ಜನರ ಗಮನ ಬೇರೆಡೆ ಸೆಳೆದು ಮೊಬೈಲ್, ಬೈಕ್ ಕಳವು ಮಾಡುತ್ತಿದ್ದ ಖದೀಮರು ಅರೆಸ್ಟ್

: ನಗರದಲ್ಲಿ ಜನರ ಗಮನ ಬೇರೆಡೆ ಸೆಳೆದು ಮೊಬೈಲ್‌ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ವಾಹನ ಕಳವು ಕೃತ್ಯದಲ್ಲಿ ತೊಡಗಿದ್ದ ಇಬ್ಬರನ್ನು ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆನೇಕಲ್‌ ತಾಲೂಕಿನ ಆದೂರು ಗ್ರಾಮದ ನವೀನ್ ಹಾಗೂ ಆರ್‌.ಶಿವರಾಜ್‌ ಬಂಧಿತರು.

Bike mobile theft case two accused arrested by jnanabharati police at bengaluru rav

ಬೆಂಗಳೂರು (ಫೆ.21): ನಗರದಲ್ಲಿ ಜನರ ಗಮನ ಬೇರೆಡೆ ಸೆಳೆದು ಮೊಬೈಲ್‌ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ವಾಹನ ಕಳವು ಕೃತ್ಯದಲ್ಲಿ ತೊಡಗಿದ್ದ ಇಬ್ಬರನ್ನು ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆನೇಕಲ್‌ ತಾಲೂಕಿನ ಆದೂರು ಗ್ರಾಮದ ನವೀನ್ ಹಾಗೂ ಆರ್‌.ಶಿವರಾಜ್‌ ಬಂಧಿತರಾಗಿದ್ದು, ಆರೋಪಿಗಳಿಂದ 11 ಲಕ್ಷ ರು. ಮೌಲ್ಯದ 5 ಬೈಕ್‌ಗಳು ಮತ್ತು 40 ಮೊಬೈಲ್‌ಗಳನ್ನು ಜಪ್ತಿ ಮಾಡಲಾಗಿದೆ. ಇತ್ತೀಚಿಗೆ ಮನೆ ಮುಂದೆ ನಿಲ್ಲಿಸಿದ್ದಾಗ ಜ್ಞಾನಗಂಗಾ ನಗರದ ಶ್ರೀಧರ್‌ ಎಂಬುವರ ಬೈಕ್ ಕಳ್ಳತನವಾಗಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು, ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಗಳನ್ನು ಪತ್ತೆ ಹಚ್ಚಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ನವೀನ್ ಹಾಗೂ ಶಿವರಾಜ್‌ ವೃತ್ತಿಪರ ಕ್ರಿಮಿನಲ್‌ಗಳಾಗಿದ್ದು, ಈ ಇಬ್ಬರ ಮೇಲೆ ನಗರದ ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ. ಕೆಲ ತಿಂಗಳ ಹಿಂದೆ ಇಬ್ಬರನ್ನು ಆನೇಕಲ್ ಠಾಣೆ ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಬಳಿಕ ಜಾಮೀನು ಪಡೆದು ಹೊರಬಂದು ಮತ್ತೆ ಇಬ್ಬರು ತಮ್ಮ ಚಾಳಿ ಮುಂದುವರೆಸಿದ್ದರು ಎಂದು ಪೊಲೀಸರು ವಿವರಿಸಿದ್ದಾರೆ.

ಜನರನ್ನು ಗಮನ ಬೇರೆಡೆ ಸೆಳೆದು ಮೊಬೈಲ್ ಕಳವು ಹಾಗೂ ಮನೆಗಳ್ಳತನ ಕೃತ್ಯದಲ್ಲಿ ಆರೋಪಿಗಳು ನಿರತರಾಗಿದ್ದರು. ಈ ಬಗ್ಗೆ ತಾಂತ್ರಿಕ ಮಾಹಿತಿ ಆಧರಿಸಿ ನವೀನ್ ಹಾಗೂ ಶಿವರಾಜ್‌ನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Latest Videos
Follow Us:
Download App:
  • android
  • ios