* ಆ ದಿನಗಳು ಖ್ಯಾತಿಯ ನಟ ಚೇತನ್ ಗೆ ನೋಟಿಸ್*  ಬಸವನಗುಡಿ ಪೊಲೀಸ್ ಠಾಣೆಗೆ ಹಾಜರಾಗುವಂತೆ ನೋಟಿಸ್*  ಸಾಮಾಜಿಕ ಜಾಲತಾಣಗಳಲ್ಲಿ ಬ್ರಾಹ್ಮಣರ ಬಗ್ಗೆ ಮಾತನಾಡಿದ್ದ  ನಟ*  ಈ ಹಿನ್ನೆಲೆ ಚೇತನ್ ವಿರುದ್ದ ದೂರು ದಾಖಲಿಸಿದ ಪವನ್ ಕುಮಾರ್ ಶರ್ಮಾ

ಬೆಂಗಳೂರು(ಜೂ. 15) ಬ್ರಾಹ್ಮಣರು ಮತ್ತು ಬ್ರಾಹ್ಮಣ್ಯದ ಬಗ್ಗೆ ವಿವಾದಕಾರಿ ಹೇಳಿಕೆ ನೀಡಿದ್ದ ಆರೋಪ ಎದುರಿಸುತ್ತಿರುವ ನಟ ಚೇತನ್ ಅಹಿಂಸಾ ಅವರಿಗೆ ನೋಟಿಸ್ ನೀಡಲಾಗಿದೆ. ಬಸವನಗುಡಿ ಪೊಲೀಸ್ ಠಾಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಬ್ರಾಹ್ಮಣರ ಬಗ್ಗೆ ಮಾತನಾಡಿದ್ದು ವೈರಲ್ ಆಗಿತ್ತು. ಈ ಹಿನ್ನೆಲೆ ಚೇತನ್ ವಿರುದ್ದ ಪವನ್ ಕುಮಾರ್ ಶರ್ಮಾ ಎಂಬುವರು ದೂರು ದಾಖಲಿಸಿದ್ದರು. ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ನಟನ ವಿರುದ್ಧ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ದೂರು

ಕಲಂ 153B, 295A ಅಡಿ‌ ದೂರು ದಾಖಲಾಗಿತ್ತು. ಈ ಹಿನ್ನೆಲೆ ವಿಚಾರಣೆಗೆ ಹಾಜರಾಗಿ ಸ್ಪಷ್ಟನೆ ನೀಡುವಂತೆ ನೋಟಿಸ್ ನೀಡಲಾಗಿದೆ. ಬುಧವಾರ ಬೆಳಿಗ್ಗೆ 10:30 ಕ್ಕೆ ಹಾಜರಾಗುವುದಾಗಿ ಪೊಲೀಸರಿಗೆ ನಟ ಚೇತನ್ ಮಾಹಿತಿ ನೀಡಿದ್ದಾರೆ.

ಬ್ರಾಹ್ಮಣರ ಬಗ್ಗೆ ನಟ ಚೇತನ್ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದ ಮೇಲೆ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ಬ್ರಾಹ್ಮಣಿಕೆ ಮತ್ತು ಬ್ರಾಹ್ಮಣತ್ವ ಭಯೋತ್ಪಾದನೆ ಎಂಬ ರೀತಿಯಲ್ಲಿ ಚೇತನ್ ಮಾತನಾಡಿದ್ದರು ಎಂದು ಆರೋಪಿಸಿದ್ದರು