ಕಳೆದ ಫೆ.18 ರಂದು ದೇವದುರ್ಗದ ಮಹಿಳೆಯೊಬ್ಬರು ರಾಯಚೂರು ನಗರ ವಿಭಾಗಕ್ಕೆ ಸೇರಿದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್‌ನಲ್ಲಿ ರಾಯಚೂರಿನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಸಮಯದಲ್ಲಿ ತಡ ರಾತ್ರಿ ಬಸ್ ಒಳಗಿನ ಲೈಟ್ ಆಫ್ ಆದಾಗ ರಾಯಚೂರು ನಗರ ಘಟಕದ ಕಂಡಕ್ಟರ್ ಲಕ್ಷ್ಮಿಕಾಂತ್ ರೆಡ್ಡಿ ಎನ್ನುವವರು ಖಾಸಗಿ ಅಂಗಾಂಗಗಳನ್ನು ಮುಟ್ಟಿ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. 

ರಾಯಚೂರು(ಮಾ.13): ಸಾರಿಗೆ ಬಸ್‌ನಲ್ಲಿ ತಡರಾತ್ರಿ ಪ್ರಯಾಣಿಸುತ್ತಿದ್ದ ಮಹಿಳೆಗೆ ನಿರ್ವಾಹಕರೊಬ್ಬರು ಲೈಂಗಿಕ ಕಿರುಕುಳ ನೀಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಬಸ್‌ ಕಡೆಕ್ಟರ್‌ ವಿರುದ್ಧ ಸಂತ್ರಸ್ತ ಮಹಿಳೆ ಇಲಾಖೆ ಮೇಲಾಧಿಕಾರಿಗೆ ದೂರು ಸಲ್ಲಿಸಿದ್ದಾಳೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕಳೆದ ಫೆ.18 ರಂದು ದೇವದುರ್ಗದ ಮಹಿಳೆಯೊಬ್ಬರು ರಾಯಚೂರು ನಗರ ವಿಭಾಗಕ್ಕೆ ಸೇರಿದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್‌ನಲ್ಲಿ ರಾಯಚೂರಿನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಸಮಯದಲ್ಲಿ ತಡ ರಾತ್ರಿ ಬಸ್ ಒಳಗಿನ ಲೈಟ್ ಆಫ್ ಆದಾಗ ರಾಯಚೂರು ನಗರ ಘಟಕದ ಕಂಡಕ್ಟರ್ ಲಕ್ಷ್ಮಿಕಾಂತ್ ರೆಡ್ಡಿ ಎನ್ನುವವರು ಖಾಸಗಿ ಅಂಗಾಂಗಗಳನ್ನು ಮುಟ್ಟಿ ಕಿರುಕುಳ ನೀಡಿದ್ದಾನೆ.

ತುಮಕೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ, ಬಾಲಮಂಜುನಾಥ್ ಸ್ವಾಮೀಜಿ ಅರೆಸ್ಟ್‌

ಬಸ್‌ ಚಾಲಕನ ಸೀಟ್ ಹಿಂಬದಿಯಲ್ಲಿ ಕುಳಿತಿದ್ದ ಮಹಿಳೆಗೆ ಚಾಲಕ ಮಲಗಲು ಇರುವ ಸೀಟ್ ನಲ್ಲಿ ಮಲಗಿದ್ದ ಆರೋಪಿ ಕಂಡಕ್ಟರ್ ಶಕ್ತಿ ಯೋಜನೆಯಡಿ ಆ ಮಹಿಳೆಗೆ ನೀಡಿದ ಉಚಿತ ಟಿಕೆಟ್ ಹರಿದು ತನ್ನ ಜೇಬಿನಲ್ಲಿರಿಸಿಕೊಂಡು ಟಿಕೆಟ್ ಬೇಕಾದರೆ ಸಹಕರಿಸು ಇಲ್ಲದಿದ್ದರೆ ದಂಡ ಬೀಳುತ್ತೆ ಎಂದು ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತ ಮಹಿಳೆ ದೂರಿನಲ್ಲಿ ವಿವರಿಸಿದ್ದಾರೆ. ದೂರನ್ನು ಗಂಭೀರವಾಗಿ ಪರಿಗಣಿಸಿರುವ ಸಾರಿಗೆ ಸಂಸ್ಥೆಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.