ಬೆಂಗಳೂರು(ಅ. 26)  ಇನ್ಫೋಸಿಸ್ ಪ್ರತಿಷ್ಠಾನ ಅಧ್ಯಕ್ಷೆ ಸುಧಾ ಮೂರ್ತಿ ಬಗ್ಗೆ ಅವಹೇಳನ ಮಾಡಲಾಗಿದೆ ಎಂದು  ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಜಯರಾಜ್ ನಾಯ್ಡು ದೂರು ನೀಡಿದ್ದಾರೆ ವೆಬ್ ಸೀರಿಸ್ ನಲ್ಲಿ ಬರುವ ಸನ್ನಿವೇಶದಲ್ಲಿ ಅವಹೇಳನ ಮಾಡಲಾಗಿದೆ. ಹೆಸರು ಬದಲಿಸಿ ಅವಹೇಳನ ಮಾಡಲಾಗಿದ್ದು ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ತರಕಾರಿ ಬೇರೆ  ಮಾಡುವ ಸರಳ ಮೂರ್ತಿ

ಓಲ್ಡ್ ಟೌನ್ ಕ್ರಿಮಿನಲ್ಸ್ ವೆಬ್ ಸೀರಿಸ್ ನಿರ್ದೇಶಕ ಅಮರ್ ಹಾಗೂ ನಿರ್ಮಾಪಕರ ಮೇಲೆ ದೂರು ನೀಡಿದ್ದಾರೆ. ವೆಬ್ ಸೀರೀಸ್​ನಲ್ಲಿ ಬರುವ ಸನ್ನಿವೇಶದಲ್ಲಿ ಸುಧಾಮೂರ್ತಿ ಅಮ್ಮನವರ ಹೆಸರಬದಲಿಸಿ, ಏಕವಚನದಲ್ಲಿ ಕರೆದಿದ್ದು ನೋವಾಗಿದೆ. ಇಂಥವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯ ಮಾಡಿದ್ದಾರೆ.