದ ಕಾರಣ ತಿಳಿದುಬಂದಿಲ್ಲ. ಈ ಕುರಿತು ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.