ಮರಳು ದಂಧೆಕೋರ, ಕಾಂಗ್ರೆಸ್ ಮುಖಂಡ ಶರಣಗೌಡ ಪಾಟೀಲ್ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಶಶಿಧರ್ ಹಟ್ಟಿ. ರೋಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ 

ಗದಗ(ಫೆ.13): ಡೆತ್ ನೋಟ್ ಬರೆದಿಟ್ಟು ಕಾಂಗ್ರೆಸ್ ಮುಖಂಡ, ವೈದ್ಯ ಶಶಿಧರ್ ಹಟ್ಟಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಹಿರೇಹಾಳ ಗ್ರಾಮದಲ್ಲಿ ನಿನ್ನೆ(ಸೋಮವಾರ) ರಾತ್ರಿ ನಡೆದಿದೆ. ಶಶಿಧರ್ ಹಟ್ಟಿ ಲುಂಗಿಯಿಂದ ನೇಣು ಬಿಗಿದುಕೊಂಡು ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮರಳು ದಂಧೆಕೋರ, ಕಾಂಗ್ರೆಸ್ ಮುಖಂಡ ಶರಣಗೌಡ ಪಾಟೀಲ್ ಹೆಸರು ಬರೆದಿಟ್ಟು ಶಶಿಧರ್ ಹಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮರಳು ದಂಧೆಯಲ್ಲಿ ಮೂವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಎಲ್ಲಾ ಲೆಕ್ಕಕೊಟ್ರು ಪದೇ ಪದೇ ಶರಣಗೌಡ ಅವರಿಗೆ ಕಿರುಕುಳ ನೀಡುತ್ತಿದ್ದರು. ಹೀಗಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಬೆಂಗಳೂರು: ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ, ವರದಕ್ಷಿಣೆ ಕಿರುಕುಳ?

ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ್ರಿಗೆ ಹೇಳಿ ಶರಣಗೌಡಗೆ ಕಠಿಣ ಶಿಕ್ಷೆ ಕೊಡಿಸಿ ಅಂತ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಘಟನಾ ಸ್ಥಳಕ್ಕೆ ರೋಣ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ರೋಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.