ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ನೀಡಿದ ಹೈಕೋರ್ಟ್; ಆದ್ರೆ ಹಾಸನಕ್ಕೆ ಹೋಗುವಂತಿಲ್ಲ!
ಹಾಸನದ ಅತ್ಯಾಚಾರ ಸಂತ್ರಸ್ತ ಮಹಿಳೆಯ ಕಿಡ್ನಾಪ್ ಪ್ರಕರಣದಲ್ಲಿ ಹೈಕೋರ್ಟ್‌ನಿಂದ ತಾಯಿ ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ. ಆದರೆ, ಭವಾನಿ ಹಾಸನಕ್ಕೆ ಪ್ರವೇಶ ಮಾಡದಂತೆ ನಿರ್ಬಂಧ ವಿಧಿಸಿದೆ.
ಬೆಂಗಳೂರು (ಜೂ.18): ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರಕ್ಕೆ ಒಳಗಾಗಿದ್ದಾರೆನ್ನಲಾದ ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಿದ ಪ್ರಕರಣದಲ್ಲಿ ಅವರ ತಾಯಿ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ. ಆದರೆ, ಭವಾನಿ ಹಾಸನಕ್ಕೆ ಪ್ರವೇಶ ಮಾಡದಂತೆ ನಿರ್ಬಂಧ ವಿಧಿಸಿದೆ.
ಹಾಸನದ ಕೆ.ಆರ್. ನಗರ ಮಹಿಳೆಯ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ. ಒಟ್ಟಾರೆ 85 ಪ್ರಶ್ನೆಗಳಿಗೆ ಭವಾನಿ ರೇವಣ್ಣ ಉತ್ತರಿಸಿದ್ದಾರೆ. ಹೀಗಾಗಿ ತನಿಖೆಗೆ ಸಹಕರಿಸಿಲ್ಲ ಎಂಬ ವಾದ ಒಪ್ಪಲಾಗುವುದಿಲ್ಲ. ಪೊಲೀಸರಿಗೆ ಬೇಕಾದಂತಹ ಉತ್ತರ ಕೊಡಬೇಕೆಂದಿಲ್ಲ. ಸಂತ್ರಸ್ತ ಮಹಿಳೆಗೆ ಊಟ, ಬಟ್ಟೆ ಕೊಟ್ಟಿಲ್ಲವೆಂಬ ವಾದವನ್ನೂ ಒಪ್ಪಲಾಗುವುದಿಲ್ಲ. ಸ್ವಃ ಸಂತ್ರಸ್ತ ಮಹಿಳೆಯೇ ಭವಾನಿ ಅಕ್ಕ ಬಟ್ಟೆ, ಊಟ ಕಳುಹಿಸಿದ್ದರೆಂದು ಹೇಳಿಕೆ ನೀಡಿದ್ದಾರೆ. ಈ ಎಲ್ಲ ಅಂಶಗಳನ್ನು ಪರಿಗಣಿಸಿ ಹೈಕೋರ್ಟ್ ಪೀಠದ ನ್ಯಾಯಮೂರ್ತಿಗಳಾದ ಕೃಷ್ಣ ಎಸ್. ದೀಕ್ಷಿತ್ ಅವರು ನಿರೀಕ್ಷಣಾ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ.
ಪುರುಷತ್ವ, ಮರ್ಮಾಂಗ ಸೇರಿದಂತೆ ಅತ್ಯಾಚಾರಿಗಳಿಗೆ ನಡೆಸುವ ವೈದ್ಯಕೀಯ ಪರೀಕ್ಷೆಗೆ ಪ್ರಜ್ವಲ್ ರೇವಣ್ಣ
ಮೈಸೂರು ಹಾಸನಕ್ಕೆ ಪ್ರವೇಶ ಮಾಡುವಂತಿಲ್ಲ:
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ಸಂತ್ರಸ್ತೆ ಅಪಹರಿಸಿದ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಸಲ್ಲಿಸಿರುವ ಅರ್ಜಿಯ ಸಂಬಂಧ ಜೂ.14ರಂದು ವಾದ-ಪ್ರತಿವಾದ ಆಲಿಸಿ ವಿಚಾರಣೆ ಪೂರ್ಣಗೊಳಿಸಿದ್ದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರು ಮಂಗಳವಾರಕ್ಕೆ ತೀರ್ಪು ಕಾಯ್ದಿರಿಸಿದ್ದರು. ಈ ಹಿನ್ನೆಲೆಯಲ್ಲಿ ಅರ್ಜಿಯ ಕುರಿತು ತೀರ್ಪು ನೀಡಿದ ನ್ಯಾಯಮೂರ್ತಿಗಳು ಷರತ್ತು ಬದ್ಧ ನಿರೀಕ್ಷಣಾ ಜಾಮೀನು ನೀಡಿದ್ದಾರೆ. ಜೊತೆಗೆ, ಭವಾನಿ ರೇವಣ್ಣ ಅವರು ಮೈಸೂರು, ಹಾಸನ ಜಿಲ್ಲೆ ಪ್ರವೇಶಿಸುವಂತಿಲ್ಲವೆಂದು ಷರತ್ತು ವಿಧಿಸಲಾಗಿದೆ.
ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಎಂಬ ಆರೋಪ ಸಂಬಂಧ ಮೈಸೂರಿನ ಕೆ.ಆರ್. ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪ್ರಕರಣದಲ್ಲಿ ಆರೋಪಿಯಾಗಿರುವ ಭವಾನಿ ಅವರಿಗೆ ಎಸ್‌ಐಟಿ ತನಿಖಾಧಿಕಾರಿಗಳಿಂದ ಬಂಧನ ಭೀತಿ ಎದುರಾಗಿತ್ತು. ಈ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಭವಾನಿ ಅವರು ಕೋರಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿ ಆದೇಶಿಸಿತ್ತು. ಇದರಿಂದ ಅವರು ಹೈಕೋರ್ಟ್ ಮೊರೆ ಹೋಗಿದ್ದರು.
ಜಿಪಂ ಮಾಜಿ ಸದಸ್ಯೆ ರೇಪ್ ಕೇಸ್: ಪ್ರಜ್ವಲ್ ರೇವಣ್ಣ 6 ದಿನ ಎಸ್‌ಐಟಿ ವಶಕ್ಕೆ
ಇನ್ನು ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜೂ.7ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್, ಭವಾನಿ ಅವರಿಗೆ ಮಧ್ಯಂತರ ಜಾಮೀನು ನೀಡಿತ್ತು. ನಂತರ, ಣವಾನಿ ಅವರು ತನಿಖಾಧಿಕಾರಿ ಮುಂದೆ ಹಾಜರಾಗಿ ತನಿಖೆಗೆ ಸಹಕರಿಸಬೇಕು. ತನಿಖಾಧಿಕಾರಿಗಳು ಭವಾನಿ ಅವರನ್ನು ಬಂಧಿಸಬಾರದು ಎಂದು ಹೈಕೋರ್ಟ್ ನಿರ್ದೇಶಿಸಿತ್ತು.ಇನ್ನು ಇದೇ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಭವಾನಿ ಅವರ ಪತಿ ಮಾಜಿ ಸಚಿವ ಎಚ್.ಡಿ. ರೇವಣ್ಣ ಜಾಮೀನು ಮೇಲೆ ಬಿಡುಗಡೆಯಾಗಿದ್ದಾರೆ.