Asianet Suvarna News Asianet Suvarna News

ಹುಲಿ ಉಗುರಿನ ಲಾಕೆಟ್‌ ಪ್ರಕರಣ, ಬಿಗ್‌ಬಾಸ್‌ ಸ್ಪರ್ಧಿ ವರ್ತೂರು ಸಂತೋಷ್‌ಗೆ 14 ದಿನ ನ್ಯಾಯಾಂಗ ಬಂಧನ

ಹುಲಿ ಉಗುರಿನ ಲಾಕೆಟ್‌ ಧರಿಸಿದ ಆರೋಪದಲ್ಲಿ ಬಂಧನವಾಗಿರುವ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಗೆ ನ್ಯಾಯಾಧೀಶರು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

bigg boss kannada contestant varthur santhosh 14 days judicial custody in tiger claw locket case gow
Author
First Published Oct 23, 2023, 4:12 PM IST

ಬೆಂಗಳೂರು (ಅ.23): ಹುಲಿ ಉಗುರಿನ ಲಾಕೆಟ್‌ ಧರಿಸಿದ ಆರೋಪದಲ್ಲಿ ಬಂಧನವಾಗಿರುವ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಗೆ  14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯಾಧಿಕಾರಿಗಳು 2ನೇ ಎಸಿಜೆಎಂ ಕೋರ್ಟ್ ನ ಮ್ಯಾಜಿಸ್ಟ್ರೇಟ್ ನಿವಾಸಕ್ಕೆ ಹಾಜರು ಪಡಿಸಿದ್ದರು. ವಿಚಾರಣೆ ನಡೆಸಿದ ಎಸಿಜೆಎಂ ನ್ಯಾಯಧೀಶರು  ಬಳಿಕ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.  ಹಬ್ಬದ ಹಿನ್ನೆಲೆ ಎರಡು ದಿನ ಕೋರ್ಟ್ ರಜೆ ಇದ್ದ ಕಾರಣ  ಕೋರಮಂಗಲದ ನ್ಯಾಷನಲ್ ಗೇಮ್ಸ್ ವಿಲೇಜ್ ನಲ್ಲಿರುವ ಜಡ್ಜ್‌ ನಿವಾಸಕ್ಕೆ ಕರೆದೊಯ್ದು ಸಂತೋಷ್‌ರನ್ನು ಹಾಜರು ಪಡಿಸಲಾಯ್ತು.

ವರ್ತೂರ್‌ ಸಂತೋಷ್‌ ವಿಲಾಸಿ ಜೀವನ, ಅರಮಾಗಿ ಓಡಾಡ್ಕೊಂಡು ಇದ್ದ: ವಕೀಲರ ಪ್ರತಿಕ್ರಿಯೆ

ನ್ಯಾಯಾಂಗ ಬಂಧನದ ಬಳಿಕ ಪ್ರತಿಕ್ರಿಯೆ ನೀಡಿರುವ ವರ್ತೂರು ಸಂತೋಷ್ ಪರ ವಕೀಲ ನಟರಾಜ್ ಜಾಮೀನು ಅರ್ಜಿ ಹಾಕಿದ್ದೀವಿ. ಬುಧವಾರ ವಿಚಾರಣೆ ಇದೆ. ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ. ಸುಪ್ರೀಂ ಕೋರ್ಟ್ ಆದೇಶದಂತೆ ತನಿಖಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನಂತರ  ಬಂಧಿಸಿದ್ದಾರೆ. ಈಗ ಹುಲಿದು ಅಂತಾ ಹೇಳ್ತಿದ್ದಾರೆ. ಎಕ್ಸ್ಫರ್ಟ್ ಪರಿಶೀಲನೆ ನಡೆಸಿ ವರದಿ ಬಂದ ಬಳಿಕ ಗೊತ್ತಾಗಲಿದೆ.

3 ವರ್ಷಗಳ ಹಿಂದೆ ಹುಲಿ ಉಗುರು ಖರೀದಿಸಿದ ಬಗ್ಗೆ ಬಿಗ್‌ಬಾಸ್‌ ವರ್ತೂರ್‌ ಸಂತೋಷ್‌ ತಪ್ಪೊಪ್ಪಿಗೆ

ಹೊಸೂರು ರಸ್ತೆಯಲ್ಲಿ ಮೂರು ವರ್ಷದ ಹಿಂದೆ ಖರೀದಿ ಮಾಡಿದ್ದಾರೆ. ಬಿಲ್ ಬಗ್ಗೆ ಇನ್ನೂ ಮಾಹಿತಿ ಸಿಕ್ಕಿಲ್ಲ. ಸದ್ಯ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ. ಕೋರ್ಟ್ ರಜೆ ಇರುವ ಹಿನ್ನೆಲೆ ಬುಧವಾರ ಆಕ್ಷೇಪಣಾ ಅರ್ಜಿ ಸಲ್ಲಿಸಲಾಗುತ್ತೆ ಎಂದು ವಕೀಲ ಕೆ‌. ನಟರಾಜ್ ಹೇಳಿಕೆ ನೀಡಿದ್ದಾರೆ.

ಹುಲಿ ಉಗುರು ಧರಿಸಿದ್ಧ ವರ್ತೂರು ಸಂತೋಷ್ ಬಂಧನ, ಬಿಗ್ ಬಾಸ್ ಇತಿಹಾಸದಲ್ಲೇ ಇದು ಮೊದಲು! 

ಸದ್ಯ 14 ದಿನ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ವರ್ತೂರು ಸಂತೋಷ್ ಅವರನ್ನು ಪರಪ್ಪನ ಅಗ್ರಹಾರಕ್ಕೆ ರವಾನೆ ಮಾಡಲಾಗಿದೆ. ಕಿರುತೆರೆ ಇತಿಹಾಸದಲ್ಲಿ ಜನಪ್ರಿಯ ಶೋ ಆಗಿರುವ ಬಿಗ್‌ಬಾಸ್‌ ನಲ್ಲಿ ವರ್ತೂರು ಸಂತೋಷ್‌ ಸ್ಪರ್ಧಿಯಾಗಿದ್ದರು. ಬಿಗ್‌ ಬಾಸ್‌ ಮನೆಗೆ ಎಂಟ್ರಿ ಕೊಟ್ಟು 2 ವಾರಗಳಷ್ಟೇ ಆಗಿತ್ತು. ಬಿಗ್‌ ಬಾಸ್‌ ಮನೆಯಲ್ಲಿದ್ದಾಗಲೇ ಬಂಧನವಾಗಿದ್ದು, ಈ ರೀತಿ ಆಗಿರುವುದು ಬಿಗ್‌ಬಾಸ್‌ ಇತಿಹಾಸದಲ್ಲೇ ಮೊದಲಾಗಿದೆ.

Follow Us:
Download App:
  • android
  • ios