ಟಿವಿ ವಿಚಾರಕ್ಕಾಗಿ ದಂಪತಿ ಮಧ್ಯೆ ಜಗಳವಾಗಿ ಸಾವಿನಲ್ಲಿ ಅಂತ್ಯ ಕಂಡಿರುವ ಘಟನೆ ಭಾನುವಾರದಂದು ಕಾರ್ಕಳ ತಾಲೂಕು ನಲ್ಲೂರು ಎಂಬಲ್ಲಿ ನಡೆದಿದೆ. ಮೃತಪಟ್ಟ ದಂಪತಿ ಯಲ್ಲಾಪುರ ಮೂಲದವರು ಎಂದು ತಿಳಿದು ಬಂದಿದೆ. 

ಕಾರ್ಕಳ (ಜೂ.26): ಟಿವಿ ವಿಚಾರಕ್ಕಾಗಿ ದಂಪತಿ ಮಧ್ಯೆ ಜಗಳವಾಗಿ ಸಾವಿನಲ್ಲಿ ಅಂತ್ಯ ಕಂಡಿರುವ ಘಟನೆ ಭಾನುವಾರದಂದು ಕಾರ್ಕಳ ತಾಲೂಕು ನಲ್ಲೂರು ಎಂಬಲ್ಲಿ ನಡೆದಿದೆ. ಮೃತಪಟ್ಟ ದಂಪತಿ ಯಲ್ಲಾಪುರ ಮೂಲದವರು ಎಂದು ತಿಳಿದು ಬಂದಿದೆ. ಇಮ್ಯಾನುಲ್‌ ಸಿದ್ದಿ (40) ಹಾಗೂ ಯಶೋಧಾ (32) ಎಂಬವರೇ ಸಾವಿಗೀಡಾದ ದಂಪತಿ. ಭಾನುವಾರ ಬೆಳಗ್ಗೆ ಟಿವಿ ವಿಚಾರಕ್ಕೆ ಸಂಬಂಧಿಸಿದಂತೆ ದಂಪತಿ ಮಧ್ಯೆ ಜಗಳವಾಗಿದ್ದು, ಈ ವೇಳೆ ಯಶೋಧಾ ತೋಟದಲ್ಲಿದ್ದ ಬಾವಿಗೆ ಹಾರಿದರು. 

ಯಶೋಧಾರನ್ನು ರಕ್ಷಿಸಲು ತೆರಳಿದ್ದ ಪತಿ ಇಮ್ಯಾನುಲ್‌ ಕೂಡ ನೀರುಪಾಲಾಗಿದ್ದಾರೆ. ಕಳೆದ ಎರಡು ವರ್ಷಗಳಿಂದ ಇಮ್ಯಾನುಲ್‌, ಯಶೋಧಾ ದಂಪತಿ ನಲ್ಲೂರಿನ ತೋಟವೊಂದರಲ್ಲಿ ಕೆಲಸಕ್ಕಿದ್ದರು. ದಂಪತಿ ಸಾವಿನಿಂದ ಅವರ 10 ವರ್ಷದ ಬಾಲಕ ಹಾಗೂ 9 ವರ್ಷದ ಬಾಲಕಿ ಅನಾಥರಾಗಿದ್ದಾರೆ. ಡಿವೈಎಸ್ಪಿ ಅರವಿಂದ್‌ ಕಲಗುಜ್ಜಿ, ಗ್ರಾಮಾಂತರ ಪೊಲೀಸ್‌ ಠಾಣೆ ಎಸ್‌ಐ ತೇಜಸ್ವಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

ವೃಷಣ ಹಿಸುಕಿ ಗಾಯಗೊಳಿಸಿದವಗೆ 3 ವರ್ಷ ಜೈಲು: ಹೈಕೋರ್ಟ್‌ ಆದೇಶ

ಅತಿ ವೇಗವಾಗಿ ಕಾರು ಡಿಕ್ಕಿ: ಅತಿವೇಗವಾಗಿ ಬಂದ ಕಾರೊಂದು ರಸ್ತೆ ದಾಟುತ್ತಿದ್ದ ಪಾದಾಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಆತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಜಾಜಿನಗರ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರಾಜಾಜಿನಗರದ ಡಾ. ರಾಜ್‌ಕುಮಾರ್‌ ರಸ್ತೆಯ ಸುಗುಣ ಆಸ್ಪತ್ರೆ ಸಮೀಪವೇ ಭಾನುವಾರ ಬೆಳಗ್ಗೆ 10.40ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಮೃತ ಪಾದಾಚಾರಿಯ ಗುರುತು ಪತ್ತೆಯಾಗಿಲ್ಲ. ಸುಮಾರು 55 ವರ್ಷದ ಪುರುಷ ವ್ಯಕ್ತಿ ಬಿಳಿ ಅಂಗಿ ಮತ್ತು ಕಪ್ಪು ಬಣ್ಣದ ಪ್ಯಾಂಟ್‌ ಧರಿಸಿದ್ದಾರೆ. 

ಸದ್ಯ ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರದಲ್ಲಿ ಮೃತದೇಹ ಇರಿಸಿದ್ದು, ಮೃತನ ಗುರುತು ಪತ್ತೆಗೆ ಪ್ರಯತ್ನಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಳಗ್ಗೆ ಯಶವಂತಪುರ ಕಡೆಯಿಂದ ವೇಗವಾಗಿ ಬಂದ ಕಾರು, ಸುಗುಣ ಆಸ್ಪತ್ರೆ ಸಮೀಪದ ಟ್ರಾಫಿಕ್‌ ಸಿಗ್ನಲ್‌ನಲ್ಲಿ ರಸ್ತೆ ದಾಟುತ್ತಿದ್ದ ಪಾದಾಚಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದ ಪಾದಾಚಾರಿಯ ಕಿವಿ ಹಾಗೂ ಮೂಗಿನಲ್ಲಿ ರಕ್ತಸ್ರಾವಾಗಿದೆ. 

ಕೇಂದ್ರದ ಬಳಿ ಅಗತ್ಯಕ್ಕಿಂತ 2 ಪಟ್ಟು ಅಕ್ಕಿ ದಾಸ್ತಾನಿದ್ದರೂ ಕೊಡ್ತಿಲ್ಲ: ಸಚಿವ ಮುನಿಯಪ್ಪ ಕಿಡಿ

ಕೂಡಲೇ ಸ್ಥಳೀಯರು ಗಾಯಾಳುವಿನ ನೆರವಿಗೆ ಧಾವಿಸಿ ಆಸ್ಪತ್ರೆಗೆ ಕರೆದೊಯ್ಯಲು ಮುಂದಾಗಿದ್ದಾರೆ. ಅಷ್ಟರಲ್ಲಿ ಪಾದಾಚಾರಿ ತೀವ್ರ ರಕ್ತಸ್ರಾವಾಗಿ ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಚಾಲಕ ಕಾರಿನೊಂದಿಗೆ ಪರಾರಿಯಾಗಿದ್ದ. ಘಟನಾ ಸ್ಥಳದ ಸುತ್ತಮುತ್ತಲ ಕಟ್ಟಡಗಳ ಸಿಸಿಟಿವಿ ಕ್ಯಾಮರಾ ದೃಶ್ಯಾವಳಿ ಆಧರಿಸಿ ಕಾರನ್ನು ಪತ್ತೆಹಚ್ಚಲಾಗಿದೆ. ಈ ಸಂಬಂಧ ರಾಜಾಜಿನಗರ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.