ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಸಿ.ಡಿ. ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ವಿರುದ್ಧ ಕೊನೆಗೂ ಎಫ್‌ಐಆರ್ ದಾಖಲಾಗಿದೆ. ಹಾಗಾದ್ರೆ ಯಾವ್ಯಾವ ಸೆಕ್ಷನ್ ಹಾಕಬಹುದು?
ಬೆಂಗಳೂರು, (ಮಾ.26): ರಾಸಲೀಲೆ ಸಿ.ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ದೂರು ನೀಡಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
"
ಸಿಡಿ ಕೇಸ್ನ ಯುವತಿ ಪರವಾಗಿ ವಕೀಲ ಜಗದೀಶ್ ಕೆ.ಎನ್. ನೇತೃತ್ವದ ತಂಡ ಪೊಲೀಸ್ ಕಮಿಷನರ್ ಕಚೇರಿಗೆ ಇಂದು (ಶುಕ್ರವಾರ) ಮಧ್ಯಾಹ್ನ ದೂರು ನೀಡಿದೆ.
ಸಿ.ಡಿ.ಕೇಸ್‌ಗೆ ಸ್ಫೋಟಕ ಟ್ವಿಸ್ಟ್: ರಮೇಶ್ ಜಾರಕಿಹೊಳಿಗೆ ಬಿಗ್ ಶಾಕ್!
ಕಮಿಷನರ್ ಕಮಲ್ ಪಂತ್ ಸೂಚನೆ ಮೇರೆಗೆ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಲೈಂಗಿಕ ಸಂಪರ್ಕ, ಮಾನಹಾನಿ, ಜೀವ ಬೆದರಿಕೆಯೊಡ್ಡಿದ್ದಾಗಿ ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಇನ್ನು ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಐಪಿಸಿ ಸೆಕ್ಷನ್ 376 ಸಿ ( ಅಧಿಕಾರ ದುರುಪಯೋಗ ಪಡಿಸಿಕೊಂಡು ಲೈಂಗಿಕ ದೌರ್ಜನ್ಯ), ಸೆಕ್ಷನ್ 354 (ಮಹಿಳೆಯ ಮಾನಹಾನಿ), 506(ಜೀವ ಬೆದರಿಕೆ) , 354 (ಮಹಿಳೆಯ ಮಾನಹಾನಿ), ಐಟಿ ಕಾಯ್ದೆ 67 (ಅಶ್ಲೀಲ ವಿಡಿಯೋ ಹರಿಬಿಟ್ಟ ಆರೋಪ) ರ ಅಡಿ ಪ್ರಕರಣ ದಾಖಲಾಗುವ ಸಾಧ್ಯತೆಯಿದೆ.
