Asianet Suvarna News Asianet Suvarna News

ಸಿನಿಮಾ ಸೆನ್ಸಾರ್‌ ಸರ್ಟಿಫಿಕೆಟ್‌ಗೆ ಲಂಚಕ್ಕೆ ಬೇಡಿಕೆ: ಪ್ರಾದೇಶಿಕ ಸೆನ್ಸಾರ್ ಅಧಿಕಾರಿ ಬಲೆಗೆ

ಕನ್ನಡ ಸಿನಿಮಾವೊಂದಕ್ಕೆ ಸೆನ್ಸಾರ್‌ ಸರ್ಟಿಫಿಕೆಟ್‌ ನೀಡಲು ಲಂಚ ಪಡೆಯುತ್ತಿದ್ದ ಸೆನ್ಸಾರ್ ಅಧಿಕಾರಿಯೊಬ್ಬ ಸಿಬಿಐ ಬಲೆಗೆ ಬಿದ್ದಿದ್ದಾನೆ. ಸೆನ್ಸಾರ್‌ ಅಧಿಕಾರಿ ಪ್ರಶಾಂತ್‌ ಕುಮಾರ್‌ ಬಂಧಿತ. 

CBFC Officer Detained By CBI While Receiving Bribe To Give Censor Certificate To Kannada Movie gvd
Author
First Published Nov 29, 2023, 8:51 AM IST

ಬೆಂಗಳೂರು (ನ.29): ಕನ್ನಡ ಸಿನಿಮಾವೊಂದಕ್ಕೆ ಸೆನ್ಸಾರ್‌ ಸರ್ಟಿಫಿಕೆಟ್‌ ನೀಡಲು ಲಂಚ ಪಡೆಯುತ್ತಿದ್ದ ಸೆನ್ಸಾರ್ ಅಧಿಕಾರಿಯೊಬ್ಬ ಸಿಬಿಐ ಬಲೆಗೆ ಬಿದ್ದಿದ್ದಾನೆ. ಸೆನ್ಸಾರ್‌ ಅಧಿಕಾರಿ ಪ್ರಶಾಂತ್‌ ಕುಮಾರ್‌ ಬಂಧಿತ. ಮಲ್ಲೇಶ್ವರದ ಎಸ್‌ಆರ್‌ವಿ ಸ್ಟುಡಿಯೋದಲ್ಲಿ ಲಂಚ ಸ್ವೀಕರಿಸುವಾಗ ಆರೋಪಿಯನ್ನು ಬಂಧಿಸಿದ ಸಿಬಿಐ ಅಧಿಕಾರಿಗಳು, ಸಂವಿಧಾನ ಸಿನಿ ಕಂಬೈನ್ಸ್‌ ಸಂಸ್ಥೆ ಅಡಿಯಲ್ಲಿ ನಿರ್ಮಾಣಗೊಂಡಿರುವ ಅಡವಿ ಎಂಬ ಸಿನಿಮಾದಲ್ಲಿ ಡಾ। ಬಿ.ಆರ್‌.ಅಂಬೇಡ್ಕರ್‌ ಮತ್ತು ಸಬ್‌ಟೈಟಲ್‌ ವಿಷಯಕ್ಕೆ ಕಿರಿಕ್‌ ತೆಗೆದು ಲಂಚಕ್ಕೆ ಬೇಡಿಕೆ ಇರಿಸಿದ್ದ ಎನ್ನಲಾಗಿದೆ. 

