ಕಾಫಿಡೇ ಮಾಲೀಕ ಸಿದ್ದಾರ್ಥ ಆತ್ಮಹತ್ಯೆ ಸ್ಥಳದಲ್ಲಿ ಮತ್ತೊಬ್ಬ ಉದ್ಯಮಿ ನದಿಗೆ ಹಾರಿ ಸಾವಿಗೆ ಶರಣು

ಕಾಫಿಡೇ ಮಾಲೀಕ ಸಿದ್ದಾರ್ಥ ಸಾವಿಗೆ ಶರಣಾದ ಸ್ಥಳದಲ್ಲಿಯೇ ಮತ್ತೊಬ್ಬ ಉದ್ಯಮಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

Coffee Day Siddharth death spot another businessman jumped into Netravati River to self death sat

ಮಂಗಳೂರು (ಅ.30): ಕಳೆದ ನಾಲ್ಕು ವರ್ಷಗಳ ಹಿಂದೆ ಅಂತಾರಾಷ್ಟ್ರೀಯವಾಗಿ ಪ್ರಸಿದ್ಧಿ ಪಡೆದ ಉದ್ಯಮಗಳಲ್ಲಿ ಒಂದಾಗಿದ್ದ ಕಾಫಿಡೇ ಮಾಲೀಕ ಸಿದ್ದಾರ್ಥ ಅವರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಸ್ಥಳದಲ್ಲಿಯೇ ಇಂದು ಮತ್ತೊಬ್ಬ ಉದ್ಯಮಿ ತನ್ನ ಕಾರನ್ನು ನಿಲ್ಲಿಸಿ ನದಿಗೆ ಹಾರಿ ಸಾವಿಗೆ ಶರಣಾಗಿದ್ದಾನೆ.

ಕಾಫಿಡೇ ಮಾಲೀಕ ಸಿದ್ದಾರ್ಥ ಅವರ ಆತ್ಮಹತ್ಯೆ ಬೆನ್ನಲ್ಲಿಯೇ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗುವ ಪ್ರಕರಣಗಳು ಹೆಚ್ಚಾಗಿದ್ದವು. ಈ ಹಿನ್ನೆಲೆಯಲ್ಲಿ ನೇತ್ರಾವತಿ ನದಿಯ ಪಕ್ಕದಲ್ಲಿರುವ ಸೇತುವೆಯ ಆಚೆ-ಈಚೆ ಬೇಲಿಯನ್ನು ನಿರ್ಮಾಣ ಮಾಡಲಾಗಿತ್ತು. ತಂತಿ ಬೇಲಿ ಹಾಗೂ ತಡೆಗೋಡೆ ನಿರ್ಮಾಣ ಮಾಡಿದರೂ ಅದನ್ನು ಮುರಿದು ಆತ್ಮಹತ್ಯೆ ಮಾಡಿಕೊಳ್ಳಲಾಗಿದೆ. ಸೋಮವಾರ ಬೆಳಗ್ಗೆ ಉದ್ಯಮಿಯೊಬ್ಬ ಉಳ್ಳಾಲದ ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈಗ ತಂತಿ ಬೇಲಿ ನಿರ್ಮಾಣ ಮಾಡಿದ ನಂತರ  ಮೂರು ವರ್ಷಗಳ ಬಳಿಕ ಮತ್ತೆ ನೇತ್ರಾವತಿ ಸೇತುವೆ ಆತ್ಮಹತ್ಯೆ ಘಟನೆ ನಡೆದಿದೆ.

ಬೆಂಗಳೂರಿಗೆ ಬೆಂಕಿ ಕಾಟ: 50ಕ್ಕೂ ಅಧಿಕ ಐಷಾರಾಮಿ ಖಾಸಗಿ ಬಸ್‌ಗಳು ಬೆಂಕಿಗಾಹುತಿ

ಚಿಕ್ಕಮಗಳೂರಿನ ಗೋಕುಲ್ ಫಾರ್ಮ್‌ ನಿವಾಸಿ ಪ್ರಸನ್ನ (37) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ‌ತೊಕ್ಕೊಟ್ಟಿನಿಂದ ಮಂಗಳೂರಿಗೆ ಬರುವ ದಾರಿಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಬಳಿ ಕಾರು ನಿಲ್ಲಿಸಿ ತಡೆಬೇಲಿಯ ಬದಿಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಳೆದ 3 ವರ್ಷಗಳಿಂದ ಆತ್ಮಹತ್ಯೆಗಳಿಂದ ನಿರಾತಂಕವಾಗಿದ್ದ ಉಳ್ಳಾಲದ ನೇತ್ರಾವತಿ ಸೇತುವೆಯಲ್ಲಿ ಮೂರು ವರ್ಷಗಳ ಬಳಿಕ ಆತ್ಮಹತ್ಯೆ ಪ್ರಕರಣ ವರದಿಯಾಗಿದೆ. 

2019ರಲ್ಲಿ ಕಾಫಿ ಡೇ ಮಾಲೀಕ ಸಿದ್ದಾರ್ಥ ಆತ್ಮಹತ್ಯೆ ನಂತರ ಈ ಸೇತುವೆಯಲ್ಲಿ ಸರಣಿ ಆತ್ಮಹತ್ಯೆಗಳಾಗಿತ್ತು. ಹೀಗಾಗಿ 2020 ರಲ್ಲಿ ಆತ್ಮಹತ್ಯೆ ತಡೆಗಾಗಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ತಡೆಬೇಲಿಯನ್ನು ಅಳವಡಿಸಿತ್ತು. 2020ರ ನಂತರ ನೇತ್ರಾವತಿ ಸೇತುವೆಯಲ್ಲಿ ಆತ್ಮಹತ್ಯೆಗಳು ನಿಂತಿದ್ದವು. ಆದರೆ, ಇದೀಗ ಮೂರು ವರ್ಷಗಳ ಬಳಿಕ ಮತ್ತೆ ಆತ್ಮಹತ್ಯೆ ಮೂಲಕ ನೇತ್ರಾವತಿ ಸೇತುವೆ ಸುದ್ದಿಯಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest Videos
Follow Us:
Download App:
  • android
  • ios