Asianet Suvarna News Asianet Suvarna News

Hamsalekha: ಕ್ಷಮೆ ಕೇಳಿದ್ದರೂ ಹಂಸಲೇಖ ವಿರುದ್ಧ ದಾಖಲಾಯ್ತು ದೂರು

* ಪೇಜಾವರ ಸ್ವಾಮೀಜಿ ಕುರಿತಾಗಿ ಹೇಳಿಕೆ
* ಸಂಗೀತ ನಿರ್ದೇಶಕ ಹಂಸಲೇಖ ವಿರುದ್ಧ ದೂರು
* ಹನುಮಂತ ನಗರ ಠಾಣೆಗೆ ದೂರು ನೀಡಿದ ಭಕ್ತವೃಂದ

Complaint against hamsalekha over controversial-statement-about-pejawar-sri mah
Author
Bengaluru, First Published Nov 17, 2021, 12:05 AM IST
  • Facebook
  • Twitter
  • Whatsapp

ಬೆಂಗಳೂರು, (ನ.16)  ಸಂಗೀತ ನಿರ್ದೇಶಕ ಹಂಸಲೇಖ (Hamsalekha) ವಿರುದ್ಧ  ಪೇಜಾವರ (udupi pejawar) ಶ್ರೀಗಳ ಭಕ್ತಗಣ ದೂರು ನೀಡಿದೆ. ಹಂಸಲೇಖ ಮಾತನಾಡುವಾಗ ಶ್ರೀಗಳ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಎಲ್ಲೆಡೆ ಸಾಕಷ್ಟು ವಿರೋಧಕ್ಕೆ ಗ್ರಾಸವಾಗಿದೆ.

ಬೆಂಗಳೂರಿನ (Bengaluru) ಹನುಮಂತನಗರ ಪೊಲೀಸ್ ಠಾಣೆಗೆ ಆಗಮಿಸಿ ಶ್ರೀಗಳ ಭಕ್ತವೃಂದ ದೂರು ನೀಡಿದೆ. ಕೃಷ್ಣರಾಜ ಎಂಬುವವರಿಂದ ಹನುಮಂತನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಕೆಯಾಗಿದೆ. 

ಹಂಸಲೇಖ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ಬಿಳಿಗಿರಿ ರಂಗನಾಥ ಸ್ವಾಮಿಯ ಪವಾಡದ ಬಗ್ಗೆಯೂ ಮಾತನಾಡಿ ಅವಹೇಳನ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಖ್ಯಾತ ಸಂಗೀತ ನಿರ್ದೇಶಕ, ಸಿನಿಮಾ ಸಾಹಿತಿ ನಾದ ಬ್ರಹ್ಮ ಹಂಸಲೇಖ (Hamsalekha) ಅವರು ಪೇಜಾವರ ಶ್ರೀಗಳ ಕುರಿತು ಆಡಿದ ಮಾತುಗಳಿಗೆ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು.

ಹಂಸಲೇಖ ಪತ್ನಿಗೆ ಅಭಿನಂದನೆ ಹೇಳಿದ ಸುರೇಶ್ ಕುಮಾರ್

ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧದ ಚರ್ಚೆಗೆ ಗ್ರಾಸವಾಗಿಗತ್ತು. ನೆಟ್ಟಿಗರು ಹಂಸಲೇಖ ಮಾತುಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅವರು ವಿಡಿಯೋ ಮುಖಾಂತರ ಕ್ಷಮೆ ಕೇಳಿದ್ದರು.

ಸಾರ್ವಜನಿಕ ಕಾರ್ಯಕ್ರಮ ಒಂದರಲ್ಲಿ ನಾದಬ್ರಹ್ಮ ಹಂಸಲೇಖ ಪೇಜಾವರ ಶ್ರೀಗಳ  (pejavara sri)ವಿರುದ್ಧ ಹೇಳಿಕೆ ನೀಡಿದ್ದರು. ಮೇಲುಜಾತಿ ಹಾಗೂ ಕೀಳುಜಾತಿ, ಜಾತಿತಾರತಮ್ಯ, ಜಾತಿ ಪಿಡುಗು ವಿಚಾರವಾಗಿ ಮಾತನಾಡುತ್ತಾ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಬಳಿಕ ಅಂಬೇಡ್ಕರ್ ವಿಚಾರವನ್ನು ಕೂಡ ಉಲ್ಲೇಖಿಸಿದ್ದರು. ಇಲ್ಲಿ ಪೇಜಾವರ ಶ್ರೀಗಳ ಬಗ್ಗೆ ಹಂಸಲೇಖ ಮಾತನಾಡಿರುವುದು ಸಾಮಾಜಿಕ ಜಾಲತಾಣದಲ್ಲಿ ವಿವಾದ ಹುಟ್ಟುಹಾಕಿತ್ತು. 

