ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಭೀಕರ ಅಪಘಾತ, ಒಂದೇ ಕುಟುಂಬದ ಐವರು ಸಾವು!
ಬೆಂಗಳೂರು ಮೈಸೂರು ಹೆದ್ದಾರಿಯ ಚನ್ನಪಟ್ಟಣ ತಾಲ್ಲೂಕಿನ ಲಂಬಾಣಿ ತಾಂಡ್ಯದಲ್ಲಿ ಕಾರುಗಳ ನಡುವೆ ಭೀಕರ ಅಪಘಾತ ನಡೆದು ಐದು ಮಂದಿ ಮೃತಟ್ಟಿರುವ ಘಟನೆ ನಡೆದಿದೆ.
ಮಂಡ್ಯ (ಏ.22): ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿರುವವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ತಾಯಿ ಹಾಗೂ ಮಗಳು ಕೂಡ ಸಾವನ್ನಪ್ಪಿದ್ದಾರೆ. ದಶಪಥ ಹೆದ್ದಾರಿಯಲ್ಲಿ ಅಫಘಾತ ಸಂಭವಿಸಿ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದರು. ಈ ಮೂಲಕ ಒಟ್ಟು ಸಾವಿನ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಮೃತರನ್ನು ರವಿ ಪೂಜಾರ್ (46),ಇಂಚರ ಪೂಜಾರ್ (15), ಸಿರಿ ಪೂಜಾರ್ (3), ಲಕ್ಷ್ಮಿ ಪೂಜಾರ್ (40) ಶಾಂತಲಾ ಪೂಜಾರ್ (8) ಎಂದು ಗುರುತಿಸಲಾಗಿದೆ. ಈ ದಾರುಣ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಲಂಬಾಣಿ ತಾಂಡ್ಯದಲ್ಲಿ ನಡೆದಿದೆ. ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದ್ದು, ಇನೋವಾ ಕಾರು ಹಾಗು ಆಲ್ಟೊ ಕಾರು ನಡುವೆ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ. ಈ ದುರಂತಕ್ಕೆ ಅತೀವೇಗದ ಚಾಲನೆಯೇ ಕಾರಣ ಎನ್ನಲಾಗಿದೆ.
ಅತೀ ವೇಗವಾಗಿ ಬಂದ ಆಲ್ಟೋ ಕಾರು ಡಿವೈಡರ್ ಹಾರಿ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಆಲ್ಟೊ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಂದೆ ಹಾಗೂ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಮತ್ತಿಬ್ಬರಿಗೆ ಗಂಭೀರ ಗಾಯವಾಗಿತ್ತು. ಗಾಯಾಳುಗಳನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ರವಾನೆ ಮಾಡುವಾಗ ದಾರಿ ಮಧ್ಯೆ ತಾಯಿ ಮತ್ತು ಮಗಳು ಮೃತ ಪಟ್ಟಿದ್ದಾರೆ. ಮೃತರು ಟಿ.ನರಸೀಪುರ ಮೂಲದವರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
MANDYA: ದಾರಿ ಮಧ್ಯೆ ಹೊತ್ತಿ ಭಸ್ಮವಾದ ಮದುವೆ ದಿಬ್ಬಣಕ್ಕೆ ತೆರಳುತ್ತಿದ್ದ ಖಾಸಗಿ ಬಸ್!
ವಾಹನ ಡಿಕ್ಕಿಯಾಗಿ ಮೂವರು ರೈತರ ಸಾವು
ಖಾನಾಪುರ: ಕೃಷಿ ಜಮೀನುಗಳಿಗೆ ತೆರಳಿ ನೀರು ಹಾಯಿಸಿದ ಬಳಿಕ ಮರಳಿ ತಮ್ಮ ಮನೆಗಳತ್ತ ಹೊರಟಿದ್ದ ನಾಲ್ವರು ರೈತರ ಮೇಲೆ ಅಪರಿಚಿತ ವಾಹನ ಹರಿದ ಪರಿಣಾಮ ಇಬ್ಬರು ರೈತರು ಸ್ಥಳದಲ್ಲೇ ಮೃತಪಟ್ಟು, ಓರ್ವ ಆಸ್ಪತ್ರೆಯಲ್ಲಿ ಅಸುನೀಗಿದ ಘಟನೆ ತಾಲೂಕಿನ ಗೋಧೋಳಿ ಗ್ರಾಮದ ಹೊರವಲಯದ ಧಾರವಾಡ-ರಾಮನಗರ ರಾಜ್ಯ ಹೆದ್ದಾರಿಯ ಮೇಲೆ ಗುರುವಾರ ಮಧ್ಯರಾತ್ರಿ ಸಂಭವಿಸಿದೆ.
ಗ್ರಾಮದ ನಿವಾಸಿಗಳಾದ ಮಹಾಬಲೇಶ್ವರ ಶಿಂಧೆ (65), ಪುಂಡಲೀಕ ರೆಡೇಕಾರ (72) ಹಾಗೂ ಕೃಷ್ಣ ರೇಡೆಕರ (74) ಮೃತಪಟ್ಟಿದ್ದಾರೆ. ಜತೆಗೆ ಮತ್ತೊಬ್ಬ ಗಾಯಗೊಂಡಿದ್ದು, ಆತನನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ನಂದಗಡ ಠಾಣೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಗಿದ್ದೇನು?: ಗೊಧೋಳಿಯ ನಾಲ್ವರು ರೈತರು ತಮ್ಮ ಜಮೀನುಗಳಲ್ಲಿ ಬೆಳೆದಿದ್ದ ಕಬ್ಬಿಗೆ ನೀರು ಹಾಯಿಸಲು ಗುರುವಾರ ರಾತ್ರಿ 10 ಗಂಟೆ ಸುಮಾರಿಗೆ ಹೋಗಿದ್ದರು. ನೀರು ಹಾಯಿಸಿ, ಮನೆಗಳತ್ತ ತೆರಳಲು ಗ್ರಾಮದ ಹೊರವಲಯದ ಹೆದ್ದಾರಿಯ ಮೇಲೆ ನಡೆದುಕೊಂಡು ಬರುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಹಿಂಬದಿಯಿಂದ ಇವರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ.