Asianet Suvarna News Asianet Suvarna News

ಅಪ್ರಾಪ್ತ ಬಾಲಕಿ ರೇಪ್‌ ಮಾಡಿ ಇನ್ಸ್ಟಾಗ್ರಾಮ್‌ನಲ್ಲಿ ಫೋಟೋಗಳನ್ನು ಹಾಕಿದ ಗಾಯಕನ ಬಂಧನ

ಆರೋಪಿಯು ಎರಡು ವರ್ಷಗಳ ಹಿಂದೆ ರಾಜೀವ್ ನಗರದಲ್ಲಿ ವಾಸಿಸುತ್ತಿದ್ದ 13 ವರ್ಷದ ಬಾಲಕಿಗೆ ಆಮಿಷವೊಡ್ಡಿದ್ದ. ಆಕೆಯೊಂದಿಗೆ ಸ್ನೇಹ ಬೆಳೆಸಿದ ಬಳಿಕ ಆಕೆಯನ್ನು ಹೋಟೆಲ್ ರೂಮಿಗೆ ಕರೆದೊಯ್ದು ಅತ್ಯಾಚಾರವೆಸಗಿ ಆಕೆಯ ಫೋಟೋಗಳನ್ನು ತೆಗೆದಿದ್ದಾನೆ ಎಂದು ತಿಳಿದುಬಂದಿದೆ. 

bhojpuri singer arrested for raping 13 years old girl posting photos on instagram ash
Author
First Published Jun 9, 2023, 12:21 PM IST

ಗುರುಗ್ರಾಮ (ಜೂನ್ 9, 2023): ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಚಿತ್ರಗಳನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಭೋಜ್‌ಪುರಿ ಗಾಯಕನನ್ನು ಗುರುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ಬಿಹಾರ ಮೂಲದ ಅಭಿಷೇಕ್ (21) ಎಂದು ಗುರುತಿಸಲಾಗಿದ್ದು, ಆತನನ್ನು ಭೋಜ್‌ಪುರಿ ಗಾಯಕ ಬಾಬುಲ್ ಬಿಹಾರಿ ಎಂದೂ ಗುರುತಿಸಲಾಗಿದೆ. 

ಈತ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ 27,000 ಕ್ಕೂ ಹೆಚ್ಚು ಫಾಲೋವರ್‌ಗಳನ್ನು ಹೊಂದಿದ್ದಾನೆ. ಪೊಲೀಸರ ಪ್ರಕಾರ, ಆರೋಪಿಯು ಎರಡು ವರ್ಷಗಳ ಹಿಂದೆ ರಾಜೀವ್ ನಗರದಲ್ಲಿ ವಾಸಿಸುತ್ತಿದ್ದ 13 ವರ್ಷದ ಬಾಲಕಿಗೆ ಆಮಿಷವೊಡ್ಡಿದ್ದ. ಆಕೆಯೊಂದಿಗೆ ಸ್ನೇಹ ಬೆಳೆಸಿದ ಬಳಿಕ ಆಕೆಯನ್ನು ಹೋಟೆಲ್ ರೂಮಿಗೆ ಕರೆದೊಯ್ದು ಅತ್ಯಾಚಾರವೆಸಗಿ ಆಕೆಯ ಫೋಟೋಗಳನ್ನು ತೆಗೆದಿದ್ದಾನೆ ಎಂದು ತಿಳಿದುಬಂದಿದೆ. 

ಇದನ್ನು ಓದಿ: ಅಪ್ರಾಪ್ತ ಬಾಲಕಿ ಮೇಲೆ ಹಲವು ಬಾರಿ ಗ್ಯಾಂಗ್‌ ರೇಪ್‌: ಕೃತ್ಯ ಸೆರೆ ಹಿಡಿದು ಕಾಮುಕರ ಬ್ಲ್ಯಾಕ್‌ಮೇಲ್‌

ಅಲ್ಲದೆ, ಘಟನೆಯ ನಂತರ ಅಪ್ರಾಪ್ತ ಬಾಲಕಿ ಆರೋಪಿಯಿಂದ ದೂರ ಉಳಿದಿದ್ದು, ಆತನ ಬಗ್ಗೆ ಯಾರಿಗೂ ಹೇಳಿರಲಿಲ್ಲ. ಆದರೆ, ಆರೋಪಿಯು ಕೆಲವು ದಿನಗಳ ಹಿಂದೆ ಅಪ್ರಾಪ್ತ ಬಾಲಕಿಯ ಚಿತ್ರಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆ ಚಿತ್ರಗಳನ್ನು ನೋಡಿದ ನಂತರ, ಸಂತ್ರಸ್ತೆಯ ಕುಟುಂಬದವರು ಬಾಲಕಿಯನ್ನು ಪ್ರಶ್ನಿಸಿದ್ದು, ನಂತರ ಬಾಲಕಿ ಆ ಘಟನೆಯ ಬಗ್ಗೆ ಬಾಯ್ಬಿಟ್ಟಿದ್ದಾಳೆ.

ಬಳಿಕ, ಸಂತ್ರಸ್ತೆಯ ಕುಟುಂಬದವರು ಬುಧವಾರ ಆಕೆಯನ್ನು ಪೊಲೀಸ್‌ ಠಾಣೆಗೆ ಕರೆದೊಯ್ದಿದ್ದಾರೆ. ಸಂತ್ರಸ್ತೆಗೆ ಕೌನ್ಸಿಲಿಂಗ್ ಮಾಡಿದ ನಂತರ, ಆರೋಪಿಯ ವಿರುದ್ಧ ಸೆಕ್ಟರ್ 14 ಪೊಲೀಸ್ ಠಾಣೆಯಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆ ಮತ್ತು ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ದೂರಿನ ಅನ್ವಯ ಎಫ್‌ಐಆರ್‌ ದಾಖಲಿಸಿಕೊಂಡು ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್‌ ವಕ್ತಾರ ಸುಭಾಷ್‌ ಬೊಕೆನ್‌ ತಿಳಿಸಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ಸೋದರರ ಬಲೆಯಲ್ಲಿ ಬಿದ್ದ ಇಬ್ಬರು ಹಿಂದೂ ಸೋದರಿಯರು: ಪೋಷಕರ ವಿರೋಧಕ್ಕೆ ಬೇಸತ್ತು ಯುವತಿಯರ ಆತ್ಮಹತ್ಯೆ!

ಅಲ್ಲದೆ, "ಆತನನ್ನು ನಗರದ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಮತ್ತು ಇಂದು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ" ಎಂದೂ ಪೊಲೀಸರು ಹೇಳಿದ್ದಾರೆ. 

ರಾಜಸ್ಥಾನದಲ್ಲಿ ಗ್ಯಾಂಗ್‌ರೇಪ್‌, ಬ್ಲ್ಯಾಕ್‌ಮೇಲ್‌ ಮಾಡಿದ್ದ ಆರೋಪಿಗಳ ಹೆಡೆಮುರಿ ಕಟ್ಟಿದ್ದ ಪೊಲೀಸರು
ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಬ್ಲ್ಯಾಕ್‌ ಮೇಲ್ ಮಾಡಿದ ಆರೋಪದ ಮೇಲೆ ಇಬ್ಬರನ್ನು ರಾಜಸ್ಥಾನ ಪೊಲೀಸರು ಬಂಧಿಸಿದ್ದಾರೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಬಂಧಿತರು ಬಾಲಕಿಯ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆ, ಹಾಗೂ ಈ ಹೀನ ಕೃತ್ಯವನ್ನು ರೆಕಾರ್ಡ್ ಮಾಡಿದ್ದಾರೆ ಮತ್ತು ಆಕೆಯ ಫೋಟೋಗಳು ಮತ್ತು ವೀಡಿಯೊಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದೂ ತಿಳಿದುಬಂದಿದೆ.

ಈ ಕೃತ್ಯವೆಸಗಿದ ಆರೋಪಿಗಳನ್ನು ಶಾರಿಕ್ ಹುಸೇನ್ (21) ಮತ್ತು ಸಲ್ಮಾನ್ ಅಲಿ (21) ಎಂದು ಗುರುತಿಸಲಾಗಿದ್ದು, ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ ಶಹಬಾಜ್‌ಪುರ ಕಾಲಾ ನಿವಾಸಿಗಳು ಎಂದೂ ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆಯ ಸಂಬಂಧಿಕರು ಮಾರ್ಚ್ 10 ರಂದು ದೂರು ದಾಖಲಿಸಿದ್ದರು ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ರಾಮಮೂರ್ತಿ ಜೋಶಿ ಮಾಹಿತಿ ನೀಡಿದ್ದಾರೆ. ತಮ್ಮ ಮಗಳು ಮದುವೆಗೆ ಹೋಗುತ್ತಿದ್ದಾಗ ಆರೋಪಿ ಶಾರಿಕ್ ಹುಸೇನ್‌ ತನ್ನ ಮನೆಗೆ ಕರೆದೊಯ್ದಿದ್ದಾನೆ ಎಂದೂ ದೂರಿನಲ್ಲಿ ತಿಳಿಸಲಾಗಿದೆ.
 

ಇದನ್ನೂ ಓದಿ: ಸಂಗಾತಿ ಮೃತದೇಹ ತುಂಡು ತುಂಡು ಮಾಡಿ ಬೀದಿ ನಾಯಿಗೆ ಹಾಕ್ದ: ಶ್ರದ್ಧಾ ವಾಕರ್‌ ಹಂತಕನೇ ಇವನಿಗೆ ಸ್ಪೂರ್ತಿ!

Follow Us:
Download App:
  • android
  • ios