ವಿದ್ಯುತ್ ಬಿಲ್ ವಸೂಲಿಗೆ ತೆರಳಿದ್ದ ಬೆಸ್ಕಾಂ ಸಿಬ್ಬಂದಿಗೆ ಅಟ್ಟಾಡಿಸಿ ಹೊಡೆದ ಗ್ರಾಮಸ್ಥರು

* ಬೆಸ್ಕಾಂ ಸಿಬ್ಬಂದಿಗೆ ಅಟ್ಟಾಡಿಸಿ ಕಲ್ಲು, ದೊಣ್ಣೆಗಳಲ್ಲಿ ಹಲ್ಲೆ ನಡೆಸಿದ ಗ್ರಾಮಸ್ಥರು
* ತುಮಕೂರು ಜಿಲ್ಲೆ, ಶಿರಾ ತಾಲೂಕಿನ ಚಿಕ್ಕನಕೋಟೆ ಗೊಲ್ಲರಹಟ್ಟಿಯಲ್ಲಿ ಘಟನೆ
* ವಿದ್ಯುತ್ ಬಿಲ್ ವಸೂಲಿಗಾಗಿ ತೆರಳಿದ್ದ ಬೆಸ್ಕಾಂ ಸಿಬ್ಬಂದಿ

bescom workers injured after beaten up by villagers at Tumakuru District rbj

ತುಮಕೂರು, (ಸೆ.29): ವಿದ್ಯುತ್ ಬಿಲ್ ವಸೂಲಿಗಾಗಿ ತೆರಳಿದ್ದ ಬೆಸ್ಕಾಂ (Bescom) ಸಿಬ್ಬಂದಿಗೆ ಅಟ್ಟಾಡಿಸಿ ಕಲ್ಲು, ದೊಣ್ಣೆಗಳಿಂದ ಹೊಡೆದ ಘಟನೆ ತುಮಕೂರು (Tumakuru) ಜಿಲ್ಲೆ, ಶಿರಾ ತಾಲೂಕಿನ ಚಿಕ್ಕನಕೋಟೆ ಗೊಲ್ಲರಹಟ್ಟಿಯಲ್ಲಿ ನಡೆದಿದೆ.

"

ವಿದ್ಯುತ್ ಬಿಲ್ ವಸೂಲಿಗಾಗಿ ಶಾಖಾಧಿಕಾರಿ ತೆರಳಿದ್ದರು. ಈ ವೇಳೆ ಗ್ರಾಮಸ್ಥರು ಕಲ್ಲು ದೊಣ್ಣೆಗಳಿಂದ ಹಲ್ಲೆ (Assault ) ನಡೆಸಿದ್ದಾರೆ. ಗ್ರಾಮಸ್ಥರು ಹಲ್ಲೆ ನಡೆಸಿರುವ ವಿಡಿಯೋ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಇದೀಗ ಅದು ಎಲ್ಲೆಡೆ (Video) ವೈರಲ್‌ ಆಗಿದೆ.

ಬೆಳಗಾವಿ; ಕೋರ್ಟ್ ಆವರಣದಲ್ಲೇ ಪತ್ನಿ ಕಾಲು ತುಂಡರಿಸಿದ ನಿವೃತ್ತ ಸೈನಿಕ

 ಮೊಬೈಲ್​ನಲ್ಲಿ ಸೆರೆಯಾಗಿದೆ. ಲೈನ್ ಮ್ಯಾನ್​ಗಳಾದ ಭೂತರಾಜು, ನರಸಿಂಹರಾಜು, ತಿಪ್ಪೇಸ್ವಾಮಿ ಎಂಬುವರ ಮೇಲೆಯೂ ಹಲ್ಲೆ ನಡೆಸಿದ್ದು, ಶಾಖಾಧಿಕಾರಿ ರಾಜಣ್ಣಗೆ ಗಂಭೀರ ಗಾಯವಾಗಿದೆ. ಸದ್ಯ  ಗಾಯಾಳುಗಳೆಲ್ಲರನ್ನೂ ಶಿರಾ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಈ ಘಟನೆಯ ಹಿಂದಿನ ನಿಖರ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

Latest Videos
Follow Us:
Download App:
  • android
  • ios