ಕುಡುಕ ಗಂಡನನ್ನು ತೊರೆದು ಮಹಿಳೆಯೊಬ್ಬರು ಸಾಲ ವಸೂಲಿ ಏಜೆಂಟ್ ಜೊತೆ ಪರಾರಿಯಾಗಿ ವಿವಾಹವಾದ ಘಟನೆ ಬಿಹಾರದಲ್ಲಿ ನಡೆದಿದೆ. ಏಜೆಂಟ್ ಕುಟುಂಬ ಸಮ್ಮತಿಸಿದರೆ, ಮಹಿಳೆಯ ಕುಟುಂಬ ವಿರೋಧ ವ್ಯಕ್ತಪಡಿಸಿ ಪ್ರಕರಣ ದಾಖಲಿಸಿದೆ.

ಪಟನಾ (ಫೆ.14) ಸದಾ ಕುಡಿದು ನಿಂದಿಸುತ್ತಿದ್ದ ಗಂಡನ ತೊರೆದು ಮಹಿಳೆಯೊಬ್ಬರು ಮನೆಗೆ ಸಾಲ ವಸೂಲಿಗೆ ಬರುತ್ತಿದ್ದ ಏಜೆಂಟ್‌ ಜೊತೆ ಪರಾರಿಯಾಗಿ ವಿವಾಹವಾದ ಘಟನೆ ಬಿಹಾರದಲ್ಲಿ ನಡೆದಿದೆ.ಈ ವಿವಾಹಕ್ಕೆ ಏಜೆಂಟ್‌ ಕುಟುಂಬ ಸಮ್ಮತಿಸಿದ್ದರೆ, ಮಹಿಳೆಯ ಕುಟುಂಬ ವಿರೋಧ ವ್ಯಕ್ತಪಡಿಸಿ ಪ್ರಕರಣ ದಾಖಲಿಸಿದೆ.

ಏನಿದು ಘಟನೆ?:

ಬಿಹಾರದ ಜಮುಯಿ ಜಿಲ್ಲೆಯ ನಿವಾಸಿ ನಕುಲ್‌ ಶರ್ಮಾರನ್ನು ಇಂದಿರಾ 2022ರಲ್ಲಿ ವಿವಾಹವಾದರು. ಆದರೆ ನಕುಲ್‌ ಸದಾ ಕುಡಿದು ಇಂದಿರಾಳಿಗೆ ದೈಹಿಕ, ಮಾನಸಿಕ ಹಿಂಸೆ ನೀಡುತ್ತಿದ್ದ. ನಕುಲ್‌ ಮನೆಗೆ ಭೇಟಿ ನೀಡುತ್ತಿದ್ದ ಹಣಕಾಸು ಕಂಪನಿಯ ಲೋನ್‌ ಏಜೆಂಟ್‌ ಪವನ್‌ ಕುಮಾರ್‌ ಇಂದಿರಾಗೆ ಭರವಸೆಯಾಗಿ ಕಾಣಿಸಿದ್ದ. ಪವನ್‌ ಜತೆಗಿನ ಇಂದಿರಾ ವ್ಯಾವಹಾರಿಕ ಪರಿಚಯ ಸ್ನೇಹವಾಯಿತು. ಬಳಿಕ ಇಬ್ಬರ ನಡುವೆ ಪ್ರೇಮಾಂಕುರವಾಯಿತು. ಪವನ್‌, ಇಂದಿರಾ ಫೆ.4 ರಂದು ವಿಮಾನದಲ್ಲಿ ಪಶ್ಚಿಮ ಬಂಗಾಳದ ಅಸಾನ್ಸೋಲ್‌ಗೆ ಪರಾರಿಯಾಗಿದ್ದಳು. ಫೆ.11ಕ್ಕೆ ಹಿಂದೂ ಸಂಪ್ರದಾಯದಂತೆ ಇಬ್ಬರೂ ವಿವಾಹವಾಗಿ ಜಮುಯಿಗೆ ಮರಳಿದ್ದರು.

ಇದನ್ನೂ ಓದಿ: ರಷ್ಯಾದ ರೆವರ್ಟ್‌ ಬ್ರಾಂಡ್‌ನಿಂದ ಗಾಂಧೀಜಿ ಚಿತ್ರ ಇರುವ ಬಿಯರ್‌ ಮಾರಾಟ; ಭಾರತೀಯ ನೆಟಿಜನ್ ಆಕ್ರೋಶ!

 ಇಬ್ಬರ ಕೊಂದು ತಾನೂ ಪ್ರಾಣ ಬಿಟ್ಟ ಮಣಿಪುರ ಸಿಆರ್‌ಪಿಎಫ್‌ ಯೋಧ 

ಇಂಫಾಲ್: ಸಿಆರ್‌ಪಿಎಫ್ ಯೋಧನೊಬ್ಬ ತನ್ನ ಇಬ್ಬರು ಸಹೋದ್ಯೋಗಿಗಳನ್ನು ಕೊಂದು, 8 ಸಿಬ್ಬಂದಿಯನ್ನು ಗಾಯಗೊಳಿಸಿ, ಬಳಿಕ ತಾನೂ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ ಭೀಕರ ಘಟನೆ ಮಣಿಪುರದಲ್ಲಿ ನಡೆದಿದೆ. ಇಂಫಾಲ್ ಪಶ್ಚಿಮ ಜಿಲ್ಲೆಯ ಲ್ಯಾಂಫೆಲ್‌ನಲ್ಲಿರುವ ಸಿಆರ್‌ಪಿಎಫ್ ಶಿಬಿರದಲ್ಲಿ ರಾತ್ರಿ 8.20ರ ಸುಮಾರಿಗೆ ಈ ಘಟನೆ ನಡೆದಿದೆ. 120ನೇ ಬೆಟಾಲಿಯನ್‌ನ ಹವಾಲ್ದಾರ್ ಸಂಜಯ್ ಸಿಂಗ್ ಎಂಬಾತ ಶಿಬಿರದಲ್ಲಿ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾನೆ. ಈ ವೇಳೆ ಕಾನ್‌ಸ್ಟೆಬಲ್ ಮತ್ತು ಒಬ್ಬ ಸಬ್ ಇನ್ಸ್‌ಪೆಕ್ಟರ್ ಸಾವನ್ನಪ್ಪಿದರೆ, ಇತರೆ 8 ಜನರು ಗಾಯಗೊಂಡಿದ್ದಾರೆ. ಬಳಿಕ ಸಂಜಯ್ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.