8ನೇ ತರಗತಿ ವಿದ್ಯಾರ್ಥಿನಿಗೆ ಶಿಕ್ಷಕನೇ ಲೈಂಗಿಕ ಕಿರುಕುಳ ನೀಡಿದ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ನಡೆದಿದೆ ಆರೋಪಿ ಶಿಕ್ಷಕನನ್ನು ವಶಕ್ಕೆ ಪಡೆದಿರುವ ಪೊಲೀಸರುಉ ಪೊಕ್ಸೋ ಕಾಯ್ದೆಯಡಿ ಕೇಸ್ ದಾಖಲಿಸಿ ವಿಚಾರಣೆ ನಡೆಸಲಾಗುತ್ತಿದೆ.

ಕೋಲಾರ (ಆ.6): ಶಿಕ್ಷಕರನ್ನು ಪೂಜ್ಯರಂತೆ ಕಾಣುವ ಶಾಲಾ ಮಕ್ಕಳ ಮೇಲೆ ಶಿಕ್ಷಕರಿಂದಲೇ ಅತ್ಯಾಚಾರವೆಸಗುವಂತೆ ಕೃತ್ಯಗಳು ನಡೆಯುತ್ತಿರುವುದು ಆಘಾತಕಾರಿಯಾಗಿದೆ. ನಿನ್ನೆಯಷ್ಟೇ ನಡೆದ ಬೆಂಗಳೂರಿನ ಖಾಸಗಿ ಶಾಲೆಯ ಪ್ರಾಂಶುಪಾಲ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಅರಗಿಸಿಕೊಳ್ಳಲಾಗುತ್ತಿಲ್ಲ. ಇದೀಗ 8ನೇ ತರಗತಿ ವಿದ್ಯಾರ್ಥಿನಿಗೆ ಶಿಕ್ಷಕನೇ ಲೈಂಗಿಕ ಕಿರುಕುಳ ನೀಡಿದ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ನಡೆದಿರುವುದು ಪೋಷಕರು ಮಕ್ಕಳನ್ನು ಶಾಲೆಗೆ ಕಳಿಸುವುದಕ್ಕೂ ಯೋಚಿಸುಂತೆ ಮಾಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಖಾಸಗಿ ಶಾಲೆಯೊಂದಲ್ಲಿ ಎಂಟನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಗೆ 35 ವರ್ಷದ ಶಿಕ್ಷಕನಿಂದ ನಿತ್ಯ ಕಿರುಕುಳ. ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ ನಡೆಸಿದ ಪರಿಣಾಮ ವಿದ್ಯಾರ್ಥಿನಿ 5 ತಿಂಗಳು ಗರ್ಭಿಣಿಯಾಗಿದ್ದಾಳೆ ಎಂದು ಹೇಳಲಾಗಿದೆ.

ಬೆಂಗಳೂರಿನಲ್ಲಿ ಅಮಾನುಷ ಘಟನೆ: ಬಾಲಕಿಯ ಮೇಲೆ 65 ವರ್ಷದ ಪ್ರಾಂಶುಪಾಲನಿಂದ ರೇಪ್‌

ಸದ್ಯ ಈ ಘಟನೆ ಸಂಬಂಧ ಆರೋಪಿ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ. ಇದೇ ರೀತಿ ಈ ಹಿಂದೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಕೊಟ್ಟಿದ್ದಾನೆಯೇ ಎಂಬ ಬಗ್ಗೆಯೂ ವಿಚಾರಣೆ ನಡೆಸಲಾಗುತ್ತಿದೆ. ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ.