ವಿಶಾಖಪಟ್ಟಣಂ(ಜೂ.21): ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ರಜಪೂತ್‌ ಸಾವಿನಿಂದ ಮನನೊಂದು ಅಭಿಮಾನಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜೂ.16ರಂದು ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆದಿದೆ. ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ‍್ಯನಿರ್ವಹಿಸುತ್ತಿದ್ದ 21 ವರ್ಷದ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಅಭಿಮಾನಿ.

ಈ ಮಹಿಳೆ ಸುಶಾಂತ್‌ ಸಿಂಗ್‌ ಅವರ ಹುಚ್ಚು ಅಭಿಮಾನಿಯಾಗಿದ್ದು, ಸುಶಾಂತ್‌ ಸಾವಿನ ಬಳಿಕ ಆಘಾತಕ್ಕೆ ಒಳಗಾಗಿದ್ದರು. ನಟನ ಸಾವಿನ ಕುರಿತ ವಿಡಿಯೋಗಳನ್ನು ನೋಡಿ ಖಿನ್ನತೆಗೆ ಒಳಗಾಗಿದ್ದರು. ಬೇಸರದಿಂದ ಮನೆಯವರೊಂದಿಗೆ ಮಾತನಾಡುವುದನ್ನೇ ನಿಲ್ಲಿಸಿದ್ದರು. ಮರಣೋತ್ತರ ಪರೀಕ್ಷೆಯ ವರದಿ ಮತ್ತು ತನಿಖೆಯಲ್ಲಿ ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜೂನ್‌ 13ರಂದು ನಟ ಸುಶಾಂತ್‌ ಸಿಂಗ್‌ ಮುಂಬೈ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು.