ಡ್ಯಾಂನಲ್ಲಿ ಈಜಲು ಹೋಗಿ ಕಾಲೇಜು ವಿದ್ಯಾರ್ಥಿನಿಯರು ಸಾವು: ಟ್ರಿಪ್‌ಗೆ ಹೋದವರು ಮಸಣ ಸೇರಿದರು

ಶ್ರೀನಿವಾಸ ಸಾಗರ ಡ್ಯಾಂಗೆ ಒಂದು ದಿನದ ಹೊರ ಸಂಚಾರಕ್ಕೆ ಹೋಗಿದ್ದ 6 ಜನರು ನೀರಿನಲ್ಲಿ ಈಜಲು ಮುಂದಾಗಿದ್ದು, ಈ ವೇಳೆ ಕಲ್ಲಿನ ಮೇಲೆ ನಿಂತಿದ್ದವರು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ.

College girls drowned on went swimming in Chikkaballapura Srinivasa sagara dam sat

ಚಿಕ್ಕಬಳ್ಳಾಪುರ (ಏ.01): ಬೆಂಗಳೂರಿನಿಂದ ಚಿಕ್ಕಬಳ್ಳಾಪುರದ ಶ್ರೀನಿವಾಸ ಸಾಗರ ಡ್ಯಾಂಗೆ ಒಂದು ದಿನದ ಹೊರ ಸಂಚಾರಕ್ಕೆ ಹೋಗಿದ್ದ 6 ಜನರು ನೀರಿನಲ್ಲಿ ಈಜಲು ಮುಂದಾಗಿದ್ದು, ಈ ವೇಳೆ ಕಲ್ಲಿನ ಮೇಲೆ ನಿಂತಿದ್ದವರು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ. ಕಾಲು ಜಾರಿ ಬಿದ್ದವರನ್ನು ರಕ್ಷಣೆ ಮಾಡಲು ಮುಂದಾದ ಮತ್ತಿಬ್ಬರು ನೀರಿನೊಳಗೆ ಬಿದ್ದು ಮುಳುಗಿದ್ದಾರೆ.

ಬೆಂಗಳೂರಿನಲ್ಲಿ ಡಿ ಫಾರ್ಮಸಿ ಓದುತ್ತಿದ್ದ ವಿದ್ಯಾರ್ಥಿಗಳು ಚಿಕ್ಕಬಳ್ಳಾಪುರದ ಶ್ರೀನಿವಾಸ ಸಾಗರ ಡ್ಯಾಂಗೆ ಒಂದು ದಿನದ ಹೊರ ಸಂಚಾರಕ್ಕೆ ಹೋಗಿದ್ದಾರೆ. ಮೂವರು ಹುಡುಗರು ಮತ್ತು ಮೂವರು ಹುಡುಗಿಯರು ಬೈಕ್‌ನಲ್ಲಿ ತೆರಳಿದ್ದು, ಮಧ್ಯಾಹ್ನದ ವೇಲೆ ಡ್ಯಾಮ್‌ನಲ್ಲಿ ಈಜಲು ಮುಂದಾಗಿದ್ದಾರೆ. ಈ ವೇಳೆ ಡ್ಯಾಮ್‌ನ ಒಳಗಿದ್ದ ಕಲ್ಲಿನ ಮೇಲೆ ನಿಂತುಕೊಂಡು ಒಬ್ಬರನ್ನೊಬ್ರು ಕೈ ಹಿಡಿದುಕೊಂಡು ಆಳವಿರುವ ಪ್ರದೇಶಕ್ಕೆ ಹೋಗಿದ್ದಾರೆ. ಆದರೆ, ಈ ವೇಳೆ ಒಬ್ಬರು ಕಾಲುಜಾರಿ ಬಿದ್ದಿದ್ದಾರೆ. ಅವರನ್ನು ರಕ್ಷಣೆ ಮಾಡಲು ಎಲ್ಲರೂ ಕೈ- ಕೈ ಹಿಡಿದುಕೊಂಡು ಸರಪಳಿ ರೀತಿಯಲ್ಲು ಮುಂದಾಗಿದ್ದಾರೆ. ಆದರೆ, ಈ ವೇಳೆ ಮೊದಲು ಕಾಲು ಜಾರಿ ಬಿದ್ದ ವಿದ್ಯಾರ್ಥಿನಿಯ ಜೊತೆಗೆ ಮತ್ತಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಉಳಿದಂತೆ ಇನ್ನು ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹಾಸನ ಟಿಕೆಟ್‌ ಗೊಂದಲಕ್ಕೆ ಕಣ್ಣೀರು ಹಾಕಿದ ದೊಡ್ಡಗೌಡ್ರು: ಕ್ಷೇತ್ರ ಉಳಿಸಿಕೊಳ್ಳುವುದಷ್ಟೇ ಗುರಿ ಎಂದ್ರು

