ಮೃತರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಮೃತರ ವಯಸ್ಸು 40 ರಿಂದ 45 ವರ್ಷ ಎಂದು ಅಂದಾಜಿಸಲಾಗಿದೆ. ಇಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. 

ಮಂಡ್ಯ(ಫೆ.16): ತಬ್ಬಿಕೊಂಡ ಸ್ಥಿತಿಯಲ್ಲೇ ಜೋಡಿಯೊಂದರ ಮೃತದೇಹ‌ ಪತ್ತೆಯಾದ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರದ ಹಿರೋಡೆ ಕೆರೆ ದಡದ ಬಳಿ ಇಂದು(ಶುಕ್ರವಾರ) ನಡೆದಿದೆ. ಮಹಿಳೆ ಹಾಗೂ ಪುರುಷ ಇಬ್ಬರೂ ತಬ್ಬಿಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮೃತರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಮೃತರ ವಯಸ್ಸು 40 ರಿಂದ 45 ವರ್ಷ ಎಂದು ಅಂದಾಜಿಸಲಾಗಿದೆ. ಇಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. 

ಮಂಗಳೂರು: ಹೃದಯಾಘಾತದಿಂದ ಮಲಗಿದಲ್ಲೇ ವಿದ್ಯಾರ್ಥಿನಿ ಸಾವು

ಅನುಮಾನಸ್ಪದ ಸ್ಥಿತಿಯಲ್ಲಿ ಮಹಿಳೆ ಹಾಗೂ ಪುರುಷನ ಶವ ಪತ್ತೆಯಾಗಿದೆ. ಕೆರೆಯ ದಡದ ಕೆಸರಿನಲ್ಲಿ ಶವ ಪತ್ತೆಯಾದ ಹಿನ್ನೆಲೆಯಲ್ಲಿ ಹಲವು ಅನುಮಾನಗಳು ಮೂಡಿಸಿವೆ. ಮೂರು ದಿನಗಳ ಹಿಂದೆಯೆ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. 

ಸ್ಥಳೀಯರು ಬೆಳಿಗ್ಗೆ ಕೆರೆ ಬಳಿ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಪಾಂಡವಪುರ ಪಟ್ಟಣ ಠಾಣಾ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಪಾಂಡವಪುರ ಟೌನ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನೆ ತಿಳಿದು 2 ಗಂಟೆ ಕಳೆದರೂ‌ ಪೊಲೀಸರು ಸ್ಥಳಕ್ಕೆ ಬಂದಿಲ್ಲ.