ಹುಬ್ಬಳ್ಳಿ, (ನ.22): ಬೇರೆ ಅಭ್ಯರ್ಥಿಯ ಹೆಸರಲ್ಲಿ ಪರೀಕ್ಷೆ ಬರೆಯುತ್ತಿದ್ದ ಪೊಲೀಸ್ ಕಾನ್ಸ್‌ಟೇಬಲ್ ಸಿಕ್ಕಿಬಿದ್ದಿರುವ ಘಟನೆ ಹುಬ್ಬಳ್ಳಿಯ ಗೋಕುಲ ರಸ್ತೆಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ.

 ರಾಯಭಾಗ ಮೂಲದ ಮಣಿಕಂಠ ಸಿಕ್ಕಿಬಿದ್ದಿರುವ ಪೊಲೀಸ್‌ ಕಾನ್ಸ್‌ಟೇಬಲ್. ಈತ ಹುಬ್ಬಳ್ಳಿ- ಧಾರವಾಡದಲ್ಲಿ ಪೊಲೀಸ್ ಕಾನ್ಸ್‌ಟೇಬಲ್‌ಗಳ ಭರ್ತಿಗೆ ನಡೆಯುತ್ತಿದ್ದ ಲಿಖಿತ ಪರೀಕ್ಷೆ. ಬೇರೊಬ್ಬನ ಹೆಸರಲ್ಲಿ ಪರೀಕ್ಷೆಗೆ ಹಾಜರಾಗಿದ್ದ.

ಟಿಇಟಿ: ಎರಡು ಲಕ್ಷ ಅಭ್ಯರ್ಥಿಗಳಲ್ಲಿ 8000 ಪಾಸ್‌..!

ಡಿಸಿಪಿ ಕೆ.ರಾಮರಾಜನ್ ಅವರಿಗೆ ಈ ಕುರಿತು ಮಾಹಿತಿ ಸಿಕ್ಕಿತ್ತು. ಡಿಸಿಪಿ ಮಾರ್ಗದರ್ಶನದಲ್ಲಿ ಗೋಕುಲ ರಸ್ತೆ ಠಾಣೆ ಪೊಲೀಸರ ಪರಿಶೀಲನೆ ವೇಳೆ ಬೇರೊಬ್ಬ ಅಭ್ಯರ್ಥಿಯ ಪರವಾಗಿ ಪರೀಕ್ಷೆ ಬರೆಯುತ್ತಿದ್ದ ಕಾನ್ಸ್‌ಟೇಬಲ್ ಮಣಿಕಂಠ ಸಿಕ್ಕಿಬಿದ್ದಿದ್ದಾನೆ.