ವಿಜಯಪುರ (ಏ.02): ಮಾಜಿ ಸಚಿವರ ಸಿ.ಡಿ. ಪ್ರಕರಣ ಸಂಬಂಧ ನಮ್ಮ ಬಳಿ ಇನ್ನೂ 9 ಸಾಕ್ಷ್ಯ ಇವೆ. ಅವೆಲ್ಲಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರಿಗೆ ಮುಳುವಾಗಲಿವೆ ಎಂದು ಯುವತಿಯ ಸಹೋದರ ಹೇಳಿಕೆ ನೀಡಿದ್ದಾರೆ. 

ಗುರುವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ನನ್ನ ಸಹೋದರಿ ಮೇಲೆ ಡಿ.ಕೆ.ಶಿವಕುಮಾರ್‌ ಒತ್ತಡ ಇದೆ. ಇದನ್ನು ನಾನು ದಾಖಲೆ ಸಮೇತ ಸಾಬೀತುಪಡಿಸುವೆ ಎಂದರು.

ಸಿಡಿ ಹಿಂದಿನ ಕಾಣದ ಕೈಗಳು ಒಂದೊಂದಾಗಿ ಬಹಿರಂಗ! ..

 ಸಮಗ್ರವಾಗಿ ತನಿಖೆಯಾದರೆ ಎಲ್ಲ ವಿಷಯಗಳು ಹೊರಬರುತ್ತವೆ. ಸತ್ಯವನ್ನು ಮುಚ್ಚಿಡಲು ಸಾಧ್ಯವಿಲ್ಲ. ಇಂದಲ್ಲ ನಾಳೆ ಡಿ.ಕೆ. ಶಿವಕುಮಾರ್‌ ಹೆಸರು ಹೊರಗೆ ಬಂದೇ ಬರುತ್ತದೆ ಎಂದು ತಿಳಿಸಿದರು.

ಈಗಾಗಲೇ ಸೀಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಗಳು ನಡೆಯುತ್ತಿದೆ. ಸೀಡಿ ಲೇಡಿ ಎಸ್‌ಐಟಿ ತನಿಖೆ ನಡೆಸುತ್ತಿದ್ದು ಪೋಷಕರ ವಿರುದ್ಧವೂ ಆಕೆ ಅಸಮಾಧಾನಗೊಂಡಿದ್ದಾಳೆ. ಇತ್ತ ಆಕೆಯ ಕುಟುಂಬ ಡಿಕೆ ಶಿವಕುಮಾರ್ ವಿರುದ್ಧ ಆರೋಪಗಳನ್ನು ಮುಂದುವರಿಸಿದೆ.