Asianet Suvarna News Asianet Suvarna News

ವಿಶ್ವಕಪ್ ಕ್ರಿಕೆಟ್‌ ಫೈನಲ್ ಪಂದ್ಯಕ್ಕೆ ಬೆಟ್ಟಿಂಗ್; ಸಿಸಿಬಿ ದಾಳಿ ವೇಳೆ ಒಂದು ಕೆಜಿ ಚಿನ್ನ ಪತ್ತೆ!

ಭಾರತ ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್ ಪಂದ್ಯದ ವೇಳೆ ಕ್ರಿಕೆಟ್ ಬೆಟ್ಟಿಂಗ್ ನಡೆಸಿದ್ದ ಫ್ಯಾಟ್ ಒಂದರ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ಬೆಟ್ಟಿಂಗ್ ನಡೆಸಿದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

CCB Police raids  on cricket betting 1 kg of gold was found in rr nagar at bengaluru rav
Author
First Published Nov 21, 2023, 8:24 AM IST

ಬೆಂಗಳೂರು (ನ.21): ಭಾರತ ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್ ಪಂದ್ಯದ ವೇಳೆ ಕ್ರಿಕೆಟ್ ಬೆಟ್ಟಿಂಗ್ ನಡೆಸಿದ್ದ ಫ್ಯಾಟ್ ಒಂದರ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ಬೆಟ್ಟಿಂಗ್ ನಡೆಸಿದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮದುವೆಗೆ ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ತಾಯಿ-ಮಗಳೊಂದಿಗೆ ಅಸಭ್ಯ ವರ್ತನೆ; ಮಚ್ಚಿನಿಂದ ಹಲ್ಲೆ!

ಸಾಕೇತ್ ಮತ್ತು ರಿಷಬ್ ಬಂಧಿತ ಆರೋಪಿಗಳು. ರಾಜರಾಜೇಶ್ವರಿ ನಗರದ ಫ್ಲಾಟ್ ಒಂದರಲ್ಲಿ ಬೆಟ್ಟಿಂಗ್ ನಡೆಸುತ್ತಿರುವ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ್ದ ಸಿಸಿಬಿ ಪೊಲೀಸರು. ದಾಳಿ ವೇಳೆ ಲ್ಯಾಪ್ ಟಾಪ್ ಹಾಗೂ ಮೊಬೈಲ್‌ಗಳು ಪತ್ತೆ. ಆನ್‌ಲೈನ್ ವೆಬ್ ಸೈಟ್ ಮೂಲಕ ಬೆಟ್ಟಿಂಗ್ ನಡೆಸ್ತಿದ್ದ ಆರೋಪಿಗಳು. ಬಳಿಕ ಫ್ಲಾಟ್ ಪರಿಶೀಲನೆ ನಡೆಸಿದಾಗ ಒಂದು ಕೆಜಿ ಚಿನ್ನ ಪತ್ತೆಯಾಗಿದೆ. ನೂರು ಗ್ರಾಂ ತೂಕದ ಹತ್ತು ಚಿನ್ನದ ಬಿಸ್ಕೆಟ್ಸ್ ಪತ್ತೆಯಾಗಿವೆ. ಪತ್ತೆಯಾದ ಚಿನ್ನಕ್ಕೆ ಯಾವುದೇ ದಾಖಲೆಗಳು ಸಿಗದ ಹಿನ್ನಲೆ ಚಿನ್ನದ ಬಿಸ್ಕೆಟ್ ವಶಕ್ಕೆ ಪಡೆದುಕೊಂಡಿರುವ ಸಿಸಿಬಿ ಪೊಲೀಸರು.

ಪ್ರಕರಣ ಸಂಬಂಧ ಇಬ್ಬರನ್ನು ವಶಕ್ಕೆ ಪಡೆದುಕೊಂಡಿರುವ ಸಿಸಿಬಿ ಪೊಲೀಸರು. ಬೆಂಗಳೂರಿನಲ್ಲಿ ಬೆಟ್ಟಿಂಗ್ ಮಾಫಿಯಾ ಮತ್ತೆ ತಲೆ ಎತ್ತಿರುವ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ. ಆರೋಪಿಗಳು ಯಾರೊಂದಿಗೆ ಬೆಟ್ಟಿಂಗ್ ನಡೆಸಿದ್ದಾರೆ. ಬೆಟ್ಟಿಂಗ್ ಹಿಂದೆ ಯಾರಿದ್ದಾರೆಂದು ಸಂಪೂರ್ಣ ಮಾಹಿತಿ ಕಲೆ ಹಾಕುತ್ತಿರುವ ಸಿಸಿಬಿ ಪೊಲೀಸರು. 

ಕಾರು ಅಪಘಾತ: ಕಾಂಗ್ರೆಸ್ ನಾಯಕಿ ವೀಣಾ ಕಾಶಪ್ಪನವರಗೆ ಗಾಯ

Follow Us:
Download App:
  • android
  • ios