ಧಾರವಾಡ, (ಡಿ.28): ಬಿಜೆಪಿ ನಾಯಕ ಯೋಗೀಶಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಹಾಗೂ ವಿನಯ ಸೋದರ ಮಾವ ಚಂದ್ರಶೇಖರ ಇಂಡಿ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಇಲ್ಲಿಯ ಸಿಬಿಐನ ವಿಶೇಷ ನ್ಯಾಯಾಲಯವು ಜ. 8ರವರೆಗೆ ವಿಸ್ತರಣೆ ಮಾಡಿ ಆದೇಶಿಸಿದೆ.

ವಿನಯ ಕುಲಕರ್ಣಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಹಾಗೂ ಚಂದ್ರಶೇಖರ ಇಂಡಿ ಧಾರವಾಡದ ಕೇಂದ್ರ ಕಾರಾಗೃಹದಲ್ಲಿ ಇಷ್ಟು ದಿನಗಳ ನ್ಯಾಯಾಂಗ ಬಂಧನದಲ್ಲಿದ್ದರು.

ಕೊಲೆ ಕೇಸ್: ಮಾಜಿ ಸಚಿವ, ಕಾಂಗ್ರೆಸ್‌ ನಾಯಕನಿಗೆ ಸದ್ಯಕ್ಕಿಲ್ಲ ರಿಲೀಫ್

ಡಿ. 28ಕ್ಕೆ ಅವರ ಬಂಧನದ ಅವಧಿ ಅಂತ್ಯಗೊಂಡಿತ್ತು. ಹೀಗಾಗಿ ಮತ್ತೆ ಸೋಮವಾರ ವಿಚಾರಣೆ ನಡೆಸಿದ ನ್ಯಾಯಾಲಯ ಜ. 8ರವರೆಗೆ ಇಬ್ಬರಿಗೂ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶಿಸಿತು. ಈ ಮಧ್ಯೆ ವಿನಯ ಪರ ವಕೀಲರು ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದು, ಜ. 6ರಂದು ಅರ್ಜಿ ವಿಚಾರಣೆ ನಡೆಯಲಿದೆ.