ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ. ದೇಬಶೀಶ್ ಬೆಹ್ರಾ (28) ಮೃತ ವ್ಯಕ್ತಿಯಾಗಿದ್ದಾರೆ. ನಿನ್ನೆ ಮಧ್ಯಾಹ್ನ 12.30ರ ಸುಮಾರಿಗೆ ಹೊಸ್ಮಾಟ್ ಜಂಕ್ಷನ್‌ನಲ್ಲಿ ಘಟನೆ ನಡೆದಿದೆ.

ಬೆಂಗಳೂರು (ಮಾ.1): ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ. ದೇಬಶೀಶ್ ಬೆಹ್ರಾ (28) ಮೃತ ವ್ಯಕ್ತಿಯಾಗಿದ್ದಾರೆ. ನಿನ್ನೆ ಮಧ್ಯಾಹ್ನ 12.30ರ ಸುಮಾರಿಗೆ ಹೊಸ್ಮಾಟ್ ಜಂಕ್ಷನ್‌ನಲ್ಲಿ ಘಟನೆ ನಡೆದಿದೆ.

ಡಿಪೋ ನಂ. 47ಕ್ಕೆ ಸೇರಿದ ಬಿಎಂಟಿಸಿ ಬಸ್ ಜ್ಯೋತಿಪುರದಿಂದ ಕೆ.ಆರ್.ಮಾರುಕಟ್ಟೆಗೆ ತೆರಳುತ್ತಿತ್ತು, ಈ ವೇಳೆ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಕೆಳಗೆ ಬಿದ್ದ ದೇಬಶೀಶ್ ಬೆಹ್ರಾ ಅವರ ಮೇಲೆ ಬಸ್ ಹರಿದಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅಷ್ಟರಲ್ಲಾಗಲೇ ಮೃತಪಟ್ಟಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಹಲಸೂರು ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಬಸ್ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ವಸ್ತು ಸ್ಫೋಟ; ಐವರಿಗೆ ಗಂಭೀರ ಗಾಯ!