ಗಿನಿಯಾದಿಂದ ಬೆಂಗಳೂರಿಗೆ ಅಕ್ರಮವಾಗಿ ಮಾದಕವಸ್ತು ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು 686 ಗ್ರಾಂ ಕೊಕೇನ್ ಜಪ್ತಿ ಮಾಡಿದ್ದಾರೆ.
ಬೆಂಗಳೂರು (ಜ.29) : ಗಿನಿಯಾದಿಂದ ಬೆಂಗಳೂರಿಗೆ ಅಕ್ರಮವಾಗಿ ಮಾದಕವಸ್ತು ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು 686 ಗ್ರಾಂ ಕೊಕೇನ್ ಜಪ್ತಿ ಮಾಡಿದ್ದಾರೆ.
ಆರೋಪಿಯು ಜ.14ರಂದು ಗಿನಿಯಾದಿಂದ ದುಬೈ ಮೂಲಕ ಬೆಂಗಳೂರಿಗೆ ‘ಇಕೆ-566’ ವಿಮಾನದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದ ವೇಳೆ ಕಸ್ಟಮ್ಸ್ ಅಧಿಕಾರಿಗಳು ಪ್ರಯಾಣಿಕರನ್ನು ತಪಾಸಣೆ ಮಾಡುತ್ತಿದ್ದರು. ಆಗ ಮಾತ್ರೆ ರೂಪದಲ್ಲಿ ಈತನ ದೇಹದೊಳಗೆ ಮಾದಕವಸ್ತು ಇರುವುದು ಪತ್ತೆಯಾಗಿದೆ. ಕೂಡಲೇ ಆತನನ್ನು ವಶಕ್ಕೆ ಪಡೆದು ಪರಿಶೀಲನೆ ಮಾಡಿದಾಗ ಮಾತ್ರೆ ರೂಪದಲ್ಲಿ 686 ಗ್ರಾಂ ಕೊಕೇನ್ ಪತ್ತೆಯಾಗಿದೆ.
Crime News: ಬೆಂಗಳೂರಿನಲ್ಲಿ ಖಾಸಗಿ ಬಸ್ ಡಿಕ್ಕಿಯಾಗಿ ಮಹಿಳೆ ಸಾವು
ಆರೋಪಿಯ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಎನ್‌ಡಿಪಿಎಸ್ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯದ ಸೂಚನೆ ಮೇರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಕಸ್ಟಮ್ಸ್ ಮೂಲಗಳು ತಿಳಿಸಿವೆ.
ಟಾಟಾ ಹೆಸರಲ್ಲಿ ನಕಲಿ ಸ್ಟ್ರೀಲ್ ಥ್ರೆಡ್ ಸಾಕೇಟ್ ಮಾರಾಟ
ಪ್ರತಿಷ್ಠಿತ ಕಂಪನಿಯ ಹೆಸರಿನ ನಕಲಿ ಸ್ಟ್ರೀಲ್ ಥ್ರೆಡ್ ಸಾಕೇಟ್‌ಗಳನ್ನು ದಾಸ್ತಾನು ಮಾಡಿದ್ದ ಗೋದಾಮಿನ ಮೇಲೆ ದಾಳಿ ನಡೆಸಿರುವ ಕೇಂದ್ರ ಅಪರಾಧ ವಿಭಾಗದÜ(ಸಿಸಿಬಿ)ಪೊಲೀಸರು, .9.69 ಲಕ್ಷ ಮೌಲ್ಯದ 3,030 ನಕಲಿ ಥ್ರೆಟ್ ಸಾಕೇಟ್‌ಗಳನ್ನು ಜಪ್ತಿ ಮಾಡಿದ್ದಾರೆ.
ಲಾಲ್‌ಬಾಗ್ ರಸ್ತೆಯ ಕೆ.ಎಸ್.ಗಾರ್ಡನ್ 4ನೇ ಅಡ್ಡರಸ್ತೆಯ ಕೊಲ್ಕತ್ತಾ ಪೈಪ್ ಪಿಟ್ಟಿಂಗ್‌್ಸ ಹೆಸರಿನ ಅಂಗಡಿಯಲ್ಲಿ ಟಾಟಾ ಕಂಪನಿಯ ಹೆಸರಿನ ಸ್ಟ್ರೀಲ್ ಥ್ರೆಡ್ ಸಾಕೇಟ್‌ಗಳನ್ನು ನಕಲಿ ಮಾಡಿ ಅಸಲಿ ಎಂದು ಸಾರ್ವಜನಿಕರಿಗೆ ನಂಬಿಸಿ ಮಾರಾಟ ಮಾಡಲಾಗುತ್ತಿತ್ತು. ಈ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಗೋದಾಮಿನ ಮೇಲೆ ದಾಳಿ ನಡೆಸಿ ನಕಲಿ ಮಾಲುಗಳನ್ನು ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ, ಟ್ರಾನ್ಸ್‌ಫಾರ್ಮರ್‌ಗೆ ಲೈನ್‌ಮ್ಯಾನ್ ಬಲಿ
ಪ್ರತಿಷ್ಠಿತ ಕಂಪನಿಯ ಹೆಸರನ್ನು ನಕಲು ಮಾಡಿ ಕಾಪಿ ರೈಡ್ ಕಾಯ್ದೆ ಉಲ್ಲಂಘಿಸಿದ ಅಂಗಡಿಯ ಮಾಲಿಕ ಸೋಮನಾಥ ಬನ್ಸಾಲ್‌ನನ್ನು ಬಂಧಿಸಲಾಗಿದೆ. ಈ ಸಂಬಂಧ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
