Asianet Suvarna News Asianet Suvarna News

Davanagere: ಆಸ್ತಿ ವಿಚಾರಕ್ಕೆ ಆಸ್ಪತ್ರೆಯಲ್ಲೇ ಅಣ್ಣನಿಗೆ ಚಾಕು ಹಾಕಿ ಕೊಲೆ ಮಾಡಿದ ತಮ್ಮ

ಮನೆ ಹಾಗೂ‌ ಆಸ್ತಿ ವಿಚಾರದಲ್ಲಿ ಅಣ್ಣನನ್ನು ತಮ್ಮ ಚಾಕುನಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ಹರಿಹರದಲ್ಲಿ ನಡೆದಿದೆ. ಪ್ರಶಾಂತ್ ನಗರದ ನಿವಾಸಿ ಕೆ.ಜಿ ಕುಮಾರ (31)  ಕೊಲೆಯಾದ ವ್ಯಕ್ತಿ. 

Brother Killed Elder Brother Over Property Issues At Davanagere gvd
Author
First Published May 15, 2023, 12:15 PM IST

ವರದಿ: ವರದರಾಜ್, ದಾವಣಗೆರೆ

ದಾವಣಗೆರೆ (ಮೇ.15): ಮನೆ ಹಾಗೂ‌ ಆಸ್ತಿ ವಿಚಾರದಲ್ಲಿ ಅಣ್ಣನನ್ನು ತಮ್ಮ ಚಾಕುನಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ಹರಿಹರದಲ್ಲಿ ನಡೆದಿದೆ. ಪ್ರಶಾಂತ್ ನಗರದ ನಿವಾಸಿ ಕೆ.ಜಿ ಕುಮಾರ (31)  ಕೊಲೆಯಾದ ವ್ಯಕ್ತಿ. ಹರಿಹರದ ಗುಂಡಪ್ಪ ಎಂಬುವರಿಗೆ ಇಬ್ಬರು ಪತ್ನಿಯರಿದ್ದು ನಗರದ ಭರಂಪುರ ನಿವಾಸಿ ಎರಡನೇ ಪತ್ನಿ ರತ್ನಮ್ಮನ ಪುತ್ರ ರಾಜು ಹಾಗೂ  ಮೊದಲನೇ  ಪತ್ನಿ ಲಕ್ಷಮ್ಮ ಕೊನೆಯ ಮಗನಾದ ಕುಮಾರ್ ಕೆ.ಜಿ ಅವರೊಂದಿಗೆ ಆಸ್ತಿ ವಿಚಾರದಲ್ಲಿ  ನ್ಯಾಯಾಲಯದಲ್ಲಿ ದಾವೆ ನಡೆಯುತ್ತಿತ್ತು.

ಇವರಿಬ್ಬರ ಮಧ್ಯೆ  ಮನಸ್ತಾಪವಿದ್ದು ಪದೇಪದೇ ಸಣ್ಣಪುಟ್ಟ ಜಗಳ ನಡೆಯುತ್ತಿದ್ದು ನಿನ್ನೆ ರಾತ್ರಿ ದಾವಣಗೆರೆಯಿಂದ ಹರಿಹರಕ್ಕೆ ವಾಪಸ್ ಬರುತ್ತಿರುವ ಮಾರ್ಗ ಮಧ್ಯೆ ಕುಮಾರ್ ಮೇಲೆ ತಮ್ಮ ರಾಜು ಮತ್ತು ಮಾರುತಿ ಎಂಬುವವರು ಹಲ್ಲೆ ಮಾಡಿದ್ದಾರೆ. ಕೂಡಲೇ ಕುಮಾರ್ ನನ್ನು ಹರಿಹರ ಆಸ್ಪತ್ರೆಗೆ ಕರೆತರಲಾಗಿತ್ತು.ಈ ವೇಳೆ ಆಸ್ಪತ್ರೆಯಲ್ಲಿಯೇ ಕುಮಾರ್ ಮೇಲೆ ರಾಜು ಹಲ್ಲೆ ನಡೆಸಿ ಚಾಕುವಿನಿಂದ ತಿವಿದಿದ್ದಾರೆ. ತೀವ್ರವಾಗಿ ರಕ್ತಸಾವ್ರಗೊಂಡ ಕುಮಾರ್ ಅವರನ್ನು ದಾವಣಗೆರೆಗೆ ಕರೆತರುವಾಗ ಮಾರ್ಗಮಧ್ಯದಲ್ಲಿ ಕುಮಾರ್ ಸಾವನ್ನಪ್ಪಿದ್ದಾರೆ.

