ಸಂಚರಿಸುತ್ತಿದ್ದ ಕೆಮಿಕಲ್ ತುಂಬಿದ ಲಾರಿಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಸ್ಫೋಟಗೊಂಡಿದೆ. ಇದರ ಪರಿಣಾಮ ನಾಲ್ವರು ಮೃತಪಟ್ಟಿದ್ದರೆ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇತ್ತ ಎಕ್ಸ್‌ಪ್ರೆಸ್ ಹೆದ್ದಾರಿ ಸಂಪೂರ್ಣ ಜಾಮ್ ಆಗಿದೆ.
ಮುಂಬೈ(ಜೂ.13) ಕೆಮಿಕಲ್ ತುಂಬಿದ ಲೋಡೆಡ್ ಟ್ರಕ್ ಸಂಚರಿಸುತ್ತಿದ್ದ ವೇಳೆ ಬೆಂಕಿ ಕಾಣಿಸಿಕೊಂಡು ಸ್ಫೋಟಗೊಂಡ ಘಟನೆ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ ನಡೆದಿದೆ. ಈ ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಮೂವರು ಗಂಭೀರವಾಗಿ ಗಾಯೊಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ. ಲಾರಿ ಚಾಲಕ ಘಟನೆಯಲ್ಲಿ ಮೃತಪಟ್ಟಿದ್ದಾನೆ. ಹೆದ್ದಾರಿಯಲ್ಲೇ ಲಾರಿ ಸ್ಫೋಟಗೊಂಡ ಕಾರಣ ರಸ್ತೆ ಸಂಪೂರ್ಣ ಜಾಮ್ ಆಗಿದೆ.
ಮುಂಬೈನಿಂದ ಕೆಮಿಕಲ್ ತುಂಬಿಕೊಂಡು ಪುಣೆಯತ್ತ ಹೊರಟ್ಟಿದ್ದ ಲಾರಿ ಲೋನವಾಲ ಹಾಗೂ ಖಂಡಾಲಾ ಬಳಿ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೆಮಿಕಲ್ ಲಾರಿ ಕಾರಣ ಬೆಂಕಿ ಕಾಣಿಸಿಕೊಂಡ ತಕ್ಷಣವೇ ಕೆಮಿಕಲ್‌ಗೆ ಬೆಂಕಿ ತಗುಲಿದೆ. ಮರುಕ್ಷಣಲ್ಲಿ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಇತರ ಮೂರು ವಾಹನಗಳು ಜಖಂಗೊಂಡಿದೆ. ಇದರ ಪರಿಣಾಮ ಎಕ್ಸ್‌ಪ್ರೆಸ್ ಹೆದ್ದಾರಿ ಸಂಪೂರ್ಣ ಜಾಮ್ ಆಗಿತ್ತು. ವಾಹನಗಳನ್ನು ಬೇರೆ ಮಾರ್ಗದ ಮೂಲಕ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು. ಆದರೆ ಹೆದ್ದಾರಿಯಲ್ಲಿ ಘಟನೆ ನಡೆದುು ಸಂಪೂರ್ಣ ಜಾಮ್ ಆಗಿದೆ. ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದೆ.
ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಸರಣಿ ದರೋಡೆ ತಡೆಯಲು ಮರವೇರಿದ ಪೊಲೀಸರು
ಮೂವರು ತೀವ್ರವಾಗಿ ಗಾಯಗೊಂಡಿರುವ ಕಾರಣ ಸೋಮತಾನೆ ಫಟಾದ ಪವನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತ ಘಟನೆ ಕುರಿತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಆಘಾತ ವ್ಯಕ್ತಪಡಿಸಿದ್ದಾರೆ. ಮುಂಬೈ-ಪುಣೆ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ನಾಲ್ವರು ಮೃತಪಪಟ್ಟಿದ್ದಾರೆ. ಮೂವರು ಗಾಯಗೊಂಡಿದ್ದಾರೆ. ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಲಾಗಿದೆ. ಗಾಯಾಳುಗಳು ಶೀಘ್ರದಲ್ಲೇ ಗುಣಮುಖರಾಗಲಿ. ಇತ್ತ ಆಪ್ತರನ್ನು ಕಳೆದುಕೊಂಡ ಕುಟುಂಬಸ್ಥರಿಗೆ ದುಖ ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಫಡ್ನವಿಸ್ ಹೇಳಿದ್ದಾರೆ.
ಗೋವಾ ಟ್ರಿಪ್ ಮುಗಿಸಿ ಬರ್ತಿದ್ದ ಕಾರು ಅಪಘಾತ: ಬೆಂಗಳೂರಿನ 2 ತಿಂಗಳ ಮಗು ಸೇರಿ ಮೂವರ ಸಾವು
ಇತ್ತೀಚೆಗೆ ಇದೇ ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆದ ಟ್ರಕ್‌ವೊಂದು ಸರಣಿಯಾಗಿ 12 ವಾಹನಗಳಿಗೆ ಡಿಕ್ಕಿ ಹೊಡೆದಿರುವ ಆತಂಕಕಾರಿ ಘಟನೆ ನಡೆದಿತ್ತು. ಘಟನೆಯಲ್ಲಿ ಸುದೈವವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲವಾದರೂ 6 ಮಂದಿ ಗಾಯಗೊಂಡಿದ್ದಾರೆ. ರಾಯಘಡ ಜಿಲ್ಲೆಯ ಖೋಪೋಲಿ ಬಳಿ ಟ್ರಕ್ ಕನಿಷ್ಠ 12 ವಾಹನಗಳಿಗೆ ಡಿಕ್ಕಿ ಹೊಡೆಯುವ ದೃಶ್ಯಗಳು ಜಾಲತಾಣದಲ್ಲಿ ವೈರಲ್ ಆಗಿವೆ. ಈ ವೇಳೆ ಏಳೆಂಟು ಕಾರುಗಳು ಜಖಂಗೊಂಡಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲ ಕಾಲ ರಸ್ತೆಯಲ್ಲಿ ಸಂಚಾರಕ್ಕೆ ಅಡ್ಡಿಯಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
