ಹೊಸ ವರ್ಷದ ದಿನವೇ ಬಯೋಕಾನ್ ಉದ್ಯೋಗಿ ನಿಗೂಢ ಸಾವು
ಬೆಂಗಳೂರಿನ ಬಗಲಗುಂಟೆಯಲ್ಲಿ ಬಯೋಕಾನ್ ಉದ್ಯೋಗಿ ರುಚಿತಾ (25) ಹೊಸ ವರ್ಷದ ದಿನದಂದು ಸಾವಿಗೆ ಶರಣಾಗಿದ್ದಾರೆ. ಪೊಲೀಸರು ಸಾವಿಗೆ ಕಾರಣ ಪತ್ತೆಹಚ್ಚಲು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು (ಜ.01): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಡಿ.31ರ ರಾತ್ರಿಯಿಂದ ಜ.01ರ ಬೆಳಗ್ಗೆವರೆಗೂ ಜನರೆಲ್ಲರೂ ಹೊಸ ವರ್ಷದ ಸಂಭ್ರಮದಲ್ಲಿ ತೇಲಾಡುತ್ತಿದ್ದರು. ಆದರೆ, ಬಯೋಕಾನ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ರುಚಿತಾ ನಿನ್ನೆ ರಾತ್ರಿ ಮನೆಯಲ್ಲಿ ಸಾವಿಗೆ ಶರಣಾಗಿದ್ದಾರೆ.
ಬೆಂಗಳೂರಿನ ಬಗಲಗುಂಟೆಯ ಮಲ್ಲಸಂದ್ರದಲ್ಲಿ ಘಟನೆ ನಡೆದಿದೆ. ರುಚಿತಾ(25) ಆತ್ಮಹತ್ಯೆಗೆ ಶರಣಾಗಿರುವ ಯುವತಿ ಆಗಿದ್ದಾಳೆ. ಜಗತ್ತಿನ ಬಹುಪಾಲು ಜನರು ಹೊಸ ವರ್ಷದ ಸಂಭ್ರಮಾಚರಣೆ ಮಾಡುತ್ತಿರುವ ಸಂದರ್ಭದಲ್ಲಿ ನಿನ್ನೆ ರಾತ್ರಿ ರುಚಿತಾ ನೇಣಿಗೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ. ಈಕೆ ಬೆಂಗಳೂರಿನ ಬಯೋಕಾನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು. ಆದರೆ, ಏಕಾಏಕಿ ಸಾವಿಗೆ ಶರಣಾಗಿದ್ದು, ಇಂದು ಮಧ್ಯಾಹ್ನ ಬೆಳಕಿಗೆ ಬಂದಿದೆ.
ಸ್ಥಳೀಯರ ಮಾಹಿತಿ ಆಧರಿಸಿ ಸ್ಥಳಕ್ಕೆ ತೆರಳಿ ಪರಿಶೀಲನೆ ಮಾಡಿದ ಪೊಲೀಸರು ಯುವತಿ ಸಾವಿನ ಕಾರಣ ಪತ್ತೆಗೆ ಮುಂದಾಗಿದ್ದಾರೆ. ಆದರೆ, ಈವರೆಗೆ ಯುವತಿ ಸಾವಿಗೆ ಕಾರಣವೇನೆಂದು ತಿಳಿದುಬಂದಿಲ್ಲ. ಪೊಲೀಸರು ಆಕೆಯ ಮೊಬೈಲ್ ಅನ್ನು ವಶಕ್ಕೆ ಪಡೆದು ಪರಿಶೀಲನೆ ಮಾಡಲು ಮುಂದಾಗಿದ್ದಾರೆ. ಈ ಘಟನೆ ಕುರಿತಂತೆ ಬಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ: ಮುದ್ದಿನ ನಾಯಿ ಸಾವು ಕಂಡ ನೋವು, ತನ್ನ ಜೀವನವನ್ನೇ ಮುಗಿಸಿದ ಯುವಕ!