ಜೆಡಿಎಸ್‌-ಕಾಂಗ್ರೆಸ್‌ ಒಳಮೈತ್ರಿ ನನ್ನ ಸೋಲಿಗೆ ನಾಂದಿ: ಸಿ.ಟಿ.ರವಿ

ಈ ಬಗ್ಗೆ ಕುಮಾರ್ ಪತ್ನಿ ರೇಖಾ ಹರಿಹರ ಠಾಣೆಯಲ್ಲಿ ದೂರು ನೀಡಿದ್ದಾರೆ.ಕೂಡಲೇ ರಾಜು ಹಾಗೂ ಮಾರುತಿಯವರನ್ನು ಪೋಲೀಸರು ಬಂಧಿಸಿದ್ದಾರೆ. ಘಟನಾ ಸ್ಥಳಕ್ಕೆ ದಾವಣಗೆರೆ ಉಪವಿಭಾಗ ಅಧೀಕ್ಷಕರಾದ ಕನ್ನಿಕಾ ಸಕ್ರಿವಾಲ್, ನಗರಠಾಣೆ ಇನ್ಸ್ಪೆಕ್ಟರ್ ದೇವಾನಂದ್ ಟಿ, ಪೊಲೀಸ್ ಸಿಬ್ಬಂದಿಗಳು ಆಗಮಿಸಿ ಪರಿಶೀಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ. 

ಹರಿಹರ ಸರ್ಕಾರಿ ಆಸ್ಪತ್ರೆಯಲ್ಲೇ  ಅಣ್ಣನನ್ನು ಕೊಲೆ ಮಾಡಿದ ಸಹೋದರ: ಹರಿಹರ ಆಸ್ಪತ್ರೆಯಲ್ಲಿ ಕೊಲೆಯ ನಡೆದ ಸಂದರ್ಭದಲ್ಲಿ ಕರ್ತವ್ಯ ನಿರತ ವೈದ್ಯರು, ನರ್ಸಿಂಗ್ ಅಧಿಕಾರಿಗಳು ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಭಯಭೀತರಾಗಿದ್ದಾರೆ. ಸುಮಾರು ವರ್ಷಗಳಿಂದ ಸಾರ್ವಜನಿಕ ಆಸ್ಪತ್ರೆಗೆ ಪೊಲೀಸರು ನೇಮಕ ಮಾಡುವಂತೆ ಸಂಬಂಧಿಸಿದ ಪೊಲೀಸ್ ಇಲಾಖೆಯವರಿಗೆ ಗಮನಕ್ಕೆ ತಂದರು. 

ಸೋಲಿನ ಕಾರಣ ಗುರುತಿಸಿ ಮುಂದೆ ಸಾಗೋಣ, ಇದು ಮೋದಿ ಸೋಲು ಅಲ್ಲ: ಬೊಮ್ಮಾಯಿ

ಇಲ್ಲಿಯವರೆಗೂ ಆಸ್ಪತ್ರೆಯಲ್ಲಿ ಪೊಲೀಸರು ನೇಮಕಗೊಂಡಿಲ್ಲ. ಇಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ ವೈದ್ಯರು ಸಿಬ್ಬಂದಿಗಳಿಗೆ  ಭದ್ರತೆ ಇಲ್ಲದೆ ಭಯದ ವಾತಾವರಣದಲ್ಲಿ ಕರ್ತವ್ಯವನ್ನು ನಿರ್ವಹಿಸುವ ಪರಿಸ್ಥಿತಿ ಇದೆ.  ಇನ್ನು ಮುಂದಾದರೂ ಸಾರ್ವಜನಿಕ ಆಸ್ಪತ್ರೆಗೆ ಪೊಲೀಸ್ ಚೌಕಿ ಅವಶ್ಯಕತೆ ಇದೆ. ಕೂಡಲೇ ಆಸ್ಪತ್ರೆಗೆ ಪೊಲೀಸರನ್ನು ನೇಮಕ ಮಾಡಿ ಭಯವಿಲ್ಲದೆ ಕರ್ತವ್ಯ ನಿರ್ವಹಿಸುವುದಕ್ಕೆ ಜನಪ್ರತಿನಿಧಿಗಳು ಅಧಿಕಾರಿಗಳು ಗಮನ ವಹಿಸಬೇಕೆಂದು ವೈದ್ಯರು ಸಿಬ್ಬಂದಿಗಳು ಒತ್ತಾಯಿಸಿದ್ದಾರೆ.

Follow Us:
Download App:
  • android
  • ios