ಒಂದು ವಿದ್ಯಾರ್ಥಿಯ ಶವ ಪತ್ತೆ: ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ವಿದ್ಯಾರ್ಥಿಗಳನ್ನು ಪೂಜಾ ,ಇಮ್ರಾನ್ ಮತ್ತು ರಾಧಿಕಾ ಎಂದು ಗುರುತಿಸಲಾಗಿದೆ. ಇನ್ನು ಚನ್ನಾರಾಮ್, ಸುನಿತಾ ಹಾಗೂ ಬಿಕಾಷ್ ಮೂವರು ಪ್ರಾಣಾಪಾಯದಿಂದ ಬಚಾವ್‌ ಆಗಿದ್ದಾರೆ. ಇನ್ನು ಎಲ್ಲ ವಿದ್ಯಾರ್ಥಿಗಳು ಬೆಂಗಳೂರಿನ ಕರ್ನಾಟಕ ಕಾಲೇಜಿನಲ್ಲಿ ಡಿಫಾರ್ಮ್ ವ್ಯಾಸಾಂಗ ಮಾಡುತ್ತಿರೋ ವಿದ್ಯಾರ್ಥಿಗಳು. ಇಂದು ಸ್ನೆಹಿತರು ಒಟ್ಟುಗೂಡಿ ಕೆರೆಯಲ್ಲಿ ಈಜಾಡಲು ಹೋಗಿ ಮೂವರು ಮುಳುಗಿದ್ದಾರೆ. ಪೂಜಾ ಎಂಬ ಯುವತಿಯ ಶವ ಮಾತ್ರ ಪತ್ತೆಯಾಗಿದ್ದು, ಉಳಿದಂತೆ ರಾಧಿಕಾ ಮತ್ತು ಇಮ್ರಾನ್ ಇಬ್ಬರ ಶವಕ್ಕಾಗಿ ಅಗ್ನಿಶಾಮಕ ಠಾಣೆಯಿಂದ ಶೋಧ ಕಾರ್ಯಾಚರಣೆ ಮುಂದುವರೆದಿದೆ.

ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ: ಇನ್ನು ಬೆಂಗಳೂರು ಕಾಲೇಜಿನಲ್ಲಿ ಅಭ್ಯಾಸ ಮಾಡುವ ವಿದ್ಯಾರ್ಥಿಗಳು ಕಾಲೇಜಿಗೆ ಬಂಕ್‌ ಮಾಡಿ ಒಂದು ದಿನದ ಟ್ರಿಪ್‌ಗೆ ಹೋಗಿದ್ದು, ಈ ಬಗ್ಗೆ ಪೋಷಕರ ಗಮನಕ್ಕೆ ಇರಲಿಲ್ಲ. ಆದರೆ, ಇಂದು ಇದ್ದಕ್ಕಿದ್ದಂತೆ ಮಕ್ಕಳು ಸಾವನ್ನಪ್ಪಿದ ಸುದ್ದಿಯನ್ನು ಕೇಳಿದ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಇನ್ನು ಸ್ಥಳಕ್ಕೆ ಆಗಮಿಸಿದ ಮೃತರ ಪೋಷಕರು ತಮ್ಮ ಮಕ್ಕಳ ಸಾವನ್ನು ಕಂಡು ಕಣ್ಣೀರು ಹಾಕುತ್ತಿದ್ದಾರೆ. ಇನ್ನು ಇಬ್ಬರ ಮೃತ ದೇಹ ಪತ್ತೆಗೆ ಕಾರ್ಯಾಚರಣೆ ಮುಂದುವರಿಸಲಾಗಿದೆ. ರಾತ್ರಿ ವೇಳೆಯೂ ಕೂಡ ಫ್ಲೆಡ್‌ ಲೈಟ್‌ ಬಳಸಿ ಮೃತದೇಹ ಪತ್ತೆ ಕಾರ್ಯಾಚರಣೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಬೆಂಗಳೂರಿನಲ್ಲಿ ವಿವಾಹಿತ ಮಹಿಳೆಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ: ಮನೆಯಲ್ಲಿ ವಿವಾಹಿತ ಮಹಿಳೆಯೊಬ್ಬರ ಶವ ನೇಣು ಬಿಗಿದು ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮೃತಳ ಪೋಷಕರು ಅಳಿಯನ ವಿರುದ್ಧ ಕೊಲೆ ಆರೋಪ ಮಾಡಿದ್ದಾರೆ. ಸುಬ್ರಹ್ಮಣ್ಯಪುರ ಸಮೀಪದ ಪೂರ್ಣಪ್ರಜ್ಞ ಲೇಔಟ್‌ ನಿವಾಸಿ ರಶ್ಮಿ(30) ಮೃತರು. ಶುಕ್ರವಾರ ಬೆಳಗ್ಗೆ ರೂಮ್‌ನ ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ಪತಿ ಅರವಿಂದ್‌ ಬಾಗಿಲು ಒಡೆದು ನೋಡಿದಾಗ ರಶ್ಮಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಮೃತಳ ಪೋಷಕರು ಅಳಿಯ ಅರವಿಂದ್‌ ವಿರುದ್ಧ ಕೊಲೆ ಆರೋಪದಡಿ ದೂರು ನೀಡಿದ್ದಾರೆ. 

ಬೆಂಗಳೂರಿನಲ್ಲಿ ವಿವಾಹಿತ ಮಹಿಳೆಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ: ಅಳಿಯನ ವಿರುದ್ಧ ಕೊಲೆ ಆರೋಪ

ಸುಬ್ರಹ್ಮಣ್ಯಪುರ ಠಾಣೆಯಲ್ಲಿ ಪ್ರಕರಣ: ಗುರುವಾರ ರಾತ್ರಿ 8.30ರ ಸುಮಾರಿಗೆ ಅರವಿಂದ್‌ ಹಾಗೂ ರಶ್ಮಿ ಜಗಳವಾಡಿದ್ದರು. ಬಳಿಕ ರಶ್ಮಿ ರೂಮ್‌ಗೆ ತೆರಳಿ ಬಾಗಿಲು ಹಾಕಿಕೊಂಡಿದ್ದಳು. ಶುಕ್ರವಾರ ಬೆಳಗ್ಗೆ ಎಷ್ಟು ಹೊತ್ತಾದರೂ ರೂಮ್‌ ಬಾಗಿಲು ತೆರೆದಿಲ್ಲ. ಹಲವು ಬಾರಿ ಬಾಗಿಲು ಬಡಿದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆಗ ಬಾಗಿಲು ಒಡೆದು ನೋಡಿದಾಗ ರಶ್ಮಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಸುಬ್ರಹ್ಮಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Latest Videos
Follow Us:
Download App:
  • android
  • ios