Asianet Suvarna News Asianet Suvarna News

ವೇಗವಾಗಿ ಹಂಪ್‌ ಎಗರಿದ ಬೈಕ್‌: ತಲೆಗೆ ಪೆಟ್ಟು ಬಿದ್ದು ಸವಾರ ಸಾವು!

ವೇಗವಾಗಿ ಬಂದ ದ್ವಿಚಕ್ರ ವಾಹನ ರಸ್ತೆ ಹಂಪ್‌ ಎಗರಿ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ಎಲೆಕ್ಟ್ರಾನಿಕ್‌ ಸಿಟಿ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

bike flew over the hump at high speed: the rider died at bengaluru rav
Author
First Published Feb 6, 2024, 8:26 AM IST

ಬೆಂಗಳೂರು (ಫೆ.6) ವೇಗವಾಗಿ ಬಂದ ದ್ವಿಚಕ್ರ ವಾಹನ ರಸ್ತೆ ಹಂಪ್‌ ಎಗರಿ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ಎಲೆಕ್ಟ್ರಾನಿಕ್‌ ಸಿಟಿ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಗೊಲ್ಲಹಳ್ಳಿ ನಿವಾಸಿ ಅರುಣ್‌ಕುಮಾರ್‌ (27) ಮೃತ ಸವಾರ. ಭಾನುವಾರ ರಾತ್ರಿ 8.20ರ ಸುಮಾರಿಗೆ ಶಾಂತಿಪುರ ಕಡೆಯಿಂದ ಎಲೆಕ್ಟ್ರಾನಿಕ್‌ ಸಿಟಿ ಫೇಸ್‌-2 ಕಡೆಗೆ ಬರುವಾಗ ಮಾರ್ಗ ಮಧ್ಯೆ ಈ ದುರ್ಘಟನೆ ನಡೆದಿದೆ.

ಹಣಕ್ಕಾಗಿ ಪೀಡಿಸಿದನೆಂದು ಕುಡಿದ ಮತ್ತಿನಲ್ಲಿ ಸ್ನೇಹಿತರೇ ಹೊಡೆದು ಹತ್ಯೆ!

ಕಲಬುರಗಿ ಮೂಲದ ಅರುಣ್‌ ಕುಮಾರ್‌ ಐಟಿಐ ವ್ಯಾಸಂಗ ಮಾಡಿದ್ದು, ಎಲೆಕ್ಟ್ರಾನಿಕ್‌ ಸಿಟಿಯ ಫ್ಯಾಕ್ಟರಿಯಲ್ಲಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದ. ಭಾನುವಾರ ರಾತ್ರಿ ಸ್ನೇಹಿತರನ್ನು ಭೇಟಿಯಾಗಿ ವಾಪಾಸ್ ಮನೆಗೆ ಹೋಗುವಾಗ ಟೆಕ್‌ ಮಹೀಂದ್ರ ಕಂಪನಿ ಬಳಿಯ ರಸ್ತೆಯಲ್ಲಿ ವೇಗವಾಗಿ ದ್ವಿಚಕ್ರ ವಾಹನ ಚಲಾಯಿಸಿದ್ದಾನೆ. ಈ ವೇಳೆ ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನ ಹಂಪ್‌ ಎಗರಿದ ಪರಿಣಾಮ ದ್ವಿಚಕ್ರ ವಾಹನ ಸಹಿತ ಸವಾರ ಅರುಣ್‌ ರಸ್ತೆಗೆ ಬಿದ್ದಿದ್ದಾನೆ. ಹೆಲ್ಮೆಟ್‌ ಧರಿಸದ ಪರಿಣಾಮ ತಲೆಗೆ ಗಂಭೀರ ಪೆಟ್ಟು ಬಿದ್ದು ತೀವ್ರವಾಗಿ ಗಾಯಗೊಂಡಿದ್ದ. ಕೂಡಲೇ ಸ್ಥಳೀಯರು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪರೀಕ್ಷಿಸಿದ ವೈದ್ಯರು ಮಾರ್ಗ ಮಧ್ಯೆ ಅರುಣ್‌ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.

ಬರಪರಿಹಾರಕ್ಕೆ ಶಬರಿಯಂತೆ ಕಾದರೂ ಪ್ರಯೋಜನವಾಗಿಲ್ಲ; ಕೇಂದ್ರದಿಂದ ಕರ್ನಾಟಕದ ಜನರ ಶೋಷಣೆ ಆಗ್ತಿದೆ: ಸಿಎಂ ಕಿಡಿ

ಅತಿಯಾದ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. ಎಲೆಕ್ಟ್ರಾನಿಕ್‌ ಸಿಟಿ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow Us:
Download App:
  • android
  • ios