ಮೋಜು ಮಸ್ತಿಗೆ ಬೈಕ್ ಕಳ್ಳತನ; ಒಂದೇ ವರ್ಷದಲ್ಲಿ ನಾಲ್ಕು ಬಾರಿ ಸೇರಿದ ಕಳ್ಳ!
ಮನೆ ಎದುರು ನಿಲುಗಡೆ ಮಾಡಿದ ದ್ವಿಚಕ್ರ ವಾಹನಗಳನ್ನು ಹ್ಯಾಂಡಲ್ ಲಾಕ್ ಮುರಿದು ಕಳವು ಮಾಡುತ್ತಿದ್ದ ಆರೋಪಿಯನ್ನು ರಾಜರಾಜೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೆಂಗೇರಿಯಅಂಚೆಪಾಳ್ಯ ನಿವಾಸಿ ರಮೇಶ್ (23) ಬಂಧಿತ. ಆರೋಪಿಯಿಂದ ₹10 ಲಕ್ಷ ಮೌಲ್ಯದ ವಿವಿಧ ಕಂಪನಿಗಳ 10 ದ್ವಿಚಕ್ರ ವಾಹನಗಳು ಹಾಗೂ ಒಂದು ಮೊಬೈಲ್ ಫೋನ್ ಜಪ್ತಿ ಮಾಡಲಾಗಿದೆ.
ಬೆಂಗಳೂರು (ಡಿ.17): ಮನೆ ಎದುರು ನಿಲುಗಡೆ ಮಾಡಿದ ದ್ವಿಚಕ್ರ ವಾಹನಗಳನ್ನು ಹ್ಯಾಂಡಲ್ ಲಾಕ್ ಮುರಿದು ಕಳವು ಮಾಡುತ್ತಿದ್ದ ಆರೋಪಿಯನ್ನು ರಾಜರಾಜೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೆಂಗೇರಿಯಅಂಚೆಪಾಳ್ಯ ನಿವಾಸಿ ರಮೇಶ್ (23) ಬಂಧಿತ. ಆರೋಪಿಯಿಂದ ₹10 ಲಕ್ಷ ಮೌಲ್ಯದ ವಿವಿಧ ಕಂಪನಿಗಳ 10 ದ್ವಿಚಕ್ರ ವಾಹನಗಳು ಹಾಗೂ ಒಂದು ಮೊಬೈಲ್ ಫೋನ್ ಜಪ್ತಿ ಮಾಡಲಾಗಿದೆ. ರಾಜರಾಜೇಶ್ವರಿನಗರದ ಕೆಂಚೇನಹಳ್ಳಿ ನಿವಾಸಿ ಭವ್ಯ ಎಂಬುವವರು ಡಿ.10ರಂದು ರಾತ್ರಿ ತಮ್ಮ ಮನೆಯ ಕಾಂಪೌಂಡ್ ಎದುರು ನಿಲುಗಡೆ ಮಾಡಿದ್ದ ದ್ವಿಚಕ್ರ ವಾಹನ ಕಳ್ಳತನವಾಗಿದೆ ಎಂದು ದೂರು ನೀಡಿದ್ದರು. ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಂಸತ್ ಭದ್ರತಾ ಲೋಪ ಪ್ರಕರಣ: ಪ್ರತಾಪ ಸಿಂಹ ವಿರುದ್ಧ ನಡೆದಿದೆ ಭಾರೀ ಸಂಚು, ಯತ್ನಾಳ್ ಹೇಳಿದ್ದೇನು?
ಈ ವರ್ಷ ನಾಲ್ಕನೇ ಬಾರಿ ಬಂಧನ!: ಆರೋಪಿ ರಮೇಶ್ ವೃತ್ತಿಪರ ಕಳ್ಳನಾಗಿದ್ದಾನೆ. ಪ್ರಸಕ್ತ ಸಾಲಿನಲ್ಲೇ ದ್ವಿಚಕ್ರ ವಾಹನ ಕಳವು ಪ್ರಕರಣಗಳ ಸಂಬಂಧ ರಾಜಗೋಪಾಲನಗರ, ಕೆಂಗೇರಿ, ಹುಳಿಮಾವು ಠಾಣೆ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದರು. ಜಾಮೀನು ಪಡೆದು ಹೊರಗೆ ಬಂದ ಬಳಿಕ ಆರೋಪಿ ತನ್ನ ಹಳೇ ಚಾಳಿ ಮುಂದುವರೆಸಿ ಇದೀಗ ಇದೇ ವರ್ಷದಲ್ಲಿ ನಾಲ್ಕನೇ ಬಾರಿಗೆ ಬಂಧನಕ್ಕೆ ಒಳಗಾಗಿದ್ದಾನೆ. ಈತನ ಬಂಧನದಿಂದ ವಿವಿಧ ಕಂಪನಿಗಳ 10 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ.
ಬಸ್, ಜಾತ್ರೆ ಜನಜಂಗುಳಿ ಇದ್ದಲ್ಲಿ ಆರು ಕಳ್ಳಿಯರ ಗ್ಯಾಂಗ್ ಹಾಜರ್! ಮಹಿಳೆಯರ ಮಾಂಗಲ್ಯ ಕ್ಷಣಮಾತ್ರದಲ್ಲಿ ಮಾಯ!
ಮೋಜು-ಮಸ್ತಿಗೆ ಹಣ ಗಳಿಸಲು ಕಳ್ಳತನ: ಆರೋಪಿ
ರಮೇಶ್ ದುಶ್ಚಟಗಳ ದಾಸನಾಗಿದ್ದಾನೆ. ತನ್ನ ಶೋಕಿಗಳಿಗೆ ಸುಲಭವಾಗಿ ಹಣ ಗಳಿಸುವ ಉದ್ದೇಶದಿಂದ ದ್ವಿಚಕ್ರ ವಾಹನಗಳ ಕಳ್ಳತನಕ್ಕೆ ಇಳಿದಿದ್ದ. ರಾತ್ರಿ ವೇಳೆ ನರಗದ ವಿವಿಧೆಡೆ ಸುತ್ತಾಡಿ ಮನೆ ಎದುರು ನಿಲುಗಡೆ ಮಾಡಿದ ದ್ವಿಚಕ್ರ ವಾಹನಗಳನ್ನು ಗುರುತಿಸಿ ಹ್ಯಾಂಡಲ್ ಲಾಕ್ ಮುರಿದು ಕದ್ದು ಪರಾರಿಯಾಗುತ್ತಿದ್ದ. ಬಳಿಕ ಗಿರಾಕಿಗಳನ್ನು ಹಿಡಿದು ಮಾರಾಟ ಮಾಡಿ ಬಂದ ಹಣದಲ್ಲಿ ಮೋಜು-ಮಸ್ತಿ ಮಾಡಿ ವ್ಯಯಿಸುತ್ತಿದ್ದ. ಹಣ ಖಾಲಿಯಾದಾಗ ಮತ್ತೆ ದ್ವಿಚಕ್ರ ವಾಹನಗಳ ಕಳ್ಳತನಕ್ಕೆ ಇಳಿಯುತ್ತಿದ್ದ ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ ಪೊಲೀಸರು ತಿಳಿಸಿದ್ದಾರೆ.