Crime News: ಸಾಮೂಹಿಕ ಅತ್ಯಾಚಾರ, ವಿಡಿಯೋ ಮಾಡಿ ಬ್ಲಾಕ್‌ಮೇಲ್: ಅಪ್ರಾಪ್ತೆ ಆತ್ಮಹತ್ಯೆಗೆ ಯತ್ನ

Crime News: ಅತ್ಯಾಚಾರಿಗಳಿಂದ ಬ್ಲ್ಯಾಕ್‌ಮೇಲ್‌ಗೆ ಒಳಗಾದ  ಅಪ್ರಾಪ್ತ ಬಾಲಕಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ.

Class 10 girl attempts suicide after gang rape says was being blackmailed by rapists for money in Jaipur mnj

ಜೈಪುರ (ಅ. 15): ಅತ್ಯಾಚಾರಿಗಳಿಂದ ಬ್ಲ್ಯಾಕ್‌ಮೇಲ್‌ಗೆ ಒಳಗಾದ 10 ನೇ ತರಗತಿಯಲ್ಲಿ ಓದುತ್ತಿರುವ ಅಪ್ರಾಪ್ತ ಬಾಲಕಿ (15) ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ಸಹಪಾಠಿ ಮೂಲಕ ಪರಿಚಯವಾದ ವ್ಯಕ್ತಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಅಲ್ಲದೇ ಹೋಟೆಲ್‌ನಲ್ಲಿ ಪ್ರಮುಖ ಆರೋಪಿಗೆ ಪರಿಚಯವಿರುವ ಇತರ ನಾಲ್ಕು ಜನರು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.  ಅತ್ಯಾಚಾರಿಗಳು ಚಿತ್ರೀಕರಿಸಿದ ವಿಡಿಯೋ ತುಣುಕುಗಳನ್ನು ಬಿಡುಗಡೆ ಮಾಡುವುದಾಗಿ ಬಾಲಕಿಗೆ ಬ್ಲ್ಯಾಕ್‌ಮೇಲ್‌ ಮಾಡಿದ್ದು ಬಾಲಕಿಯಿಂದ ₹50,000 ರೂ ಬೇಡಿಕೆ ಇಟ್ಟಿದ್ದಾರೆ. 

ಇದರಿಂದ ಮನನೊಂದ ಬಾಲಕಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾಳೆ. ಎರಡು ದಿನಗಳ  ನಂತರ ಕುಟುಂಬದ ಬಳಿ ತನ್ನೊಂದಿಗಾದ ಕೃತ್ಯವನ್ನು ಬಾಲಕಿ ವಿವರಿಸಿದ್ದಾಳೆ. ಬಳಿಕ ಪೋಷಕರು ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಪ್ರಮುಖ ಆರೋಪಿ ಆಯುಷ್ (23) ತಲೆಮರೆಸಿಕೊಂಡಿದ್ದಾನೆ. 

ಬಾಲಕಿಯನ್ನು ಆಕೆಯ ಸಹಪಾಠಿ ಆಯುಷ್‌ಗೆ ಪರಿಚಯಿಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ನಂತರ ಆಯುಷ್ ತನ್ನ ಕೋಣೆಗೆ ಬರುವಂತೆ ಬಾಲಕಿಗೆ ಮನವರಿಕೆ ಮಾಡಿಕೊಟ್ಟು ಅತ್ಯಾಚಾರ ಎಸಗಿದ್ದಾನೆ. ಆರೋಪಿಯು ತನ್ನ ಮೊಬೈಲ್ ಫೋನ್‌ನಲ್ಲಿ ಕೃತ್ಯವನ್ನು ರೆಕಾರ್ಡ್ ಮಾಡಿದ್ದಾನೆ ಮತ್ತು ಅದನ್ನು ಬಳಸಿ ತನ್ನ ನಾಲ್ವರು ಸ್ನೇಹಿತರೊಂದಿಗೆ ಹೋಟೆಲ್‌ನಲ್ಲಿ ವಿವಿಧ ಸಂದರ್ಭಗಳಲ್ಲಿಬಾಲಕಿಗೆ ಕಿರುಕುಳ ನೀಡಿದ್ದಾನೆ. 

ಮಂಡ್ಯ: ಮಳವಳ್ಳಿಯಲ್ಲಿ ಮತ್ತೊಂದು ರೇಪ್: SSLC ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ ವೃದ್ಧ

ಆರೋಪಿಗಳು ಮೇಲೆ ಅತ್ಯಾಚಾರ ಮಾಡಿದ ನಂತರ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಲು ಪ್ರಾರಂಭಿಸಿದರು ಎಂದು ಸಂತ್ರಸ್ತೆಯ ಹೇಳಿಕೆಯಲ್ಲಿ ತಿಳಿಸಿದ್ದಾಳೆ. ತಪ್ಪಿದಲ್ಲಿ ಹಣ ನೀಡುವಂತೆ ಆರೋಪಿ ಆಕೆಯನ್ನು ಬ್ಲಾಕ್ ಮೇಲ್ ಮಾಡಿದ್ದು, ವಿಡಿಯೋವನ್ನು  ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಹೀಗಾಗಿ ಬಾಲಕಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಬಾಲಕಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

Latest Videos
Follow Us:
Download App:
  • android
  • ios