ಶೃಂಗೇರಿ ಬಳಿಯ ತುಂಗಾ ನದಿಯಲ್ಲಿ ಮುಳುಗಿ ಇಬ್ಬರು ಕಾಲೇಜು ವಿದ್ಯಾರ್ಥಿಗಳ ಸಾವು
ಶೃಂಗೇರಿ ಬಳಿಯ ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಚಿಕ್ಕಮಗಳೂರು (ಮೇ 19): ಕಾಲೇಜಿನಿಂದ ಒಂದು ದಿನದ ಪ್ರವಾಸಕ್ಕೆ ಹೋಗಿದ್ದ ವಿದ್ಯಾರ್ಥಿಗಳ ಗುಂಪು ತುಂಗಾ ನದಿಯಲ್ಲಿ ಈಜಲು ಹೋಗಿದ್ದಾರೆ. ಈ ವೇಳೆ ಒಬ್ಬ ಮುಳುಗುವುದನ್ನು ರಕ್ಷಣೆ ಮಾಡಲು ಹೋಗಿದ್ದವನು ಸೇರಿ ಒಟ್ಟು ಇಬ್ಬರು ವಿದ್ಯಾರ್ಥಿಗಳು ನದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಮೃತ ವಿದ್ಯಾರ್ಥಿಗಳನ್ನು ಹರಿಹರಪುರದ ರಕ್ಷಿತ್ (20) ಹಾಗೂ ಶೃಂಗೇರಿ ಸುಂಕದ ಮಕ್ಕಿಯ ಪ್ರಜ್ವಲ್ (21) ಎಂದು ಗುರುತಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಬಳಿಯ ನೆಮ್ಮಾರು ಸಮೀಪದ ತುಂಗಾ ನದಿಯಲ್ಲಿ ಇಂದು ಬೆಳಗ್ಗೆ ದುರ್ಘಟನೆ ನಡೆದಿದೆ. ಕಾಲೇಜಿನ ವಿದ್ಯಾರ್ಥಿಗಳು ಸೇರಿಕೊಂಡು ಒಂದು ದಿನದ ಹೊರ ಸಂಚಾರಕ್ಕೆ ಹೋಗಿದ್ದಾರೆ. ಈ ವೇಳೆ ನದಿ ನೀರಿನಲ್ಲಿ ವಿದ್ಯಾರ್ಥಿಗಳೊಂದಿಗೆ ಈಜಲು ತೆರಳಿದ್ದ ರಕ್ಷಿತ್ ಹಾಗೂ ಪ್ರಜ್ವಲ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
Bengaluru- ಆಂಟಿಯೊಂದಿಗೆ ಲವ್ವಿ-ಡವ್ವಿ: ಮುಸ್ಲಿಂ ಪ್ರಿಯಕರನ ಸರಸಕ್ಕೆ ಗಂಡನ ಹತ್ಯೆ
ರಕ್ಷಿತ್ ರಕ್ಷಣೆಗೆಂದು ಹೋದವ ಸಾವು: ಇನ್ನು ಮೃತ ವಿದ್ಯಾರ್ಥಿಗಳನ್ನು ಶೃಂಗೇರಿ ಪಟ್ಟಣದ ಖಾಸಗಿ ಕಾಲೇಜಿನ ವಿಧ್ಯಾರ್ಥಿಗಳು ಆಗಿದ್ದಾರೆ. ನದಿಯಲ್ಲಿ ಈಜಾಡುತ್ತಿದ್ದಾಗ ರಕ್ಷಿತ್ ಸಿಲುಕಿಕೊಂಡು ಮುಳುಗಿತ್ತಿದ್ದನು. ಈ ವೇಳೆ ರಕ್ಷಿತ್‌ನ ರಕ್ಷಣೆಗೆಂದು ಪ್ರಜ್ವಲ್ ತೆರಳಿದ್ದಾನೆ. ಇದನ್ನು ನೋಡಿದ ವಿದ್ಯಾರ್ಥಿಗಳು ಕೂಡಲೇ ಸ್ಥಳೀಯರನ್ನು ಕೂಗಿದ್ದಾರೆ. ಸುತ್ತಲೂ ನುರಿತ ಈಜುಗಾರರು ಯಾರೂ ಇಲ್ಲದ ಹಿನ್ನೆಲೆಯಲ್ಲಿ ನದಿಯಲ್ಲಿ ಕೊಚ್ಚಿಕೊಂಡು ಹೋಗಿ ಮುಳುಗಿದ್ದಾರೆ. ಇನ್ನು ಘಟನೆಯ ಕುರಿತಂತೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಘಟನೆ ಕುರಿತು ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಇಬ್ಬರು ಬಾಲಕ ಸಾವು: ಗದಗ ಜಿಲ್ಲೆಯ ರೋಣ ಅಬ್ಬಿಗೇರಿ ಬೈಕ್ ಸವಾರಿ ಮಾಡುತ್ತಿದ್ದ ಅಪ್ರಾಪ್ತ ವಯಸ್ಸಿನ ಇಬ್ಬರು ಬಾಲಕರು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಅಬ್ಬಿಗೇರಿಯ ಪುರಸಭೆ ಕಸ ವಿಲೇವಾರಿ ಘಟಕ ಸಮೀಪದಲ್ಲಿ ಘಟನೆ ನಡೆದಿದೆ. ಅಬ್ಬಿಗೇರಿಯಿಂದ ರೋಣ ಪಟ್ಟಣಕ್ಕೆ ಒಂದೇ ಬೈಕ್ ನಲ್ಲಿ ಮೂವರು ಬಾಲಕರು ಬರುತ್ತಿದ್ದ ವೇಳೆ ಅಪಘಾಯ ಸಂಭವಿಸಿದೆ. ಬೈಕ್ ಚಾಲನೆ ಮಾಡುತ್ತಿದ್ದ ಬಾಲಕರು ವೇಗವಾಗಿ ಓಡಿಸುತ್ತಿದ್ದು, ನಿಯಂತ್ರಣ ಸಿಗದೇ ಮರಕ್ಕೆ ಡಿಕ್ಕಿ ಹೊಡೆದಿದ್ದಾರೆ. ಈ ವೇಳೆ ತೀವ್ರ ರಕ್ತಸ್ರಾವ ಉಂಟಾಗಿ ಬಹು ಅಂಗಾಂಗಕ್ಕೆ ತೀವ್ರ ಪೆಟ್ಟುಬಿದ್ದ ಹಿನ್ನೆಲೆಯಲ್ಲಿ ಇಬ್ಬರು ಬಾಲಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಕ್ರೂಸರ್: ಯಲ್ಲಮ್ಮನ ದರ್ಶನಕ್ಕೆ ಹೋದವರು ಮಸಣ ಸೇರಿದರು
ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ: ಸ್ಥಳದಲ್ಲೇ ಇಬ್ಬರು ಬಾಲಕರಾದ ಅನುಪ ಇಟಗಿ (16), ಶ್ರೀಧರ ಗಡಗಿ (15) ಸಾವನ್ನಪ್ಪಿದ್ದಾರೆ. ಇನ್ನೋರ್ವ ಬಾಲಕ ಮನೋಜ ಕಮ್ಮಾರಗೆ ಗಂಭೀರ ಗಾಯವಾಗಿದ್ದು, ಈತನನ್ನು ರೋಣ ಪಟ್ಟಣದ ಭಾರತರತ್ನ ಡಾ.ಭೀಮಸೇನ ಜೋಶಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಘಟನೆಯ ಕುರಿತು ಬಾಲಕನನ್ನು ಆಸ್ಪತ್ರೆಗೆ ದಾಖಲು ಮಾಡಿದ ನಂತರ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಸ್ಥಳಕ್ಕೆ ಬಂದ ರೋಣ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ಮಾಡಿದ್ದಾರೆ. ನಂತರ ಬಾಲಕರ ಮೃತ ದೇಹಗಳನ್ನು ಸರ್ಕಾರಿ ತಾಲೂಕು ಆಸ್ಪತ್ರೆಗೆ ರವಾನಿಸಿದ್ದಾರೆ. ಇನ್ನು ಬಾಲಕರ ಸಾವಿನಿಂದಾಗಿ ಅವರ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿತ್ತು.