ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಪಟ್ಟಣದ ಕಂಚಗಾರ ಬೀದಿಯಲ್ಲಿ ಮನಕಲಕುವ ಘಟನೆ ನಡೆದಿದೆ. ಬಕ್ರೀದ್ ಹಬ್ಬದ ದಿನವೇ ಪತಿ ತನ್ನ ಪತ್ನಿಯನ್ನು ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಮೃತ ಮಹಿಳೆಯನ್ನು..
ಹಾಸನ (ಮೇ.28): ಜಿಲ್ಲೆಯ ಚನ್ನರಾಯಪಟ್ಟಣ ಪಟ್ಟಣದ ಕಂಚಗಾರ ಬೀದಿಯಲ್ಲಿ ಮನಕಲಕುವ ಘಟನೆ ನಡೆದಿದೆ. ಬಕ್ರೀದ್ ಹಬ್ಬದ ದಿನವೇ ಪತಿ ತನ್ನ ಪತ್ನಿಯನ್ನು ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಮೃತ ಮಹಿಳೆಯನ್ನು ಗುಲ್‌ಶರ್ ಬಾನು ಎಂದು ಗುರುತಿಸಲಾಗಿದ್ದು, ಪತಿ ಸೈಫ್ ಉಲ್ಲಾ ವಿರುದ್ಧ ಗಂಭೀರ ಆರೋಪಗಳು ಕೇಳಿಬರುತ್ತಿವೆ.
ಕುಟುಂಬದವರ ಮಾಹಿತಿ ಪ್ರಕಾರ, ಸೈಫ್ ಉಲ್ಲಾ ಮೊದಲಿನಿಂದಲೂ ಪತ್ನಿಗೆ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದ ಎನ್ನಲಾಗಿದೆ. ಅಲ್ಲದೆ, ಹಣಕ್ಕಾಗಿ ಪತ್ನಿಯ ಮನೆಯವರನ್ನು ನಿರಂತರವಾಗಿ ಪೀಡಿಸುತ್ತಿದ್ದ ಎಂದು ಆರೋಪಿಸಲಾಗಿದೆ. ಹಬ್ಬದ ದಿನವೂ ಜಗಳ ನಡೆಸಿ ಹಲ್ಲೆ ಮಾಡಿದ ಬಳಿಕ ಪತ್ನಿಯನ್ನು ಕೊಲೆ ಮಾಡಿದ್ದಾನೆ ಎಂದು ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಕರಣ ದಾಖಲು
ಈ ಪ್ರಕರಣದಲ್ಲಿ ಸೈಫ್ ಉಲ್ಲಾ ಕುಟುಂಬದವರ ಪಾತ್ರವೂ ಇದೆ ಎಂದು ಮೃತಳ ಕುಟುಂಬದವರು ಆರೋಪಿಸಿದ್ದು, ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಘಟನೆ ಸಂಬಂಧ ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


