ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಒಡೆತನದ ಬೆಂಗಳೂರಿನ ಬ್ಯಾಸ್ಟಿಯನ್ ಪಬ್‌ನಲ್ಲಿ ಮಧ್ಯರಾತ್ರಿ ಗಲಾಟೆ ನಡೆದಿದೆ. ಸರ್ವೀಸ್ ವಿಚಾರವಾಗಿ ಉದ್ಯಮಿ ಸತ್ಯ ನಾಯ್ಡು ಮತ್ತು ಸಿಬ್ಬಂದಿ ನಡುವೆ ವಾಗ್ವಾದ ನಡೆದು, ಹಲ್ಲೆಗೆ ಯತ್ನಿಸಲಾಗಿದೆ ಎಂದು ಆರೋಪ. ಕಬ್ಬನ್ ಪಾರ್ಕ್ ಪೊಲೀಸರಿಂದ ಘಟನೆ ಬಗ್ಗೆ ತನಿಖೆ 

ಬೆಂಗಳೂರು (ಡಿ.13): ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ (Bastian) ಪಬ್‌ನಲ್ಲಿ ಎರಡು ದಿನಗಳ ಹಿಂದೆ ಮಧ್ಯರಾತ್ರಿ ಗಲಾಟೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಉದ್ಯಮಿಯೊಬ್ಬರು ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿದ್ದಲ್ಲದೆ, ಹಲ್ಲೆಗೆ ಯತ್ನಿಸಿರುವ ಆರೋಪ ಕೇಳಿಬಂದಿದೆ.

ಲ್ಯಾಂಗ್ ಫೋರ್ಡ್ ರಸ್ತೆಯಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಒಡೆತನದ 'ಬ್ಯಾಸ್ಟಿಯನ್' ಪಬ್‌. ಮಧ್ಯರಾತ್ರಿ ಸುಮಾರು 1:30 ರ ಸುಮಾರಿಗೆ ಘಟನೆ ನಡೆದಿದೆ. ಉದ್ಯಮಿ ಸತ್ಯ ನಾಯ್ಡು ಎಂಬುವವರು ಈ ಗಲಾಟೆಗೆ ಕಾರಣರಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಪಬ್‌ನಲ್ಲಿ ಸರ್ವೀಸ್ ನೀಡುವ ವಿಚಾರಕ್ಕೆ ಗಲಾಟೆ:

ಪಬ್‌ನಲ್ಲಿ ಸರ್ವಿಸ್ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸತ್ಯ ನಾಯ್ಡು ಪಬ್ ಸಿಬ್ಬಂದಿ ನಡುವೆ ವಾಗ್ವಾದ ಶುರುವಾಗಿದೆ. ಈ ವಾಗ್ವಾದವು ತೀವ್ರ ಸ್ವರೂಪ ಪಡೆದುಕೊಂಡು, ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸುವ ಹಂತದವರೆಗೂ ತಲುಪಿದೆ. ಈ ಪಬ್‌ನ ಬೌನ್ಸರ್‌ಗಳು ಮಧ್ಯಪ್ರವೇಶಿಸಿ ಗಲಾಟೆಯನ್ನು ತಡೆಯಲು ಪ್ರಯತ್ನಿಸಿದರೂ ಉದ್ಯಮಿ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.

ಸದ್ಯ ಈ ಗಲಾಟೆಯಲ್ಲಿ ಹಲ್ಲೆಗೊಳಗಾದವರ ಕುರಿತು ಯಾವುದೇ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಕಬ್ಬನ್ ಪಾರ್ಕ್ ಪೊಲೀಸರು ಈ ಸಂಬಂಧ ಮಾಹಿತಿ ಕಲೆ ಹಾಕುತ್ತಿದ್ದು, ಘಟನೆಯ ವಿಡಿಯೋ ದೃಶ್ಯಗಳನ್ನು ಆಧರಿಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.