ಬೆಂಗಳೂರು(ಸೆ.30): ಮಾದಕ ವಸ್ತು ಮಾರಾಟ ಜಾಲ ಪ್ರಕರಣ ಸಂಬಂಧ ಮತ್ತಿಬ್ಬರು ಉದ್ಯಮಿಗಳನ್ನು ಸಿಸಿಬಿ ಪೊಲೀಸರು ಮಂಗಳವಾರ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ.

ಉದ್ಯಮಿಗಳಾದ ಜೋಯೆಬ್‌ ಹಾಗೂ ಆನಂದ್‌ ಎಂಬುವರೇ ತನಿಖೆಗೊಳಗಾಗಿದ್ದು, ಈ ಪ್ರಕರಣದ ಆರೋಪಿಗಳ ಜತೆ ಸ್ನೇಹದ ಹೊಂದಿದ್ದ ಕಾರಣಕ್ಕೆ ಈ ಇಬ್ಬರಿಗೆ ಸಿಸಿಬಿ ತನಿಖೆ ಬಿಸಿ ತಟ್ಟಿದೆ. ಪಬ್‌, ಹೋಟೆಲ್‌, ರೆಸಾರ್ಟ್‌ ಹಾಗೂ ಅಪಾರ್ಟ್‌ಮೆಂಟ್‌ಗಳಲ್ಲಿ ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ, ವೀರೇನ್‌ ಖನ್ನಾ, ರಾಹುಲ್‌, ರವಿಶಂಕರ್‌ ಹಾಗೂ ವೈಭವ್‌ ಜೈನ್‌ ಸೇರಿದಂತೆ ಇತರೆ ಆರೋಪಿಗಳು ಪಾರ್ಟಿ ಆಯೋಜಿಸುತ್ತಿದ್ದರು. 

ಲಾಕ್‌ಡೌನ್‌ನಿಂದಾಗಿ ಕೆಲಸವಿಲ್ಲದೆ ಉಪನ್ಯಾಸಕನಿಂದ ಡ್ರಗ್ಸ್‌ ದಂಧೆ: 76 ಲಕ್ಷ ಮೌಲ್ಯದ ಗಾಂಜಾ ಜಪ್ತಿ

ಈ ಪಾರ್ಟಿಗಳಲ್ಲಿ ಆನಂದ್‌ ಹಾಗೂ ಜೋಯೆಬ್‌ ಕಾಣಿಸಿಕೊಂಡಿದ್ದಾರೆ. ಅಲ್ಲದೆ, ಈ ಇಬ್ಬರ ಮೊಬೈಲ್‌ ಬಳಸಿ ಪಾರ್ಟಿಗಳಿಗೆ ಕೆಲವರನ್ನು ಆಹ್ವಾನಿಸಲು ಆರೋಪಿಗಳು ಬಳಸಿದ್ದಾರೆ. ಹೀಗಾಗಿ ಈ ಎಲ್ಲ ಮಾಹಿತಿ ಬಗ್ಗೆ ವಿವರ ಪಡೆಯಲು ವಿಚಾರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.