ವಿಡಿಯೋ ಮೂಲಕ ಕ್ಷಮೆ
ಫೇಸ್‌ ವಿಡಿಯೋ ಮೂಲಕ ಕ್ಷಮೆಯಾಚಿಸಿರುವ ಹಂಸಲೇಖ ಅವರು, ನನಗೆ ಗೊತ್ತಿದೆ. ಎಲ್ಲಾ ಮಾತುಗಳಿಗೂ ಅದು ವೇದಿಕೆಯಲ್ಲ, ತಪ್ಪು. ಆ ವೇದಿಕೆಯಲ್ಲಿ ನುಡಿದರೆ ಮುತ್ತಿನಹಾರದಂತಿರಬೇಕು ಎಂದು ಇರಬೇಕಿತ್ತು. ಆದರೆ, ತಪ್ಪಾಗಿದೆ. ಅಸ್ಪ್ರಶ್ಯತೆ ಎಂಬುದು ನಮ್ಮ ದೇಶಕ್ಕೆ ಅಂಟಿದ ಶಾಪ. ಈ ಅನಿಷ್ಠವನ್ನು ತೊಡೆದು ಹಾಕುವುದಕ್ಕೆ ಪೇಜಾವರರಂಥ ಗುರುಹಿರಿಯರು ಅಪಾರ ಪ್ರಯತ್ನ ನಡೆಸುತ್ತಿದ್ದಾರೆ. ಅದರ ಬಗ್ಗೆ ನನಗೆ ಆ ಬಗ್ಗೆ ಅಪಾರ ಗೌರವವಿದೆ ಎಂದು ವಿವಾದಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದರು.

ಹಂಸಲೇಖ ಹೇಳಿದ್ದೇನು?
ಪೇಜಾವರ ಸ್ವಾಮಿಗಳು ದಲಿತರ ಮನೆಗೆ ವಾಸ್ತವ್ಯಕ್ಕೆ ಹೋಗಿದ್ದಾರೆ ಅಂತ ಸ್ಟೇಟ್‌ಮೆಂಟ್ ಬಂದಿದೆ. ಪೇಜಾವರ ಸ್ವಾಮಿಗಳು ದಲಿತರ ಮನೆಗೆ ಹೋಗಿ ಅಲ್ಲಿ ಕುಳಿತು ಕೊಳ್ಳಬಹುದಷ್ಟೇ, ಅವರು ಕೋಳಿ ಕೊಟ್ಟರೆ ತಿನ್ನೋಕೆ ಆಗುತ್ತದೆಯೇ..? ಕೋಳಿ ಬೇಡ, ಕುರಿ ರಕ್ತದ ಫ್ರೈ ಮಾಡಿಕೊಟ್ಟರೆ ತಿಂತಾರಾ..? ಲಿವರ್ ಫ್ರೈ ತಿಂತಾರಾ, ಆಗತ್ತಾ..? ಅಂದರೆ, ದಲಿತರ ಮನೆಗೆ ಬಲಿತರು ಹೋಗೋದು ಏನ್ ದೊಡ್ಡ ವಿಷ್ಯಾ ಅಂತ ನಂಗ್ ಅನ್ನಿಸ್ತು ಕುಮಾರಸ್ವಾಮಿ ಅವರು ಗ್ರಾಮ ವಾಸ್ತವ್ಯ ಅಂತ ಶುರು ಮಾಡಿದ್ರು. ಈಗ ಎಲ್ಲರೂ ಗ್ರಾಮ ವಾಸ್ತವ್ಯ ಶುರು ಮಾಡಿದ್ದಾರೆ..'  ಹೀಗೆ ಮಾತನಾಡುತ್ತ ಸಾಗಿದ್ದರು.

ಬಿಳಿಗಿರಿ ರಂಗಯ್ಯ ಸೋಲಿಗರ ಮನೆಯ ಹೆಣ್ಣಿನೊಂದಿಗೆ ರಮಿಸಿದರೆ, ಅದರಲ್ಲಿ ಏನ್ ದೊಡ್ಡ ವಿಷ್ಯ ಇದೆ? ಅದೇ ಸೋಲಿಗರ ಹೆಣ್ಣು ಮಗಳನ್ನು ಕರೆದುಕೊಂಡು ಹೋಗಿ ತನ್ನ ದೇವಾಲಯದಲ್ಲಿ ಇಟ್ಟು ಗೌರವಿಸಿದ್ದರೆ, ಅದು ಬಿಳಿಗಿರಿ ರಂಗಯ್ಯನ ತಾಕತ್ತು. ಸೂರ್ಯ ಉದಯಿಸುವುದಕ್ಕಿಂತ ಮುಂಚೆ ಸೋಲಿಗರ ಮನೆಗೆ ಬಂದು ಆ ಹೆಣ್ಣು ಮಗಳೊಂದಿಗೆ ಬಿಳಿಗಿರಿ ರಂಗಯ್ಯ ಸಂಸಾರ ನಡೆಸಿ ಬೆಳಕು ಹರಿಯುವುದರೊಳಗೆ ಹೋಗಿ ಕಲ್ಲಾಗುತ್ತಾನಂತೆ! ಅದೇನು ದೊಡ್ಡ ವಿಷಯ, ಅದೊಂದು ನಾಟಕ, ಬೂಟಾಟಿಕೆ ಎಂದು ಹೇಳಿದ್ದು ವಿವಾದದ ಬೆಂಕಿ ಹೊತ್ತಿಸಿತ್ತು. 

 

 

 

Follow Us:
Download App:
  • android
  • ios