ಈ ಸಂಬಂಧ ನಿರ್ದೇಶಕ, ನಿರ್ಮಾಪಕ ಟೈಗರ್ ನಾಗ್‌ ಎಂಬುವವರು ಸಿಬಿಐಗೆ ದೂರು ನೀಡಿದ್ದರು. ಈ ದೂರಿನ ಮೇರೆಗೆ ಲಂಚ ಸ್ವೀಕರಿಸುವಾಗಲೇ ಸೆನ್ಸಾರ್‌ ಅಧಿಕಾರಿಯನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಬೆಂಗಳೂರಿನ ಮಲ್ಲೇಶ್ವರಂ ಎಸ್.ಆರ್.ವಿ ಸ್ಟುಡಿಯೋದಲ್ಲಿ ರೀಜನಲ್ ಆಫೀಸರ್ ಅನ್ನು ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಹೊಸ ನಿರ್ಮಾಪಕರನ್ನು ಟಾರ್ಗೆಟ್ ಮಾಡಿ ಸತಾಯಿಸಿ ಸೆನ್ಸಾರ್ ಅಧಿಕಾರಿ ಪ್ರಶಾಂತ್ ಕುಮಾರ್ ಹಣ ಪೀಕುತಿದ್ದ ಎನ್ನಲಾಗಿದೆ. ‘ಅಡವಿ’ ಸಿನಿಮಾಕ್ಕೆ ಸೆನ್ಸಾರ್ ಪ್ರಮಾಣ ಪತ್ರ ನೀಡಲು ಒಂದು ವಾರದಿಂದ ಸತಾಯಿಸುತ್ತಿದ್ದ, ಸೆನ್ಸಾರ್ ಅಧಿಕಾರಿಯ ಕಿರುಕುಳಕ್ಕೆ ಬೇಸತ್ತು ಸಿಬಿಐ ಅಧಿಕಾರಿಗಳಿಗೆ ದೂರು ನೀಡಿದ್ದ ಸಾಮಾಜಿಕ ಹೋರಾಟಗಾರ ನಿರ್ದೇಶಕ ನಿರ್ಮಾಪಕ ಟೈಗರ್ ನಾಗ್ ಸಿಬಿಐ ಕಚೇರಿಗೆ ತೆರಳಿ ದೂರು ನೀಡಿದ್ದರು. 

ಶಾಸಕ ಎಚ್‌.ಸಿ.ಬಾಲಕೃಷ್ಣ ಪ್ರಧಾನಿ ಮೋದಿ ಬಳಿ ಕ್ಷಮೆ ಕೇಳಲಿ: ಎಂ.ಪಿ.ರೇಣುಕಾಚಾರ್ಯ

ಲಂಚದ ವಿರುದ್ಧ ಟೈಗರ್​ ನಾಗ್​ರ ಹೋರಾಟಕ್ಕೆ ಕಳೆದ ಎರಡು ದಿನಗಳಿಂದ ಜೊತೆಗಿದ್ದು ಹೋರಾಟಕ್ಕೆ ನಟ, ನಿರ್ದೇಶಕ ಕರ್ನಾ ಟಕ ಚಲನ ಚಿತ್ರ ವಾಣಿಜ್ಯ ಮಂಡಳಿ ಕಾರ್ಯಕಾರಿ ಸಮಿತಿ ಆಸ್ಕರ್ ಕೃಷ್ಣ ಸಹ ಜೊತೆಗೂಡಿದ್ದರು. ನವೆಂಬರ್ 28 ಸಂಜೆ 6 ರ ಸುಮಾರಿನಲ್ಲಿ ಅಧಿಕಾರಿ ಪ್ರಶಾಂತ್ ಕುಮಾರ್, ಟೈಗರ್ ನಾಗ್​ರಿಂದ ಲಂಚ ಪಡೆಯುವ ಸಮಯದಲ್ಲಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಲ್ಲೇಶ್ವರಂನ ಎಸ್ ಆರ್ ವಿ ಥಿಯೇಟರ್ ನಲ್ಲಿ ವ್ಯವಸ್ಥಿತವಾಗಿ ದಾಳಿ ನಡೆದಿದೆ. ಹತ್ತಕ್ಕೂ ಹೆಚ್ಚು ಸಿಬಿಐ ಅಧಿಕಾರಿಗಳು ಸಿವಿಲ್ ಡ್ರಸ್ ನಲ್ಲಿ ಬಂದು ಲಂಚ ಪಡೆಯುವಾಗಲೇ ಪ್ರಶಾಂತ್ ಕುಮಾರ್ ಅವರನ್ನು ವಶಕ್ಕೆ ಪಡೆದಿದ್ದಾರೆ.

Follow Us:
Download App:
  • android
  • ios