ನಾಡ ಕಚೇರಿ ಉಪ ತಹಶೀಲ್ದಾರ್ ಕಿರುಕುಳಕ್ಕೆ ವಿಷ ಸೇವಿಸಿ ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ!

ನಾಡ ಕಚೇರಿಯ ಉಪ ತಹಶೀಲ್ದಾರರಿಂದ ಮಾನಸಿಕ ಕಿರುಕುಳಕ್ಕೆ ಬೇಸತ್ತು ಕಂಪ್ಯೂಟರ್ ಆಪರೇಟರ್ ಆಗಿದ್ದ ಅಂಗವಿಕಲ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದ ನಾಡಕಚೇರಿಯಲ್ಲಿ ನಡೆದಿದೆ.

Computer operator commits suicide by Harassment by sub-tahsildar in hullahalli at nanjanagudu rav

ನಂಜನಗೂಡು (ಜ.8): ನಾಡ ಕಚೇರಿಯ ಉಪ ತಹಶೀಲ್ದಾರರಿಂದ ಮಾನಸಿಕ ಕಿರುಕುಳಕ್ಕೆ ಬೇಸತ್ತು ಕಂಪ್ಯೂಟರ್ ಆಪರೇಟರ್ ಆಗಿದ್ದ ಅಂಗವಿಕಲ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದ ನಾಡಕಚೇರಿಯಲ್ಲಿ ನಡೆದಿದೆ.

ಹರತಲೆ ಗ್ರಾಮದ ಹೆಚ್.ಎಸ್.ಪರಮೇಶ್(36) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಭಾನುವಾರ ನಾಡಕಚೇರಿಯಲ್ಲೇ ಡೆತ್ ನೋಟು ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಲ್ಲೇ ಇದ್ದ ಸ್ಥಳೀಯರು ಹುಲ್ಲಹಳ್ಳಿ ಗ್ರಾಮದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆಆರ್ ಆಸ್ಪತ್ರೆಗೆ ರವಾನೆ ಮಾಡುತ್ತಿದ್ದ ವೇಳೆ ಮಾರ್ಗ ಮಧ್ಯ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. 

ಯಶ್ ಬರ್ತ್‌ಡೇಗೆ ಕಟೌಟ್ ನಿಲ್ಲಿಸಲು ಹೋಗಿ ಭಾರೀ ಅನಾಹುತ; ವಿದ್ಯುತ್ ತಗುಲಿ ಮೂವರು ಅಭಿಮಾನಿಗಳು ಸ್ಥಳದಲ್ಲೇ ಸಾವು!

ಉಪ ತಹಸೀಲ್ದಾರ್ ಕಿರುಕುಳ:

ಪರಮೇಶ್ ಅಂಗವಿಕಲನಾಗಿದ್ದು, ಹುಲ್ಲಹಳ್ಳಿ ನಾಡಕಚೇರಿಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದರು. ಆದರೆ ಅದೇ ನಾಡಕಚೇರಿಯಲ್ಲಿ ಉಪತಹಸೀಲ್ದಾರ್ ಆಗಿರುವ ಎನ್‌ಪಿ ಶಿವಕುಮಾರ ಅವರು ದಿನನಿತ್ಯ ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ಡೆತ್ ನೋಟ್‌ನಲ್ಲಿ ಬರೆದಿರುವ ಮೃತ ವ್ಯಕ್ತಿ.

ನನಗೆ ಕಳೆದ ಏಪ್ರಿಲ್ ತಿಂಗಳಿನಿಂದ ಸಂಬಳ ಆಗದೆ ಇರುವುದು ಅತ್ಯಂತ ಬೇಸರವಾಗಿ ಜೀವನ ನಡೆಸುವುದು ಒಂದು ಸಮಸ್ಯೆಯಾಗಿದೆ. ಉಪತಹಸೀಲ್ದಾರ್ ಅವರು ನನಗೆ ಮಾನಸಿಕ ಹಿಂಸೆ ಹಾಗೂ ಕೆಲವು ಅವರ ವೈಯಕ್ತಿಕ ದ್ವೇಷದಿಂದ ಮನನೊಂದು ನಾನು ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆ. ನಾನು ಒಬ್ಬ ಅಂಗವಿಕಲ ಎಂದು ಗೊತ್ತಿದ್ದರೂ ಅವರು ನನ್ನ ಮೇಲೆ ದ್ವೇಷ ಸಾಧಿಸುತ್ತಾ ನನಗೆ ಮಾನಸಿಕ ಹಿಂಸೆ ಕೊಟ್ಟು, ನನ್ನನ್ನು ಆತ್ಮಹತ್ಯೆಗೆ ಶರಣಾಗುವಂತೆ ಮಾಡಿದ್ದಾರೆ. ನನ್ನ ಸಾವಿಗೆ ಹುಲ್ಲಹಳ್ಳಿ ನಾಡಕಚೇರಿಯ ಉಪ ತಹಶೀಲ್ದಾರ್ ಎನ್.ಪಿ ಶಿವಕುಮಾರ್ ಅವರೇ ನೇರ ಕಾರಣವಾಗಿದ್ದಾರೆ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಮೃತ ವ್ಯಕ್ತಿ. ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಘಟನೆ. 

 

21ನೇ ಮಹಡಿಯಿಂದ ಜಿಗಿದು ಧಾರವಾಡದ ಟೆಕ್ಕಿ ಸಾವಿಗೆ ಶರಣು! ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ರೂ ಜುಗುಪ್ಸೆ?

Latest Videos
Follow Us:
Download App:
  • android
  • ios